ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ,ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ನಮಸ್ಕಾರ ಸ್ನೇಹಿತರೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ ದ್ವಿತೀಯ ದರ್ಜೆ ಸಹಾಯಕ ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯವರೆಗೆ ಓದಿ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನದ ಮಾಹಿತಿ, ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವ ರೀತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ. ಸಂಸ್ಥೆಯ ಅಧಿಕೃತ ಅಧಿಸೂಚನೆ ಬಿಡುಗಡೆ ಆಗಿದೆ. ಅಧಿಕೃತ ಅಧಿಸೂಚನೆಯಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭವಾಗಬೇಕಾಗಿತ್ತು. ಆದರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಇನ್ನೂ ಪ್ರಾರಂಭವಾಗಿಲ್ಲ.
ಪ್ರಮುಖ ಖಾಲಿ ಹುದ್ದೆಗಳ ವಿವರಗಳು :
ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವಂತೆ ರಾಜ್ಯವೃಂದದಲ್ಲಿ ಒಟ್ಟು 18 ಹುದ್ದೆಗಳು ಮತ್ತು ಸ್ಥಳೀಯ ವೃಂದದಲ್ಲಿ ಒಟ್ಟು 7 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಒಟ್ಟು ಹುದ್ದೆಗಳ ಸಂಖ್ಯೆ 25 ಆಗಿರುತ್ತದೆ. ಅಭ್ಯರ್ಥಿಗಳು ಹುದ್ದೆಗಳ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬಹುದು.
ಆಯ್ಕೆಯಾದ ಅಭ್ಯರ್ಥಿಗಳ ವೇತನದ ಮಾಹಿತಿಗಳು :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರವಾಗಿ ವೇತನವನ್ನು ನೀಡಲಾಗುತ್ತದೆ. ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯಲ್ಲಿ ನೀಡಿರುವಂತೆ 21,000 ದಿಂದ 42,000 ವರೆಗೆ ವೇತನವನ್ನು ನೀಡಲಾಗುತ್ತದೆ. ಇನ್ನು ಪ್ರಥಮ ದರ್ಜೆ ಸಹಾಯಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಯಲ್ಲಿ ನೀಡಿದಂತೆ 27 ಸಾವಿರದಿಂದ 52 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ವೇತನದ ಜೊತೆ ಅಭ್ಯರ್ಥಿಗಳಿಗೆ ಎಚ್ ಆರ್ ಎ ಮುಂತಾದ ಪ್ರತ್ಯೇಕ ಸೌಲಭ್ಯಗಳು ದೊರೆಯುತ್ತದೆ. ಇತರ ಜೊತೆ ದೊರೆಯುವ ಸೌಲಭ್ಯಗಳ ಮಾಹಿತಿಯನ್ನು ನೋಟಿಫಿಕೇಶನ್ ಅಲ್ಲಿ ನೀಡಲಾಗಿದೆ ನೋಡಿ.
ಹುದ್ದೆಗಳಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :
ದ್ವಿತೀಯ ದರ್ಜೆ ಸಹಾಯಕರು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಶಿಕ್ಷಣವನ್ನು ಅಥವಾ ಡಿಪ್ಲೋಮೋ ಶಿಕ್ಷಣವನ್ನು ಅಥವಾ ಐಟಿಐ ಶಿಕ್ಷಣವನ್ನು ಪಾಸ್ ಮಾಡಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ದ್ವಿತೀಯ ದರ್ಜೆ ಸಹಾಯಕರುಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಪ್ರಥಮ ದರ್ಜೆ ಸಹಾಯಕರು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಯಾವುದೇ ವಿಷಯದಲ್ಲಿ ಪದವಿ ಶಿಕ್ಷಣವನ್ನು ಪಾಸ್ ಆಗಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಪಡೆಯುತ್ತಾರೆ.
ಅರ್ಜಿ ಶುಲ್ಕದ ಮಾಹಿತಿಗಳು :
ಈ ಮೇಲಿನ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.750ಗಳ ಅರ್ಜಿ ಶುಲ್ಕವಿರುತ್ತದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಒಬಿಸಿ ಅಭ್ಯರ್ಥಿಗಳಿಗೆ ಅಂದರೆ 2A,2B,3A,3B ಅಭ್ಯರ್ಥಿಗಳಿಗೆ ರೂ.750ಗಳ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ1 ಅಭ್ಯರ್ಥಿಗಳಿಗೆ 500 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಂಗವಿಕಲ ಅಭ್ಯರ್ಥಿಗಳಿಗೆ ಐನೂರು ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗೊಳು ಅರ್ಜಿ ಸಲ್ಲಿಸುವಾಗ ಆನ್ಲೈನ್ ಮೂಲಕ ತಮ್ಮ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು.
ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಈ ಮೇಲಿನ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿಯು 18 ವರ್ಷ ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನದ ಮಾಹಿತಿಗಳು :
ಈ ಮೇಲೆ ನೀಡಿರುವ ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹಾಕಿಯಾದ ಅಭ್ಯರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ ಮಾಡಲಾಗುತ್ತದೆ. ಮುಂದಿನ ಹಂತದಲ್ಲಿ ಅಭ್ಯರ್ಥಿಗಳಿಗೆ ಕೌಶಲ್ಯ ಪರೀಕ್ಷಣ ನಡೆಸಲಾಗುತ್ತದೆ. ಕೌಶಲ್ಯ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿರುವ ಎಲ್ಲಾ ಮಾನದಂಡಗಳ ಪ್ರಕಾರ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನಗಳು :
- ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲ ಅವಕಾಶ ನೀಡಲಾಗಿದೆ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆಯಾಗಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಅಭ್ಯರ್ಥಿಗಳು ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ತಮ್ಮೆಲ್ಲ ಮಾಹಿತಿಗಳನ್ನು ಭರ್ತಿ ಮಾಡಬೇಕು.
- ಎಲ್ಲಾ ಮಾಹಿತಿಗಳು ಬರ್ತಿ ಮಾಡಿದ ನಂತರ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ಮುಂದಿನ ಹಂತದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ತಮ್ಮ ಅರ್ಜಿಯನ್ನು ಸಬ್ಮಿಟ್ ಮಾಡಬಹುದು.
- ಅರ್ಜಿ ಸಲ್ಲಿಸಿದ ನಂತರ ಭವಿಷ್ಯತ್ ನ ಉಪಯೋಗಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬಹುದು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ ತಿಂಗಳಲ್ಲಿ ಪ್ರಾರಂಭವಾಗಬೇಕಾಗಿತ್ತು. ಆದರೆ ಆನ್ಲೈನಲ್ಲಿ ಅರ್ಜಿ ಸಲ್ಲಿಕೆಯ ಲಿಂಕ್ ಇನ್ನೂ ಓಪನ್ ಆಗಿಲ್ಲ. ಆನ್ಲೈನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭವಾದ ತಕ್ಷಣ ಅಪ್ಡೇಟ್ಗಳನ್ನು ನೀಡಲಾಗುತ್ತದೆ.
ನಾವು ಯಾವುದೇ ಜಾಬ್ಗಳನ್ನು ನೀಡುವುದಿಲ್ಲ ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಿಜ ನಿಖರವಾದ ಸುದ್ದಿಗಳನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಯೇ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ಮಾಹಿತಿ ಕೊರತೆ ಆದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ.
ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಬಹುದು. ಹೆಚ್ಚಿನ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪನ್ನು ಕೂಡ ಜಾಯಿನ್ ಆಗಬಹುದು. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಧನ್ಯವಾದಗಳು.
