ಕೆನರಾ ಬ್ಯಾಂಕ್ ನೇಮಕಾತಿ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – Canara bank recruitment

ನಮಸ್ಕಾರ ಸ್ನೇಹಿತರೆ ಕೆನರಾ ಬ್ಯಾಂಕ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕ ಸ್ಥಳದಲ್ಲಿ ಅಕೌಂಟ್ಸ್ ಅಂಡ್ ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತವಾಗಿ ಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಲೇಖನದಲ್ಲಿ ನಾವು ಕೆನರಾ ಬ್ಯಾಂಕ್ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ರೀತಿ ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನದ ಮಾಹಿತಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸುತ್ತೇನೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ.

ಹುದ್ದೆಗಳ ವಿವರಗಳು :

ಕೆನರಾ ಬ್ಯಾಂಕ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅಕೌಂಟೆಂಗ್ ಅಡ್ಮಿನಿಸ್ಟ್ರೇಷನ್ ಸೆಕ್ರೆಟರಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಒಟ್ಟು ಒಂದು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿಕಾಂ ಪದವಿ ಪಡೆದಿರಬೇಕು. ಇದರ ಜೊತೆ ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಲಾವಕಾಶ ಪಡೆಯುತ್ತಾರೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆಯ ಕನಿಷ್ಠ ವಯಸ್ಸು 21 ವರ್ಷ ಆಗಿರಬೇಕು ಮತ್ತು ಗರಿಷ್ಠ ವಯಸ್ಸು ಈ ಕೆಳಗಿನಂತಿದೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳ ಗರಿಷ್ಠ ವಯಸ್ಸು 25 ವರ್ಷ ಆಗಿರಬೇಕು. ಇನ್ನು ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳ ಗರಿಷ್ಠ ವಯಸ್ಸು 28 ವರ್ಷ ಆಗಿರಬೇಕು.

ಅರ್ಜಿ ಶುಲ್ಕದ ಮಾಹಿತಿಗಳು :

ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಕೆಟಗರಿ ಅಭ್ಯರ್ಥಿಗಳು ಮತ್ತು ಓಬಿಸಿ ಅಭ್ಯರ್ಥಿಗಳ ಅರ್ಜಿ ಶುಲ್ಕ 500 ರೂಪಾಯಿ ಆಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ರೂ.300 ಗಳ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿ ಮಾಡಬೇಕಾಗುತ್ತದೆ. ಇದರ ಹೆಚ್ಚಿನ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದು.

ಆಯ್ಕೆಯ ವಿಧಾನ :

ಅಭ್ಯರ್ಥಿಗಳ ವಿದ್ಯಾಭ್ಯಾಸದ ಮಾಹಿತಿ ಹೆಚ್ಚಿನ ಅನುಭವದ ಮಾಹಿತಿ ಇತರೆ ಆಕ್ಟಿವಿಟಿ ಮುಂತಾದ ಮಾಹಿತಿಗಳನ್ನು ಗಮನದಲ್ಲಿಟ್ಟುಕೊಂಡು ಅಭ್ಯರ್ಥಿಗಳ ಹೆಸರನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೊನೆಯ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿ ಮಾಡಲಾಗುತ್ತದೆ. ಸಂದರ್ಶನಕ್ಕೆ ಭಾಗಿಯಾಗಲು ಅಭ್ಯರ್ಥಿಗಳಿಗೆ ಇ-ಮೇಲ್ ಮೂಲಕ ಸಂದೇಶವನ್ನು ಸಂಸ್ಥೆಯು ಕಳುಹಿಸುತ್ತದೆ. ಪ್ರಕ್ರಿಯೆಯ ಸಂಕ್ಷಿಪ್ತ ಮಾಹಿತಿಯನ್ನು ಸಂಸ್ಥೆ ಬಿಡುಗಡೆ ಮಾಡಿರುವ ನೋಟಿಫಿಕೇಶನ್ ಅಲ್ಲಿ ನೀಡಲಾಗಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು :

  • ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಫ್ಲೈನ್ ಮೂಲಕ ಅವಕಾಶ ಇರುತ್ತದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
  • ಮೊದಲಿಗೆ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ. ಇತ್ತೀಚಿಗೆ ಬಿಡುಗಡೆ ಆಗಿರುವ ಅಧಿಕೃತ ಅಧಿಸೂಚನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ಸಂಪೂರ್ಣ ಓದಿದ ನಂತರ ಆ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಅರ್ಹ ಇದ್ದರೆ ಅರ್ಜಿ ನಮೂನೆಯ ಪಿಡಿಎಫ್ ಕಾಪಿಯನ್ನು ಡೌನ್ಲೋಡ್ ಮಾಡಬೇಕು.
  • ನಂತರ ಪ್ರಿಟ್ ಔಟ್ ತೆಗೆದುಕೊಂಡು ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಕೊನೆಯ ಹಂತದಲ್ಲಿ ಸಂಸ್ಥೆಯು ತಿಳಿಸಿದ ವಿಳಾಸಕ್ಕೆ ಅರ್ಜಿ ನಮೂನೆಯ ಜೊತೆ ಬೇಕಾಗಿರುವ ಅಗತ್ಯ ದಾಖಲೆಗಳನ್ನು ಪೋಸ್ಟ್ ಅಥವಾ ಕೋರಿಯರ್ ಮೂಲಕ ಕಳುಹಿಸಬೇಕು.
  • ಪೋಸ್ಟ್ ಮಾಡುವಾಗ ಅಭ್ಯರ್ಥಿಗಳ ಗಮನಕ್ಕೆ ಕೇಳಲಾಗಿರುವ ಎಲ್ಲಾ ದಾಖಲೆಗಳನ್ನು ಪೋಸ್ಟ್ ಮೂಲಕ ನೀಡಬೇಕಾಗುತ್ತದೆ. ಯಾವುದೇ ಮಾಹಿತಿಗಳು ಕೊರತೆಯಾದರೆ ಅಂತಹ ಅರ್ಜಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.

ಆಯ್ಕೆಯಾದ ಅಭ್ಯರ್ಥಿಗಳ ವೇತನ ವಿವರ :

ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ ಮೂರು ಲಕ್ಷದಿಂದ ಮೂರುವರೆ ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ ವೇತನವು ಸಿಟಿಸಿ ಅಲ್ಲಿ ಇರುತ್ತದೆ. ಅಭ್ಯರ್ಥಿಗಳಿಗೆ ಸಿ ಎಲ್ ಪಿ ಎಲ್ ಎಲ್ ಎಫ್ ಸಿ ರಜೆಗಳನ್ನು ನೀಡಲಾಗುತ್ತದೆ.

ಉದ್ಯೋಗ ವರ್ಷಗಳು :

ಆಯ್ಕೆಯಾದ ಅಭ್ಯರ್ಥಿಗಳು 12 ತಿಂಗಳ ಕಾಲ ಕೆಲಸ ಮಾಡಲು ಅವಕಾಶ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವವರ ಗಮನಕ್ಕೆ :

