Rural bank recruitment – ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ, ಆಫೀಸ್ ಅಸಿಸ್ಟೆಂಟ್, ಆಫೀಸರ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ
ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಮಾಡಲು ತನ್ನ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿರುತ್ತದೆ. ಒಟ್ಟು 586 ಖಾಲಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಿರುತ್ತದೆ. ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನದ ಮಾಹಿತಿ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಈ ಲೇಖನವನ್ನು ಕೊನೆಯವರೆಗೆ ಓದಿ.
ಖಾಲಿ ಇರುವ ಹುದ್ದೆಗಳ ವಿವರಗಳು :
ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 200 ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ ಮತ್ತು ಒಟ್ಟು 386 ಆಫೀಸರ್ ಸ್ಕೇಲ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಒಟ್ಟು 586 ಖಾಲಿ ಹುದ್ದೆಗಳು ಇರುತ್ತದೆ. ಅಭ್ಯರ್ಥಿಗಳು ಈ ಹುದ್ದೆಗಳಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಪದವಿ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಹುದ್ದೆಗಳ ಹೆಚ್ಚಿನ ಮಾಹಿತಿ ಪಡೆಯಲು ಬಯಸುವ ಅಭ್ಯರ್ಥಿಗಳು ಸಂಸ್ಥೆಗೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪಿಡಿಎಫ್ ಅನ್ನು ಸಂಪೂರ್ಣವಾಗಿ ಓದಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಅಭ್ಯರ್ಥಿಗಳ ವಯಸ್ಸಿನ ಮಿತಿಯ ಮಾಹಿತಿಗಳು :
ಸಂಸ್ಥೆ ಬಿಡುಗಡೆ ಮಾಡಿರುವ ಅಧಿಸೂಚನೆಯಂತೆ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿಯು 18 ವರ್ಷ ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಗರಿಷ್ಠ ವಯಸ್ಸು 28 ವರ್ಷ ಆಗಿರುತ್ತದೆ. ಆಫೀಸ್ ಸ್ಕೇಲ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿಯು 18 ವರ್ಷ ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸಿನ ಮಿತಿಯು 30 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಲ ಅವಕಾಶ ಪಡೆಯುತ್ತಾರೆ.
ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ವಿನಾಯಿತಿ ನೀಡಲಾಗಿದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಓಬಿಸಿ ಅಭ್ಯರ್ಥಿಗಳಿಗೆ ಕನಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ವಿನಾಯಿತಿಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಪಿಡಬ್ಲ್ಯೂ ಬಿ ಡಿ ಅಂದರೆ ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ವಿನಾಯಿತಿಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಕೆಯ ಸರ್ಕಾರಿ ಅರ್ಜಿ ಶುಲ್ಕದ ಮಾಹಿತಿಗಳು :
1. ಆಫೀಸರ್ ಹುದ್ದೆಗಳು : ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರ ಸರ್ಕಾರಿ ಅರ್ಜಿ ಶುಲ್ಕವನ್ನು ನೀಡಲಾಗಿದೆ. ಮೊದಲಿಗೆ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 175 ಗಳ ಅರ್ಜಿ ಶುಲ್ಕ ಇರುತ್ತದೆ. ಇನ್ನು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ 850 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ.
2. ಆಫೀಸ್ ಅಸಿಸ್ಟೆಂಟ್ ಹುದ್ದೆಗಳು : ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 175 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ 850 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಸರ್ಕಾರಿ ಅರ್ಜಿ ಶುಲ್ಕವನ್ನು ಅರ್ಜಿ ನಮೂನೆ ಭರ್ತಿ ಮಾಡುವಾಗ ಆನ್ಲೈನ್ ಮೂಲಕ ಪಾವತಿ ಮಾಡಲು ಅವಕಾಶವನ್ನು ನೀಡಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ಪ್ರೀಮಿಲನರಿ ಪ್ರಾಥಮಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪ್ರಾಥಮಿಕ ಲಿಖಿತ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ತೇರ್ಗಡೆ ಮಾಡುತ್ತಾರೆ. ಮುಂದಿನ ಹಂತದಲ್ಲಿ ಮೇನ್ಸ್ ಎಕ್ಸಾಮಿನೇಷನ್ ನಡೆಸಲಾಗುತ್ತದೆ ಈ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೊನೆಯ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಿ ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯಂತೆ ಸೂಕ್ತ ಅಭ್ಯರ್ತಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿ ಸೂಚನೆಯನ್ನು ನೋಡಿ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು :
- ಗ್ರಾಮೀಣ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಮೊದಲಿಗೆ ಅಭ್ಯರ್ಥಿಗಳು ಕರ್ನಾಟಕ ಗ್ರಾಮೀಣ ಬ್ಯಾಂಕ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆ ಆಗಿರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು.
