ಡೈಲಿ ಕನ್ನಡ ನ್ಯೂಸ್ ಗೆ ಸ್ವಾಗತ ಬಿಬಿಎಂಪಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಬೆಂಗಳೂರು ಸ್ಥಳದಲ್ಲಿ ಗ್ರೂಪ್ ಡಿ ಪೌರಕಾರ್ಮಿಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಈ ಲೇಖನದಲ್ಲಿ ನಾವು ಬಿಬಿಎಂಪಿ ಬಿಡುಗಡೆ ಮಾಡಿರುವ ಹೊಸ ಅಧಿಸೂಚನೆಯ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ನೀಡುತ್ತೇನೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ವಿದ್ಯಾರ್ಹತೆ ಬೇಕಾಗಿಲ್ಲ.
ಹುದ್ದೆಗಳ ವಿವರಗಳು :
ಸಂಸ್ಥೆಯು ಒಟ್ಟು 11307 ಖಾಲಿ ಹುದ್ದೆಗಳಿಗೂ ಭರ್ಜರಿ ನೇಮಕಾತಿಯನ್ನು ಮಾಡುತ್ತಿದೆ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸ ಬಹುದು ಗ್ರೂಪ್ ಡಿ ಹುದ್ದೆಗಳು ಆಗಿರುತ್ತದೆ ಹುದ್ದೆಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಸೂಚನೆಯನ್ನು ನೋಡಿ.
ಸ್ಥಳೀಯ ವೃಂದದ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಒಟ್ಟು 905 ಖಾಲಿ ಹುದ್ದೆಗಳು :
- ಮಹಿಳಾ ಅಭ್ಯರ್ಥಿಗಳಿಗೆ ಒಟ್ಟು 300 ಹುದ್ದೆಗಳು
- ಗ್ರಾಮೀಣ ಅಭ್ಯರ್ಥಿಗಳಿಗೆ ಒಟ್ಟು 230 ಹುದ್ದೆಗಳು
- ಅಂಗವಿಕಲ ಅಭ್ಯರ್ಥಿಗಳಿಗೆ 48 ಹುದ್ದೆಗಳು
- ತೃತೀಯ ಲಿಂಗ ಅಭ್ಯರ್ಥಿಗಳಿಗೆ 13 ಹುದ್ದೆಗಳು
- ಇತರೆ 314 ಹುದ್ದೆಗಳು
ಉಳಿದ ಪೌರಕಾರ್ಮಿಕ ಗ್ರೂಪ್ ಡಿ ಹುದ್ದೆಗಳು 10,402 ಆಗಿದೆ :
- ಮಹಿಳಾ ಅಭ್ಯರ್ಥಿಗಳಿಗೆ 1660 ಹುದ್ದೆಗಳು
- ಗ್ರಾಮೀಣ ಅಭ್ಯರ್ತಿಗಳಿಗೆ 3436 ಹುದ್ದೆಗಳು
- ಅಂಗವಿಕಲ ಅಭ್ಯರ್ಥಿಗಳಿಗೆ 52 ಹುದ್ದೆಗಳು
- ತೃತೀಯ ಲಿಂಗ ಅಭ್ಯರ್ಥಿಗಳಿಗೆ 106 ಹುದ್ದೆಗಳು
- ಇತರೆ 3733 ಹುದ್ದೆಗಳು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಹತೆಗಳು :
ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸ್ಪಷ್ಟವಾಗಿ ಕನ್ನಡ ಭಾಷೆ ಮಾತನಾಡಲು ಗೊತ್ತಿರಬೇಕು. ಬಿಬಿಎಂಪಿ ತ್ಯಾಜ್ಯ ನಿರ್ವಹಣಾ ಕಾರ್ಯಗಳಲ್ಲಿ ಹೃದಯ ಹಾಲಿ ನೆರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಕೂಲಿ ಆಧಾರದ ಮೇಲೆ ಕನಿಷ್ಠ ಎರಡು ವರ್ಷಗಳಿಗಿಂತ ಕಡಿಮೆ ಅವಧಿಯಲ್ಲಿ ಸೇವೆಯನ್ನು ಸಲ್ಲಿಸಿರುವ ಅಭ್ಯರ್ಥಿಗಳಳಿಗೆ ಪ್ರಾಮುಖ್ಯತೆ ನೀಡಲಾಗುತ್ತದೆ . ಬೇಕಾಗಿರುವ ಅರ್ಹತೆಯ ಬಗ್ಗೆ ಯಾವುದಾದರೂ ಗೊಂದಲವಿದ್ದರೆ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಓದಬಹುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಬಿಬಿಎಂಪಿ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸನ್ನು 55 ವರ್ಷಗಳಿಗೆ ಇರಿಸಲಾಗಿದೆ. ಈ ವಯಸ್ಸಿನ ಕೆಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಮೇಲೆ ನೀಡಿರುವ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ಮಾತ್ರ ಬಿಬಿಎಂಪಿನ ಹೊಸ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ವೇತನದ ಮಾಹಿತಿಗಳು :
ಬಿಬಿಎಂಪಿನ ಗ್ರೂಪ್ ಡಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 17000 ದಿಂದ 28 ಸಾವಿರದವರೆಗೆ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ಸಾಮರ್ಥ್ಯದ ಮೇಲೆ ವೇತನವನ್ನು ನಿಗದಿಪಡಿಸಲಾಗುತ್ತದೆ.