  • ಅರ್ಜಿ ನಮೂನೆಯು ಇನ್ ಕಂಪ್ಲೀಟ್ ಆಗಿದ್ದರೆ ಅಂತ ಅರ್ಜಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ ಅಂತಹ ಅರ್ಜಿಗಳನ್ನು ರಿಜೆಕ್ಟ್ ಮಾಡಲಾಗುತ್ತದೆ.
  • ಒಂದು ಬಾರಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿದ ನಂತರ ಯಾವುದೇ ಕಾರಣಕ್ಕೂ ಅರ್ಜಿ ಶುಲ್ಕವನ್ನು ರಿಫಂಡ್ ಮಾಡಲಾಗುವುದಿಲ್ಲ.
  • ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಯಾವುದೇ ಸುಳ್ಳು ಮಾಹಿತಿ ಅಥವಾ ತಪ್ಪು ಮಾಹಿತಿಗಳನ್ನು ನೀಡಿದರೆ ಅವರ ಅರ್ಜಿಗಳನ್ನು ರಿಜೆಕ್ಟ್ ಮಾಡಲಾಗುವುದು ಮತ್ತು ಕ್ರಿಮಿನಲ್ ಪ್ರಾಸೆಕ್ಯೂಷನ್ ಮಾಡಲಾಗುತ್ತದೆ.
  • ಅಭ್ಯರ್ಥಿಗಳು ತಮ್ಮ ಸ್ವಂತ ಹಣದಿಂದ ನೇರ ಸಂದರ್ಶನಕ್ಕೆ ಭೇಟಿ ಆಗಬೇಕಾಗುತ್ತದೆ.
  • ಅಭ್ಯರ್ಥಿಗಳು ನೇರ ಸಂದರ್ಶನ ನಡೆಯುವ ಸಮಯದಲ್ಲಿ ತಮ್ಮ ಎಲ್ಲಾ ವರ್ಜಿನಲ್ ಡಾಕ್ಯುಮೆಂಟನ್ನು ನೀಡಬೇಕಾಗುತ್ತದೆ. ಡಾಕುಮೆಂಟ್ ವೆರಿಫಿಕೇಷನ್ ಮಾಡುವ ಸಂದರ್ಭದಲ್ಲಿ ಯಾವುದೇ ತಪ್ಪು ಮಾಹಿತಿ ಕಂಡು ಬಂದರೆ ಅಂತಹ ಅರ್ಜಿಗಳನ್ನು ರಿಜೆಕ್ಟ್ ಮಾಡಲಾಗುತ್ತದೆ.
  • ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಭಾಗಿಯಾಗುವ ಸಮಯದಲ್ಲಿ ಅಭ್ಯರ್ಥಿಗಳು ಮೆಡಿಕಲಿ ಫಿಟ್ ಸರ್ಟಿಫಿಕೇಟ್ ಅನ್ನು ನಿಮ್ಮ ಹತ್ತಿರದ ಆರೋಗ್ಯ ಕೇಂದ್ರದಿಂದ ಪಡೆದು ತಂದಿರಬೇಕು.
  • ಅಭ್ಯರ್ಥಿಗಳು ಕೆಲಸ ಬಿಡುವ ಮುನ್ನ ಒಂದು ತಿಂಗಳ ಮುಂಚೆ ನೋಟಿಸ್ಪಿರೇಡ್ ನೀಡಬೇಕಾಗುತ್ತದೆ.
  • ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಉದ್ಯೋಗ ಸ್ಥಳ ಬೆಂಗಳೂರು ಆಗಿರುತ್ತದೆ.

ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಜಾಬುಗಳನ್ನು ನೀಡುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ನಾವು ಯಾವುದೇ ಸುಳ್ಳು ಸುದ್ದಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ ಕೇವಲ ನಿಖರ ಮತ್ತು ನಿಜ ಸುದ್ದಿಗಳನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪಿಡಿಎಫ್ ಅನ್ನು ಸಂಪೂರ್ಣವಾಗಿ ಓದಿಯೇ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸುವಾಗ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ.

ನಮ್ಮ ಡೈಲಿ ಕನ್ನಡ ನ್ಯೂಸ್ ವೆಬ್ಸೈಟ್ನಲ್ಲಿ ನಾವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಎಲ್ಲಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್‌ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ. ಹೆಚ್ಚಿನ ಮಾಹಿತಿ ಪಡೆಯಲು ನಮ್ಮ ಅಧಿಕೃತ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪನ್ನು ಜಾಯಿನ್ ಆಗಬಹುದು ಧನ್ಯವಾದಗಳು.

By sapalyamanish

With five years of experience in news content writing, Mahesha has a proven track record of delivering high-quality journalism. Having worked with FastNews, Job Updates, and InfoKannada, they specialize in producing timely and insightful articles that engage and inform readers

Related Post

Leave a Reply

Your email address will not be published. Required fields are marked *