ಡೈಲಿ ಕನ್ನಡ ನ್ಯೂಸ್ ಚಾನೆಲ್ ಗೆ ಸ್ವಾಗತ ಆಯುಷ್ ಇಲಾಖೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯ ಪ್ರಕಾರ ಕರ್ನಾಟಕ ಸ್ಥಳದಲ್ಲಿ ಹೋಮಿಯೋಪತಿ ಸ್ಪೆಷಲಿಸ್ಟ್ ಡಾಕ್ಟರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನವೆಂಬರ್ 30ರ ಒಳಗೆ ಸಲ್ಲಿಸಬಹುದಾಗಿದೆ.
ಆಯುಷ್ ಇಲಾಖೆ ನೇಮಕಾತಿ – Ayush Department recruitment Karnataka :
ಕರ್ನಾಟಕದ ಕೋಲಾರದ ಸ್ಥಳದಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಎಂ ಡಿ ಎಂ ಎಸ್ ಪೋಸ್ಟ್ ಗ್ರಾಜುಯೇಷನ್ ಬಿ ಎಚ್ ಎಮ್ ಎಸ್ ಶಿಕ್ಷಣವನ್ನು ಹೊಂದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿ 18 ಮತ್ತು ಗರಿಷ್ಠ ವಯಸ್ಸಿನ ಮಿತಿಯು 35 ವರ್ಷ ಆಗಿರಬೇಕು.
Ads :

ಅಭ್ಯರ್ಥಿಗಳಿಗೆ ತಮ್ಮ ಜಾತಿ ಅನುಗುಣವಾಗಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಇದರ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಅನುಭವ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆಯಾಗಿರುವ ಅಧಿಕೃತ ಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಮಾಹಿತಿಯನ್ನು ಓದಿ. ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು.
ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಬೇಕಾಗಿರುವ ಅಗತ್ಯ ದಾಖಲೆಗಳೊಂದಿಗೆ ಸಂಸ್ಥೆಯು ನೀಡಿರುವ ಅಧಿಕೃತ ವಿಳಾಸಕ್ಕೆ ಅಂದರೆ ಜಿಲ್ಲಾ ಆಯುಷ್ ಕಛೇರಿ ಎಸ್ಎನ್ಆರ್ ಆಸ್ಪತ್ರೆ ಆವರಣ ಕೋಲಾರ 563101 ಈ ವಿಳಾಸಕ್ಕೆ ಕಳುಹಿಸಬೇಕು. ಅಭ್ಯರ್ಥಿಗಳು ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬೇಕು ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳ ಮಾಹಿತಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ ಅಕ್ಟೋಬರ್ 30 ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30 ಆಗಿರುತ್ತದೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Ayush Department recruitment Karnataka ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಸಂಸ್ಥೆ ನೀಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ವಿದ್ಯಾಭ್ಯಾಸ ಮತ್ತು ವಯಸ್ಸಿನ ಮಿತಿಗೆ ಎಲಿಜಿಬಲ್ ಇದ್ದೀರ ಎಂಬುದನ್ನು ಪರಿಶೀಲಿಸಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಯಾವುದೇ ತಪ್ಪುಗಳನ್ನು ಮಾಡಿದರೆ ಅಂತ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಡೈಲಿ ಕನ್ನಡ ನ್ಯೂಸ್ ವೆಬ್ ಸೈಟ್ ನಲ್ಲಿ ನಾವು ಯಾವುದೇ ಸುಳ್ಳು ತಪ್ಪು ಮಾಹಿತಿಗಳನ್ನು ಪಬ್ಲಿಶ್ ಮಾಡುವುದಿಲ್ಲ ನಮ್ಮ ವೆಬ್ಸೈಟ್ನಲ್ಲಿ ಬರುವ ಎಲ್ಲಾ ಮಾಹಿತಿಗಳು ನಿಖರ ಮತ್ತು ನಿಜವಾಗಿರುತ್ತದೆ. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಗೊಂದಲ ಇದ್ದರೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬಹುದು. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದ್ದರೆ ಅಭ್ಯರ್ಥಿಗಳು ತಾವೇ ಅರ್ಜಿಯನ್ನು ಭರ್ತಿ ಮಾಡಿ ಪೋಸ್ಟ್ ಮೂಲಕ ಕಳುಹಿಸಬೇಕಾಗುತ್ತದೆ.
ಪ್ರತಿ ದಿನ ಸರ್ಕಾರಿ ಜಾಬ್ ಅಪ್ಡೇಟ್ಗಳು ವಿದ್ಯಾರ್ಥಿ ವೇತನ ಎಜುಕೇಶನ ಸಂಬಂಧಿಸಿದ ಮಾಹಿತಿಗಳನ್ನು ಪಡೆಯಲು ನಮ್ಮ ವೆಬ್ಸೈಟನ್ನು ಭೇಟಿ ನೀಡಬಹುದು ಈ ಲೇಖನ ಓದಕ್ಕಾಗಿ ಧನ್ಯವಾದಗಳು.
News Source: Ayush department Karnataka
