ಅಂಗನವಾಡಿ ಟೀಚರ್ ಮತ್ತು ಹೆಲ್ಪರ್ ಹುದ್ದೆಗಳಿಗೆ ನೇಮಕಾತಿ | WCD recruitment
ಮಕ್ಕಳ ಅಭಿವೃದ್ಧಿ ಇಲಾಖೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿ ಸೂಚನೆಯ ಪ್ರಕಾರ ಅಂಗನವಾಡಿ ಟೀಚರ್ ಮತ್ತು ಹೆಲ್ಪರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಕೃತ ಅಧಿಸೂಚನೆಯ ಶೀಘ್ರದಲ್ಲಿಯೇ ಪ್ರಕಟಗೊಳ್ಳಲಿದೆ.
WCD ಹಾಸನ ಹುದ್ದೆಯ ವಿವರಗಳು :
ಅಂಗನವಾಡಿ ಕಾರ್ಯಕರ್ತೆ) ಮತ್ತು (ಅಂಗನವಾಡಿ ಸಹಾಯಕಿ) ಹುದ್ದೆಗಳು. ಆಲೂರು425ಅರಕಲಗೂಡು2262ಅರಸೀಕೆರೆ51138ಬೇಲೂರು1191ಚನ್ನರಾಯಪಟ್ಟಣ48123ಹಾಸನ2093ಹೊಳೆ ನರಸೀಪುರ3370ಸಕಲೇಶಪುರ1353
WCD ಹಾಸನ ನೇಮಕಾತಿ 2025 ಅರ್ಹತಾ ವಿವರಗಳು :
ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಅಥವಾ ಪಿಯುಸಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ಶಿಕ್ಷಣ ಪೂರ್ಣಗೊಳಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯಸ್ಸಿನ ಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಸನ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿಯನ್ನು 18 ವರ್ಷಕ್ಕೆ ಇಡಲಾಗಿದೆ ಮತ್ತು ಗರಿಷ್ಠ ವಯಸ್ಸಿನ ಮಿತಿ 35 ವರ್ಷ ಆಗಿರುತ್ತದೆ. ಈ ವಯಸ್ಸಿನ ಒಳಗೆ ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲಾವಕಾಶ ಪಡೆಯುತ್ತಾರೆ.
ವಯೋಮಿತಿ ಸಡಿಲಿಕೆ:
ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಸರ್ಕಾರಿ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆನ್ಲೈನ್ ಮೂಲಕ ಆಯ್ಕೆ ಮಾಡಲಾಗುತ್ತದೆ.
WCD ಹಾಸನ ನೇಮಕಾತಿ 2025 ಗೆ ಹೇಗೆ ಅರ್ಜಿ ಸಲ್ಲಿಸಬೇಕು :
- ಮೊದಲು ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು.
- ನಂತರ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನಲ್ಲಿ ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮಾಹಿತಿ ಶೈಕ್ಷಣಿಕ ಮಾಹಿತಿ ಮೊಬೈಲ್ ನಂಬರ್ ಇಮೇಲ್ ಐಡಿ ಮುಂತಾದ ಮಾಹಿತಿಗಳನ್ನು ನೀಡಬೇಕಾಗುತ್ತದೆ.
- ನಂತರ ಅಭ್ಯರ್ಥಿಗಳು ಬೇಕಾಗಿರುವಾಗ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ನಂತರ ಕೊನೆಯ ಹಂತದಲ್ಲಿ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಅನ್ನು ಒತ್ತುವ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಸಲ್ಲಿಸಿದ ನಂತರ ಕೊನೆಯಲ್ಲಿ ಅರ್ಜಿ ನಮೂನೆಯ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಬೇಕು.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲಿಯೇ ಅಪ್ಡೇಟ್ ಮಾಡಲಾಗುತ್ತದೆ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-ಏಪ್ರಿಲ್-2025
Notification PDF link : PDF
