SBI ನೇಮಕಾತಿ 2024, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಇಂದೇ ಅರ್ಜಿ ಸಲ್ಲಿಸಿ – SBI recruitment
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚಿಗೆ ಭಾರತದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ತನ್ನ ಅಧಿಕೃತ ಅಧಿಸೂಚನೆಯಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಒಟ್ಟು 150 ಹುದ್ದೆಗಳಿಗೆ ಭಾರತದ ವಿವಿಧ ಸ್ಥಳಗಳಲ್ಲಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಈ ಲೇಖನದಲ್ಲಿ ನಾವು ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ ಅರ್ಜಿ ಶುಲ್ಕದ ಮಾಹಿತಿ ಅರ್ಜಿ ಸಲ್ಲಿಸುವ ರೀತಿ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಈ ಲೇಖನವನ್ನು ಪೂರ್ತಿಯಾಗಿ ಓದಿ.
ಖಾಲಿ ಇರುವ ಹುದ್ದೆಗಳ ಸಂಖ್ಯೆ :
ಒಟ್ಟು ಭಾರತದ 150 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ ಒಟ್ಟು 61 ಖಾಲಿ ಹುದ್ದೆಗಳು ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಒಟ್ಟು 25 ಖಾಲಿ ಹುದ್ದೆಗಳು ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಒಟ್ಟು 11 ಖಾಲಿ ಹುದ್ದೆಗಳು, ಒಟ್ಟು 38 ಖಾಲಿ ಹುದ್ದೆಗಳು ಅರ್ಜಿ ಸಲ್ಲಿಸಲು ಬಯಸುವ ಈಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಒಟ್ಟು 15 ಖಾಲಿ ಹುದ್ದೆಗಳು ಇರುತ್ತದೆ. ಖಾಲಿ ಇರುವ ಹುದ್ದೆಗಳ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ಡೌ ನ್ಲೋಡ್ ಮಾಡಿ ಸಂಪೂರ್ಣ ಓದಬಹುದು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯ ಮಾಹಿತಿಗಳು :
ಈ ಮೇಲೆ ನೀಡಿರುವ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರ ಕನಿಷ್ಠ ವಯಸ್ಸು 23 ವರ್ಷ ಆಗಿರಬೇಕು. ಅರ್ಜಿ ಸಲ್ಲಿಸಲು ಬಯಸುವವರ ಗರಿಷ್ಠ ವಯಸ್ಸು 32 ವರ್ಷ ಮೀರಿರಬಾರದು. ಈ ವಯಸ್ಸಿನ ಒಳಗೆ ಬರುವ ಅಭ್ಯರ್ಥಿಗಳು ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ವಿನಾಯಿತಿಯನ್ನು ನೀಡಲಾಗಿದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 3 ವರ್ಷಗಳ ವಯಸ್ಸಿನ ಮಿತಿಯಲ್ಲಿ ವಿನಾಯಿತಿಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ :
ಮಾಹಿತಿಗಳು ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಸಂಸ್ಥೆಯ ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯಲ್ಲಿ ನೀಡಿರುವಂತೆ ದಿನಾಂಕ 31 ಡಿಸೆಂಬರ್ 2023ರ ಒಳಗಾಗಿ ಅಭ್ಯರ್ಥಿಗಳು ಪಾಸ್ ಆಗಿರಬೇಕು. ಈ ದಿನಾಂಕದ ಮುನ್ನ ಪಾಸ್ ಆಗಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಲ ಅವಕಾಶ ಪಡೆಯುತ್ತಾರೆ. ಇದರ ಜೊತೆ ಅಭ್ಯರ್ಥಿಗಳಿಗೆ ಕನಿಷ್ಠ ಎರಡು ವರ್ಷಗಳ ಕೆಲಸದ ಅನುಭವ ಹೊಂದಿರಬೇಕು. ಅಭ್ಯರ್ಥಿಗಳಿಗೆ ಟ್ರೇಡ್ ಫೈನಾನ್ಸ್ ಪ್ರೊಸೆಸಿಂಗ್ ಎಕ್ಸಿಕ್ಯೂಟ್ ಸೂಪರ್ವೈಸರ್ ಹುದ್ದೆಯನ್ನು ಯಾವುದೇ ಕಮರ್ಷಿಯಲ್ ಬ್ಯಾಂಕ್ ನಲ್ಲಿ ಕೆಲಸ ಮಾಡಿರುವ ಅನುಭವ ಹೊಂದಿರಬೇಕು. ಇವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಅರ್ಜಿ ಶುಲ್ಕದ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 250ಗಳ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಅರ್ಜಿ ನಮೂನೆ ಭರ್ತಿ ಮಾಡುವಾಗ ಆನ್ಲೈನ್ ಮೂಲಕ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಕ್ರೆಡಿಟ್ ಬ್ಯಾಂಕಿಂಗ್ ಅಥವಾ ಯುಪಿಐ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಲು ಸರ್ಕಾರ ಅವಕಾಶ ನೀಡಿದೆ.
ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ಈ ಮೇಲೆ ನೀಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಯಸುವ ಅಭ್ಯರ್ಥಿಗಳಿಗೆ ಮೊದಲಿಗೆ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪೂರ್ವಭಾವಿ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಮುಂದಿನ ಹಂತದಲ್ಲಿ ಅಂದರೆ ಎರಡನೆಯ ಹಂತದಲ್ಲಿ ನಡೆಯುವ ಮುಖ್ಯ ಪರೀಕ್ಷೆಯಲ್ಲಿ ಅವಕಾಶ ಪಡೆಯುತ್ತಾರೆ. ಈ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕೊನೆಯ ಹಂತದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬೇಕು. ನೇರ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂಸ್ಥೆಯ ಅಧಿಕೃತ ಅಧಿಸೂಚನೆಯಂತೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಕ್ರಮಗಳು :
- ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೊದಲಿಗೆ ಅಭ್ಯರ್ಥಿಗಳು ಎಸ್ಬಿಐನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಕೆರಿಯರ್ ಸೆಕ್ಷನ್ ಅನ್ನು ಓಪನ್ ಮಾಡಿದಾಗ ಅಭ್ಯರ್ಥಿಗಳಿಗೆ ಇತ್ತೀಚಿಗೆ ಬಿಡುಗಡೆಯಾಗರುವ ಅಧಿಕೃತ ಸೂಚನೆ ಕಾಣಬಹುದು.
- ಮೊದಲಿಗೆ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆ ಭರ್ತಿ ಮಾಡಬೇಕು.
- ಅಭ್ಯರ್ಥಿಗಳ ಅರ್ಜಿ ನಮೂನೆ ಭರ್ತಿ ಮಾಡುವಾಗ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕು. ಯಾವುದೇ ತಪ್ಪು ಸುಳ್ಳು ಮಾಹಿತಿಗಳನ್ನು ಭರ್ತಿ ಮಾಡಿದರೆ ಅಂತ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
- ಅಭ್ಯರ್ಥಿಗಳು ಕೊನೆಯಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಅರ್ಜಿ ನಮೂನೆಯನ್ನು ಸಬ್ಮಿಟ್ ಮಾಡಬಹುದು.
ಅಭ್ಯರ್ಥಿಗಳ ವೇತನದ ಮಾಹಿತಿಗಳು :
ಅಧಿಕೃತ ಅನುಸೂಚನೆಯಲ್ಲಿ ಇಡಲಾಗಿರುವಂತೆ ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ 48 69 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ವೇತನದ ಜೊತೆ ಇತರೆ ಸೌಲಭ್ಯಗಳು ದೊರೆಯುತ್ತದೆ
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ :
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 27 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕ ಜೂನ್ 27 ಆಗಿರುತ್ತದೆ ಮೊದಲನೇ ಹಂತದಲ್ಲಿ ನಡೆಯುವ ಪೂರ್ವಭಾವಿ ಪರೀಕ್ಷಾ ದಿನಾಂಕ ಸೆಪ್ಟೆಂಬರ್ ತಿಂಗಳಲ್ಲಿ ಇರುತ್ತದೆ.
ಅರ್ಜಿ ಸಲ್ಲಿಸುವವರ ಗಮನಕ್ಕೆ :
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ತಮ್ಮ ಜಾತಿಯ ಅನುಸಾರ ಸರ್ಟಿಫಿಕೇಟ್ ಅನ್ನು ನೀಡಬೇಕಾಗುತ್ತದೆ. ಅಭ್ಯರ್ಥಿಗಳ ಉದ್ಯೋಗ ಸ್ಥಳವು ಹೈದರಾಬಾದ್ ಮತ್ತು ಕೊಲ್ಕತ್ತಾ ಆಗಿರುತ್ತದೆ. ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಹೆಸರನ್ನು ಶಾರ್ಟ್ ಲಿಸ್ಟ್ ಮಾಡಿ ಮುಂದಿನ ಹಂತದಲ್ಲಿ ನೇರ ಸಂದರ್ಶನ ನಡೆಸಲಾಗುತ್ತದೆ. ಅಭ್ಯರ್ಥಿಗಳ ಅರ್ಜಿ ಸಲ್ಲಿಸುವ ಯಾವುದೇ ಸ್ಪೆಲ್ಲಿಂಗ್ ಮಿಸ್ಟೇಕ್ ಮಾಡಿದ್ದಲ್ಲಿ ಎಡಿಟ್ ಮಾಡಲು ಅವಕಾಶ ಇರುವುದಿಲ್ಲ. ಅಂತಹ ಹೃದಯಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ ಮತ್ತು ರಿಜೆಕ್ಟ್ ಮಾಡಲಾಗುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ತಾವು ನೀಡಿರುವ ಎಲ್ಲಾ ಮಾಹಿತಿಗಳು ಸರಿಯಾಗಿದೆ ಎಂಬುದನ್ನು ಮತ್ತೊಮ್ಮೆ ಪರಿಶೀಲಿಸಿ ನಂತರ ಮಡುವುದು ಉತ್ತಮವಾಗಿದೆ.
ನಾವು ಯಾವುದೇ ಜಾಬ್ಗಳನ್ನು ನೀಡುವುದಿಲ್ಲ. ನಮಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇರುವುದಿಲ್ಲ ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಿ. ತಾವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಇದ್ದೀರಾ ಎಂಬುದನ್ನು ಸರಿಯಾಗಿ ನೋಡಿ. ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿ ಕೊರತೆವಾದರೆ ಅದಕ್ಕೆ ನಾವು ಜವಾಬ್ದಾರ ಆಗಿರುವುದಿಲ್ಲ.
ನಮ್ಮ ಡೈಲಿ ಕನ್ನಡ ನ್ಯೂಸ್ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಯಲ್ಲಿ ಖಾಲಿ ಇರುವ ಪ್ರಮುಖ ಹುದ್ದೆಗಳ ಮಾಹಿತಿಯನ್ನು ನೀಡುತ್ತೇವೆ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ ಸೈಟನ್ನು ಭೇಟಿ ನೀಡಬಹುದು. ಈ ಲೇಖಕರ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಲೇಖನ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪು ಜಾಯಿನ್ ಆಗಬಹುದು ಧನ್ಯವಾದಗಳು.