ಅರ್ಜಿ ಶುಲ್ಕದ ಮಾಹಿತಿಗಳು :
ಗ್ರೂಪ್ ಡಿ ಹುದ್ದೆಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿಯನ್ನು ನೀಡಲಾಗಿದೆ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಉಚಿತವಾಗಿ ಸಲ್ಲಿಸಬಹುದು .
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನಗಳು :
- ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆ ಮಾಡಿರುವ ಗ್ರೂಪ್ ಡಿ ಹುದ್ದೆಗಳ ಅಧಿಸೂಚನೆಯನ್ನು ಡೌನ್ಲೋಡ್ ಮಾಡಬೇಕು.
- ನಂತರ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ. ನೀವು ಈ ಹುದ್ದೆಗಳಿಗೆ ಹಾರರ್ ಇದ್ರೆ ಎಲಿಜಿಬಲ್ ಇದ್ದರೆ ಕೆಳಗೆ ನೀಡಿರುವ ಅಪ್ಲಿಕೇಶನ್ ಫಾರ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ಫಾರಂ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಬಹುದು.
- ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆ ಭರ್ತಿ ಮಾಡಬೇಕು. ಅರ್ಜಿ ನಮೂನೆ ಬರ್ತಿ ಮಾಡುವಾಗ ಅಭ್ಯರ್ಥಿಗಳು ಅಭ್ಯರ್ಥಿಗಳ ಹೆಸರು ವಿಳಾಸ ವಿದ್ಯಾಭ್ಯಾಸದ ಮಾಹಿತಿ ಮೊಬೈಲ್ ಸಂಖ್ಯೆ ಇಮೇಲ್ ಐಡಿ ಮುಂತಾದ ಎಲ್ಲಾ ಅಗತ್ಯ ದಾಖಲೆಗಳನ್ನು ಯಾವುದೇ ತಪ್ಪುಗಳನ್ನು ಮಾಡದೆ ಬರ್ತಿ ಮಾಡಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಕೊನೆಯಲ್ಲಿ ಮತ್ತೊಮ್ಮೆ ವೆರಿಫಿಕೇಶನ್ ಮಾಡಿ ನೀಡಲಾಗಿರುವ ಎಲ್ಲಾ ಮಾಹಿತಿಗಳು ಸರಿಯಾಗಿ ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ.
- ನಂತರ ಕೊನೆಯದಾಗಿ ಅಪ್ಲಿಕೇಶನ್ ಫಾರ್ಮ್ ಜೊತೆ ಬೇಕಾಗಿರುವಾಗ ಅಗತ್ಯ ದಾಖಲೆಗಳ ಜೊತೆ ಕೆಳಗೆ ನೀಡಿರುವ ಸಂಸ್ಥೆಯಾ ಅಧಿಕೃತ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕಾಗುತ್ತದೆ.
