HAL ನೇಮಕಾತಿ ಟೆಕ್ನಿಶನ್ ಹುದ್ದೆಗಳಿಗೆ ಅರ್ಜಿ ಆಹ್ವಾನ – HAL recruitment
HAL ನೇಮಕಾತಿ ಟೆಕ್ನಿಶನ್ ಹುದ್ದೆಗಳಿಗೆ ಅರ್ಜಿ ಆಹ್ವಾನ – HAL recruitment ಎಚ್ಎಎಲ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ತಾಂತ್ರಿಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತಾರೆ. ಅಧಿಕೃತ ಅಧಿ ಸೂಚನೆಯ ಪ್ರಕಾರ ಕರ್ನಾಟಕದಲ್ಲಿ ಡಿಪ್ಲೋಮೋ, ಟೆಕ್ನಿಷಿಯನ್ ಆಪರೇಟರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸುತ್ತೇವೆ. ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ದಿನಾಂಕ ಅಧಿಕೃತ, ಅಧಿಸೂಚನೆ ಮುಂತಾದ ಮಾಹಿತಿಗಳನ್ನು ಈ ಕೆಳಗೆ ನೀಡಿದ್ದೇವೆ. ನೀವೇನಾದರೂ ನಮ್ಮ ಚಾನೆಲ್ ಗೆ ಮೊದಲ ಬಾರಿ ಬರುತ್ತಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು.
ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 57 ಡಿಪ್ಲೋಮಾ ಮೆಕಾನಿಕ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ರಾಸಾಯನಿಕ ಫಿಟ್ಟರ್ ಟರ್ನರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಮೇಲೆ ನೀಡಿರುವ ವಿದ್ಯಾಭ್ಯಾಸ ಹೊಂದಿದ್ದರೆ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಹುದ್ದೆಗಳನುಸಾರ ಶೈಕ್ಷಣಿಕ ಅರ್ಹತೆಯನ್ನು ಪಡೆಯಲು ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಸಂಪೂರ್ಣವಾಗಿ ಓದಬಹುದು. ಅಧಿಕೃತ ಅಧಿಸೂಚನೆಯಲ್ಲಿ ಸಂಕ್ಷಿಪ್ತವಾಗಿ ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಯನ್ನು ತಿಳಿಸಿದ್ದಾರೆ.
ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿ 18 ವರ್ಷ ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸಿನ ಮಿತಿಯು 28 ವರ್ಷ ಆಗಿರುತ್ತದೆ. ಈ ವಯಸ್ಸಿನ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿದೆ.
ವೇತನ ಶ್ರೇಣಿಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳನ್ನುಸಾರ ವೇತನವನ್ನು ನೀಡಲಾಗುತ್ತದೆ. ಡಿಪ್ಲೋಮೋ ತಂತ್ರಜ್ಞಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 23 ಸಾವಿರದವರೆಗೆ ವೇತನವನ್ನು ಮತ್ತು ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 22 ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕದ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಸರ್ಕಾರಿ ಶುಲ್ಕ ಇರುತ್ತದೆ. ಆರ್ಜಿ ಸಲ್ಲಿಸಲು ಬಯಸುವ ಜನರಲ್ ಕೆಟಗರಿ ಅಭ್ಯರ್ಥಿಗಳಿಗೆ ಗರಿಷ್ಠ 200 ರೂಪಾಯಿಗಳ ಸರಕಾರಿ ಅರ್ಜಿ ಶುಲ್ಕ ಇರುತ್ತದೆ ಮತ್ತು ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ತಮ್ಮ ಅರ್ಜಿಗಳನ್ನು ಉಚಿತವಾಗಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯ ನಂತರ ಎರಡನೇ ಹಂತದಲ್ಲಿ ವೈದ್ಯಕೀಯ ಪರೀಕ್ಷೆ ಮತ್ತು ಕೊನೆಯ ಹಂತದಲ್ಲಿ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಬೆಂಗಳೂರು ನೋಟ್ ಮುದ್ರಣ ಇಲಾಖೆ ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – BRBNMPL Recruitment
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕ್ರಮಗಳು : HAL ನೇಮಕಾತಿ ಟೆಕ್ನಿಶನ್ ಹುದ್ದೆಗಳಿಗೆ ಅರ್ಜಿ ಆಹ್ವಾನ – HAL recruitment
- ಮೊದಲಿಗೆ ಅಭ್ಯರ್ಥಿಗಳು ಹೆಚ್ಎಎಲ್ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಇತ್ತೀಚಿಗೆ ಬಿಡುಗಡೆಯಾಗಿರುವ ಹೊಸ ಅಧಿಕ್ ಸೂಚನೆಯನ್ನು ನೋಡಬಹುದು ಮತ್ತು ಪಿಡಿಎಫ್ ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು.
- ನಂತರ ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿ ಮೇಲೆ ನೀಡಿರುವ ಹುದ್ದೆಗಳಿಗೆ ಆಯ್ಕೆ ಮಾಡಿ ಅರ್ಜಿ ಸಲ್ಲಿಸಲು ಪ್ರಾರಂಭ ಮಾಡಬೇಕು.
- ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವಾಗ ತಮ್ಮ ವೈಯಕ್ತಿಕ ಮಾಹಿತಿಗಳು, ಶೈಕ್ಷಣಿಕ ಮಾಹಿತಿ, ಅನುಭವದ ಮಾಹಿತಿ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡಲು ಇರುತ್ತದೆ. ಅಭ್ಯರ್ಥಿಗಳು ಯಾವುದೇ ತಪ್ಪುಗಳನ್ನು ಮಾಡದೇ ಈ ಮಾಹಿತಿಗಳನ್ನು ಭರ್ತಿ ಮಾಡಬೇಕು.
- ನಂತರ ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯ ಹಂತದಲ್ಲಿ ಸಲ್ಲಿಸಿದ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ನಮ್ಮ ಅರ್ಜಿಯನ್ನು ಸಲ್ಲಿಸಬಹುದು.
- ಕೊನೆಯದಾಗಿ ತಮ್ಮ ಭವಿಷ್ಯ ತಿನ್ನಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್ ಔಟ್ ಅನ್ನು ತೆಗೆದುಕೊಳ್ಳಬಹುದು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 24 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಲ ಅವಕಾಶ ನೀಡಲಾಗಿದೆ.
ನಮ್ಮ ಡೈಲಿ ಕನ್ನಡ ನ್ಯೂಸ್ ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ನೀಡುವ ಮಾಹಿತಿಗಳು ನಿಖರವಾಗಿರುತ್ತದೆ. ಯಾವುದೇ ರೀತಿಯ ಗೊಂದಲವಿದ್ದರೆ ನಮ್ಮನ್ನು ಸಂಪರ್ಕಿಸಬಹುದು. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಸರ್ಕಾರಿ ಜಾಬ್ ಅಪ್ಡೇಟ್ಗಳು, ವಿದ್ಯಾಭ್ಯಾಸ, ವಿದ್ಯಾರ್ಥಿ ವೇತನ, ವ್ಯಾಪಾರ ಮುಂತಾದ ಮಾಹಿತಿಗಳ ಬಗ್ಗೆ ನೀಡುತ್ತೇವೆ. ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜೋಯ್ನಾಗಿ ಧನ್ಯವಾದಗಳು.
Notification PDF : 57-Diploma-Technician-Operator-Posts-Advt-Details-HAL (1)
News orginal source : https://hal-v1.exmegov.com/#/index