- ನೀವು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯಂತೆ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಇದ್ದರೆ ಆನ್ಲೈನ್ ಅರ್ಜಿ ನಮೂನೆಯನ್ನು ಓಪನ್ ಮಾಡಿ ಅರ್ಜಿ ನಮೂನೆ ಭರ್ತಿ ಮಾಡಬೇಕು.
- ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಯಾವುದೇ ತಪ್ಪುಗಳನ್ನು ಮಾಡಬಾರದು. ಯಾವುದೇ ತಪ್ಪು ಮಾಹಿತಿ ಅಥವಾ ಸುಳ್ಳು ಮಾಹಿತಿಗಳನ್ನು ಭರ್ತಿ ಮಾಡಿದರೆ ಅಂತ ಅರ್ಜಿ ನಮೂನೆಯನ್ನು ನೇಮಕಾತಿಯಿಂದ ರಿಜೆಕ್ಟ್ ಮಾಡುತ್ತಾರೆ.
- ನಂತರ ಕೊನೆಯಲ್ಲಿ ಅಭ್ಯರ್ಥಿಗಳು ಸಂಸ್ಥೆಯು ನಿಗದಿಪಡಿಸಿರುವ ಸರ್ಕಾರಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ತಮ್ಮ ಅರ್ಜಿ ನಮೂನೆಯನ್ನು ಸಬ್ಮಿಟ್ ಬಟನ್ ಒತ್ತುವ ಮೂಲಕ ಸಲ್ಲಿಸಬೇಕು.
- ನಂತರ ಕೊನೆಯಲ್ಲಿ ತಮ್ಮ ಭವಿಷ್ಯತ್ತಿನ ಉಪಯೋಗಕ್ಕಾಗಿ ಅರ್ಜಿ ನಮೂನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಬ್ಯಾಂಕ್ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಓಪನ್ ಆಗಿರುತ್ತದೆ. ಇನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 27 ಆಗಿರುತ್ತದೆ. ಅಭ್ಯರ್ಥಿಗಳಿಗೆ ಸರ್ಕಾರಿ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ ಜೂನ್ 27 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಈ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಆದ್ದರಿಂದ ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಿ.
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಸರ್ಕಾರಿ ಪ್ರೈವೇಟ್ ಜಾಬ್ ಗಳನ್ನು ನೀಡುವುದಿಲ್ಲ. ನಾವು ಯಾವುದೇ ರೀತಿ ಹಣಗಳನ್ನು ಪಡೆಯುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ನಾವು ಯಾವುದೇ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಿಜ ನಿಖರವಾದ ಸುದ್ದಿಗಳನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸುವ ಮುನ್ನ ಸಂಬಂಧಿಸಿದ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಯಾವುದೇ ರೀತಿಯ ಮಾಹಿತಿ ಕೊರತೆ ಆದಲ್ಲಿ ಡೈಲಿ ಕನ್ನಡ ನ್ಯೂಸ್ ಜವಾಬ್ಧರಾಗಿರುವುದಿಲ್ಲ.
ನಮ್ಮ ವೆಬ್ ಸೈಟ್ ನಲ್ಲಿ ನಾವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ನೀಡುತ್ತೇವೆ. ಪ್ರತಿದಿನ ಜಾಬ್ ಮಾಹಿತಿ ಪಡೆಯಲು ಬಯಸುವ ಅಭ್ಯರ್ಥಿಗಳು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಬಹುದು. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ಟೆಲಿಗ್ರಾಂ ಮತ್ತು ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು ಈ ಲೇಖನ ಓದಕ್ಕಾಗಿ ಧನ್ಯವಾದಗಳು. ಈ ಲೇಖನದ ಕೊನೆಯಲ್ಲಿ ಈ ಮೇಲೆ ನೀಡಿರುವ ಮಾಹಿತಿಯ ಅಧಿಕೃತ ಸರ್ಕಾರಿ ವರ್ಜಿನಲ್ ಸೊರ್ಸ್ ನೀಡಿದ್ದೇವೆ.
News orginal source : https://www.ibps.in/index.php/crp-updates/
