BEL ನೇಮಕಾತಿ ಕರ್ನಾಟಕ – BEL recruitment Karnataka
BEL ನೇಮಕಾತಿ ಕರ್ನಾಟಕ – BEL recruitment Karnataka – ಬಿಇಎಲ್ ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇತ್ತೀಚಿಗೆ ಕರ್ನಾಟಕದಲ್ಲಿ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕದ ಜೊತೆ ಚೆನ್ನೈ ಒಡಿಸ್ಸಾ ಸ್ಥಳಗಳಲ್ಲಿಯೂ ನೇಮಕಾತಿ ಮಾಡಲಾಗುತ್ತದೆ. ಹಿರಿಯ ಮತ್ತು ಉಪನಿಯರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 3 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸುತ್ತೇವೆ ಆದ್ದರಿಂದ ಕೊನೆಯವರೆಗೆ ಓದಿ.
ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿ ಸೂಚನೆಯ ಪ್ರಕಾರ ಒಟ್ಟು ಎಂಟು ಹಿರಿಯ ಇಂಜಿನಿಯರ್ ಮತ್ತು ಒಟ್ಟು ಐದು ಉಪ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಹಿರಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾಣಿಕ ಪಡೆದ ಮಂಡಳಿಯಿಂದ ಬಿ ಇ ಬಿ ಟೆಕ್ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲಾವಕಾಶ ಪಡೆಯುತ್ತಾರೆ. ಉಪ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿ ಇ ಬಿ ಟೆಕ್ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ಅಥವಾ ಎಲೆಕ್ಟ್ರಿಕಲ್ ಪಡೆದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳನ್ನುಸರವಾಗಿ ವೇತನವನ್ನು ನೀಡಲಾಗುತ್ತದೆ. ಕನಿಷ್ಠ 40 ಸಾವಿರದಿಂದ ಗರಿಷ್ಠ ಒಂದು ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ. ಅಧಿ ಸೂಚನೆ ಪ್ರಕಾರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸಿನ ಮಿತಿಯು 35 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲ ಅವಕಾಶ ಪಡೆಯುತ್ತಾರೆ. ಅರ್ಜಿ ಸಲ್ಲಿಸಲು ಬಯಸುವ ಒ ಬಿ ಸಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸದಲಿಕೆಯನ್ನು ನೀಡಲಾಗಿರುತ್ತದೆ.
BEL ನೇಮಕಾತಿ ಕರ್ನಾಟಕ – BEL recruitment Karnataka ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸರ್ಕಾರ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳಿಗೆ ಸರ್ಕಾರಿ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಪಡೆಯುತ್ತಾರೆ. ಇನ್ನು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ 472 ಸರ್ಕಾರಿ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳ ಅರ್ಜಿ ಸಲ್ಲಿಸುವಾಗ ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು ಈ ಕೆಳಗಿನಂತಿವೆ : BEL ನೇಮಕಾತಿ ಕರ್ನಾಟಕ – BEL recruitment Karnataka
- ಮೊದಲಿಗೆ ಅಭ್ಯರ್ಥಿಗಳು ಭಾರತ ಎಲೆಕ್ಟ್ರಾನಿಕ್ ಲಿಮಿಟೆಡ್ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚೆಗೆ ಬಿಡುಗಡೆಯಾಗಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು. ನಂತರ ಕ್ಲಿಕ್ ಮಾಡಿ ಅರ್ಜಿ ನಮೂನೆ ಭರ್ತಿ ಮಾಡಲು ಪ್ರಾರಂಭ ಮಾಡಬೇಕು.
- ಮುಂದಿನ ಹಂತದಲ್ಲಿ ಅಭ್ಯರ್ಥಿಗಳಿಗೆ ವೈಯಕ್ತಿಕ ವಿವರ ಶೈಕ್ಷಣಿಕ ಮಾಹಿತಿಗಳು ಅನುಭವದ ಮಾಹಿತಿ ಮುಂತಾದ ಮಾಹಿತಿಗಳನ್ನು ಕೇಳಲಾಗುತ್ತದೆ. ಅಭ್ಯರ್ಥಿಗಳು ಯಾವುದೇ ತಪ್ಪುಗಳನ್ನು ಮಾಡದೆ ಈ ಮಾಹಿತಿಗಳನ್ನು ಭರ್ತಿ ಮಾಡಬೇಕು.
- ಮುಂದಿನ ಹಂತದಲ್ಲಿ ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯ ದಾಖಲೆಗಳ ಪಿಡಿಎಫ್ ಅನ್ನು ಅಪ್ಲೋಡ್ ಮಾಡಬೇಕು. ಮುಂದಿನ ಹಂತದಲ್ಲಿ ಸರ್ಕಾರಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿರುವ ಸ್ವೀಕಾರ ಸಂಖ್ಯೆಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು. ಕೊನೆಯದಾಗಿ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ಅರ್ಜಿ ನಮೂನೆಯ ಪಿಡಿಎಫ್ ಫಾರ್ಮ್ ಅನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಈಗಾಗಲೇ ಅವಕಾಶ ನೀಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ನವೆಂಬರ್ 12 ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 3 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಆಸಕ್ತರು ಆದಷ್ಟು ಬೇಗ ತಮ್ಮ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ.
ನಮ್ಮ ಡೈಲಿ ಕನ್ನಡ ನ್ಯೂಸ್ ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ನೀಡುವ ಮಾಹಿತಿಗಳು ನಿಖರವಾಗಿರುತ್ತದೆ. ಯಾವುದೇ ರೀತಿಯ ಗೊಂದಲವಿದ್ದರೆ ನಮ್ಮನ್ನು ಸಂಪರ್ಕಿಸಬಹುದು. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಸರ್ಕಾರಿ ಜಾಬ್ ಅಪ್ಡೇಟ್ಗಳು, ವಿದ್ಯಾಭ್ಯಾಸ, ವಿದ್ಯಾರ್ಥಿ ವೇತನ, ವ್ಯಾಪಾರ ಮುಂತಾದ ಮಾಹಿತಿಗಳ ಬಗ್ಗೆ ನೀಡುತ್ತೇವೆ. ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜೋಯ್ನಾಗಿ ಧನ್ಯವಾದಗಳು.
Notification PDF : BEL-Notification-2 (1)
Apply Online : Click here
News orginal source : BEL Notification
