ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ – DLSA Recruitment 2025 : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಆಡಳಿತ ಸಹಾಯಕ ವಕೀಲ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 7 2025 ಆಗಿರುತ್ತದೆ. ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಆದ್ದರಿಂದ ಕೊನೆಯವರೆಗೆ ಓದಿ.
ಖಾಲಿ ಇರುವ ಹುದ್ದೆಗಳ ವಿವರಗಳು :
ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯಲ್ಲಿ ವಕೀಲ ಆಡಳಿತ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.
ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ವಕೀಲ ಪದವಿ, ಎಲ್ ಎಲ್ ಬಿ ಶಿಕ್ಷಣವನ್ನು ಹೊಂದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಆಡಳಿತ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ ಶಿಕ್ಷಣವನ್ನು ಹೊಂದಿದ್ದರೆ ಸಾಕು.
ವಯಸ್ಸಿನ ಮಿತಿ :
ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಿಕ್ಕಮಗಳೂರು ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ನೋಡಿ.
ಆಯ್ಕೆ ಪ್ರಕ್ರಿಯೆ ಮಾಹಿತಿಗಳು :
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ಕೌಶಲ್ಯ ಪರೀಕ್ಷೆಯ ನಡೆಸಲಾಗುತ್ತದೆ. ಕೌಶಲ್ಯ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಎರಡನೇ ಹಂತದಲ್ಲಿ ಕಂಪ್ಯೂಟರ್ ಮತ್ತು ಟೈಪಿಂಗ್ ನಿಖರತೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮೂರನೇ ಹಂತದಲ್ಲಿ ಪ್ರಾವೀಣ್ಯತೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಿ ಕೊನೆಯ ಹಂತದಲ್ಲಿ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಅಧಿಕೃತ ನೋಟಿಫಿಕೇಶನ್ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕ್ರಮಗಳು : DLSA Recruitment 2025
- DLSA Recruitment 2025 ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆಯಾಗಿರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಂಡು ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಪ್ರಾರಂಭ ಮಾಡಬೇಕು.
- ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕು ಯಾವುದೇ ತಪ್ಪು ಮಾಹಿತಿಗಳನ್ನು ಭರ್ತಿ ಮಾಡಿದರೆ ಅಂತಹ ಅರ್ಜಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ.
- ನಂತರ ಅರ್ಜಿ ನಮೂನೆಯನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ಬೇಕಾಗಿರುವ ಅಗತ್ಯ ದಾಖಲೆಗಳೊಂದಿಗೆ ಪೋಸ್ಟ್ ಮೂಲಕ ಕಳುಹಿಸಿಕೊಡಬೇಕು.
- ಕಳುಹಿಸಿ ಕೊಡಬೇಕಾದ ವಿಳಾಸ ಆಡಳಿತ ಸಹಾಯಕ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಕಾರ್ಯದ ಆವರಣ ಚಿಕ್ಕಮಂಗಳೂರು ಕರ್ನಾಟಕ.
- ವಕೀಲರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿ ಎ ಡಿ ಆರ್ ಕಟ್ಟಡ ನ್ಯಾಯಾಲಯದ ಆವರಣ ಚಿಕ್ಕಮಗಳೂರು ಕರ್ನಾಟಕ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
DLSA Recruitment 2025 ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ನೀಡಲಾಗಿದೆ ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 7 2025 ಆಗಿರುತ್ತದೆ.
ಡೈಲಿ ಕನ್ನಡ ನ್ಯೂಸ್ ನಲ್ಲಿ ಬರುವ ಎಲ್ಲಾ ಮಾಹಿತಿಗಳು ನಿಜ ಆಗಿರುತ್ತದೆ. ಯಾವುದೇ ಸುಳ್ಳು ಮಾಹಿತಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ಪ್ರತಿದಿನ ರಾಜ್ಯ ದೇಶ ಉದ್ಯೋಗ ಸರ್ಕಾರಿ ಯೋಜನೆಗಳ ಮಾಹಿತಿಗಳನ್ನು ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ಆಸಕ್ತಿ ಇರುವ ಅಭ್ಯರ್ಥಿಗಳು ಪ್ರತಿದಿನ ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಬಹುದು. ಹೆಚ್ಚಿನ ಅಪ್ಡೇಟ್ ಅನ್ನು ಪಡೆಯಲು ಅಭ್ಯರ್ಥಿಗಳು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಬಹುದು. ಯಾವುದೇ ರೀತಿಯ ತೊಂದರೆಯಾದರೆ ಅಥವಾ ನಾವು ನೀಡಿರುವ ಮಾಹಿತಿಯಲ್ಲಿ ಕೊರತೆ ಇದ್ದರೆ ನಮ್ಮನ್ನು ಇಮೇಲ್ ಮೂಲಕ ಸಂಪರ್ಕಿಸಬಹುದು. ನಾವು ಸಹಾಯ ಮಾಡಲು ಇರುತ್ತೇವೆ ಧನ್ಯವಾದಗಳು.
Notification PDF download : PDF
ಡಿಸಿ ಆಫೀಸ್ ನೇಮಕಾತಿ – DC Office Recruitment 2025