- ಪೋಸ್ಟ್ ಕಳಿಸುವ ವಿಳಾಸ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗಣತಾಜ್ಯ ನಿರ್ವಹಣೆ ಕಚೇರಿಗೆ ಮೇ 15ರ ಒಳಗೆ ಕಳುಹಿಸಬೇಕಾಗುತ್ತದೆ. ಪೋಸ್ಟ್ ಮೂಲಕ ಕಳುಹಿಸುವ ವಿಳಾಸದ ಸಂಪೂರ್ಣ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೋಡಬಹುದು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಬಿಬಿಎಂಪಿ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ನಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ಗಮನಕ್ಕೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಪ್ರಮುಖ ವಿವರಗಳು :
ಬಿಬಿಎಂಪಿ ಬಿಡುಗಡೆ ಮಾಡಿರುವ 11000 ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ನಮೂನೆ ಬರ್ತಿ ಮಾಡಿ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು. ಈ ಹಿಂದೆ ಸಂಸ್ಥೆಯು ಏಪ್ರಿಲ್ 14 ರಂದು ಕೊನೆಯ ದಿನಾಂಕ ಎಂದು ತಿಳಿಸಿತ್ತು. ಆದರೆ ಸಾರ್ವತ್ರಿಕ ಲೋಕಸಭಾ ಚುನಾವಣೆ ಇರುವುದರಿಂದ ಈ ದಿನಾಂಕವನ್ನು ಮುಂದೂಡಲಾಗಿದೆ ಅಭ್ಯರ್ಥಿಗಳಿಗೆ 15 ರವರೆಗೆ ಅರ್ಜಿ ಸಲ್ಲಿಸಲಾವಕಾಶ ನೀಡಲಾಗಿದೆ. ಉಳಿದ ಎಲ್ಲಾ ಅಂಶಗಳು ಮೊದಲು ನೀಡಿದ ಸೂಚನೆಯಂತೆ ಇರುತ್ತದೆ ಇದರಲ್ಲಿ ಯಾವುದೇ ರೀತಿಯ ಬದಲಾವಣೆಗಳು ಇರುವುದಿಲ್ಲ.
ಮಾಜಿ ಸೈನಿಕರು ಗ್ರಾಮೀಣ ಅಭ್ಯರ್ಥಿಗಳು ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅಂಗವಿಕಲ ಮತ್ತು ವಿಕಲಚೇತನ ಅಭ್ಯರ್ಥಿಗಳು ಮತ್ತು ತೃತೀಯಲಿಂಗ ಅಭ್ಯರ್ಥಿಗಳಿಗೆ ಹುದ್ದೆಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಅಭ್ಯರ್ಥಿಗಳ್ ಅರ್ಜಿ ಸಲ್ಲಿಸುವಾಗ ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಬೇಕಾಗುತ್ತದೆ. ಯಾವುದೇ ನೀಡಿದ ದಾಖಲೆಗಳು ತಪ್ಪಿದ್ದರೆ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಮೀಸಲಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಮೀಸಲಾತಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳ ಮಾಹಿತಿಯನ್ನು ನೀಡಲು ನೀಡಬೇಕು. ಯೋಜನೆಗಳಿಂದ ನಿರಾಶ್ರಿತರಾದ ಅಭ್ಯರ್ಥಿಗಳಿಗೂ ಮೀಸಲಾತಿಯನ್ನು ನೀಡಲಾಗಿದೆ.
ಅಧಿಕೃತ ಅಧಿಸೂಚನೆಯಲ್ಲಿ ನೀಡಿದಂತೆ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಸಂದರ್ಶನವನ್ನು ನಿಗದಿಪಡಿಸಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಹುದ್ದೆ ಬದಲಾವಣೆ ಅವಕಾಶ ಇರುವುದಿಲ್ಲ. ಅಭ್ಯರ್ಥಿಗಳ ಮೂಲದ ದಾಖಲೆಗಳನ್ನು ಪರಿಶೀಲನೆ ಮಾಡುವ ಸಮಯದಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕಡ್ಡಾಯವಾಗಿ ಹಾಜರಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದೈಹಿಕವಾಗಿ ಆರೋಗ್ಯವಂತ ಮತ್ತು ಸದೃಢ ಆಗಿರುವ ಬಗ್ಗೆ ವೈದ್ಯಕೀಯ ಪ್ರಮಾಣ ಪತ್ರವನ್ನು ಪಡೆದುಕೊಂಡು ಮೂಲ ದಾಖಲತಿ ಪರಿಶೀಲನೆ ಮಾಡುವ ಸಮಯದಲ್ಲಿ ನೀಡಬೇಕಾಗುತ್ತದೆ ಗಮನದಲ್ಲಿಡಿ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಲಗತ್ತು ಮಾಡಿರುವ ಮಾಹಿತಿಗಳು ಸರಿಯಾಗಿಲ್ಲದಿದ್ದರೆ ಅಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ತಪ್ಪು ಮಾಹಿತಿ ಸುಳ್ಳು ಮಾಹಿತಿ ಅಥವಾ ವಾಸ್ತವವನ್ನು ಮರೆಮಾಚುವಂತಹ ಅನುಚಿತ ಮಾರ್ಗವನ್ನು ಅನುಸರಿಸಿದರೆ ಅಂತ ಅಂತಹ ಅಭ್ಯರ್ಥಿಗಳ ವಿರುದ್ಧ ಅಭ್ಯರ್ಥಿಗಳನ್ನು ಶಿಸ್ತು ಕ್ರಮವನ್ನು ಕೈಗೊಳ್ಳಲಾಗುವುದು ಮತ್ತು ಅಂತವರ ಅರ್ಜಿ ನಮೂನೆಯನ್ನು ರದ್ದು ಪಡಿಸಲಾಗುತ್ತದೆ. ಅದಿ ಸೂಚನೆ ಹೆಚ್ಚಿನ ಮಾಹಿತಿಗಾಗಿ ಕೆಲವೇ ಇಲ್ಲಿ ನೀಡಿರುವ ಬಿಬಿಎಂಪಿನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಭ್ಯರ್ಥಿಗಳ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
ಓದುಗರ ಗಮನಕ್ಕೆ :
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಬಿಬಿಎಂಪಿ ಅಥವಾ ಯಾವುದೇ ರೀತಿಯ ಸರ್ಕಾರಿ ಅಥವಾ ಬೇರೆ ಜಾಬ್ ಗಳನ್ನು ನೀಡುವುದಿಲ್ಲ. ನಾವು ಕೇವಲ ಸಂಸ್ಥೆ ಬಿಡುಗಡೆ ಮಾಡಿರುವ ಅಥವಾ ಸರ್ಕಾರ ಹೊರಡಿಸುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ನಮಗೂ ಬಿಬಿಎಂಪಿ ಅಥವಾ ಸರ್ಕಾರಕ್ಕೆ ಯಾವುದೇ ರೀತಿಯ ಸಂಬಂಧಗಳು ಇರುವುದಿಲ್ಲ. ನಾವು ಯಾವುದೇ ರೀತಿಯ ನೇರ ಜಾಬ್ ಗಳನ್ನು ನೀಡುವುದಿಲ್ಲ. ನಾವು ಕೇವಲ ಜಾಬ್ ಅಪ್ಡೇಟ್ಗಳನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ ಆದರಿಂದ ಓದುಗರು ಇದನ್ನು ಗಮನಿಸಬೇಕು.
ನಮ್ಮ ವೆಬ್ ಸೈಟ್ ನಲ್ಲಿ ಬರುವ ಎಲ್ಲಾ ಮಾಹಿತಿಗಳು ನಿಖರವಾಗಿ ಮತ್ತು ಸತ್ಯವಾಗಿದೆ. ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುವುದಿಲ್ಲ. ನಾವು ಅಧಿಕೃತ ಮಾಹಿತಿಗಳನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಮಾಹಿತಿಯನ್ನು ನೀಡುತ್ತೇವೆ. ಆದ್ದರಿಂದ ನೀವು ನಿಖರವಾದ ಮಾಹಿತಿಯನ್ನು ನಮ್ಮ ವೆಬ್ಸೈಟ್ನಲ್ಲಿ ಪಡೆಯಬಹುದಾಗಿದೆ. ನಮ್ಮ ವೆಬ್ ಸೈಟ್ ನಲ್ಲಿ ಪ್ರತಿದಿನ ನಾವು ಸರ್ಕಾರಿ ನೇಮಕಾತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಆಸಕ್ತಿ ಇರುವವರು ನಮ್ಮ ವೆಬ್ಸೈಟ್ ಅನ್ನು ಪ್ರತಿದಿನ ಭೇಟಿ ಮಾಡಬಹುದು.
ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು. ಈ ಲೇಖನ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪನ್ನು ಜಾಯಿನ್ ಆಗಬಹುದು ಧನ್ಯವಾದಗಳು.
News source : www.bbmp.gov.in
