BMRCL recruitment ಬೆಂಗಳೂರು ಮೆಟ್ರೋ ನೇಮಕಾತಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

BMRCL recruitment ಬೆಂಗಳೂರು ಮೆಟ್ರೋ ನೇಮಕಾತಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಇತ್ತೀಚಿಗೆ ಕರ್ನಾಟಕದಲ್ಲಿ ಅಸಿಸ್ಟೆಂಟ್ ಇಜಿನಿಯರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಅರ್ಜಿ ಶುಲ್ಕದ ಮಾಹಿತಿ ಮತ್ತು ಅರ್ಜಿ ಸಲ್ಲಿಸುವ ರೀತಿಯ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸುತ್ತೇವೆ ಈ ಲೇಖನವನ್ನು ಕೊನೆಯವರೆಗೆ ಓದಿ.

ಖಾಲಿ ಇರುವ ಹುದ್ದೆಗಳ ವಿವರಗಳು :

BMRCL recruitment ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯಂತೆ ಎಕ್ಸಿಕ್ಯೂಟ್ ಇಂಜಿನಿಯರ್ ಸಿವಿಲ್ ಒಟ್ಟು ಒಂದು ಹುದ್ದೆಗಳು, ಅಸಿಸ್ಟೆಂಟ್ ಇಂಜಿನಿಯರ್ ಸಿವಿಲ್ ಒಟ್ಟು ನಾಲ್ಕು ಹುದ್ದೆಗಳು, ಅಸಿಸ್ಟೆಂಟ್ ಇಂಜಿನಿಯರ್ ಜಿ ಅಂಡ್ ಎಂ ಒಟ್ಟು ಒಂದು ಹುದ್ದೆಗಳು, ಅಸಿಸ್ಟೆಂಟ್ ಮ್ಯಾನೇಜರ್ ಮಾರ್ಕೆಟಿಂಗ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.

ಆರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :

ಎಕ್ಸಿಕ್ಯೂಟಿವ್ ಇಂಜಿನಿಯರ್ ಸಿವಿಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿ ಟೆಕ್ ಅಥವಾ ಮಾಸ್ಟರ್ ಡಿಗ್ರಿ ಸಿವಿಲ್ ಇಂಜಿನಿಯರಿಂಗ್ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

  • ಅಸಿಸ್ಟೆಂಟ್ ಇಂಜಿನಿಯರ್ ಸಿವಿಲ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಬಿ ಇ ಬಿ ಟೆಕ್ ಸಿವಿಲ್ ಇಂಜಿನಿಯರಿಂಗ್ ಶಿಕ್ಷಣವನ್ನು ಪೂರ್ಣ ಮಾಡಿರಬೇಕು.
  • ಅಸಿಸ್ಟೆಂಟ್ ಇಂಜಿನಿಯರ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿಇ ಶಿಕ್ಷಣ ಅಥವಾ ಬಿ ಟೆಕ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಶಿಕ್ಷಣವನ್ನು ಪೂರ್ಣ ಮಾಡಿರಬೇಕು ಈ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಅಸಿಸ್ಟೆಂಟ್ ಮ್ಯಾನೇಜರ್ ಮಾರ್ಕೆಟಿಂಗ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಸಕ್ತ ಅಭ್ಯರ್ಥಿಗಳು ಬಿ ಟೆಕ್ ಸಿವಿಲ್ ಇಂಜಿನಿಯರಿಂಗ್ ಅಥವಾ ಬಿಇ ಎಂಬಿಎ ಶಿಕ್ಷಣವನ್ನು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಯಾವುದೇ ಸರ್ಕಾರಿ ಮಂಡಳಿಯಿಂದ ಪಡೆದಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳ ವೇತನದ ವಿವರಗಳು :

BMRCL recruitment ಮೇಲೆ ನೀಡಿರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ೬೨ ಸಾವಿರದಿಂದ ಒಂದು ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ. ಹುದ್ದೆಗಳನ್ನುಸಾರ ವೇತನವನ್ನು ನೀಡಲಾಗುತ್ತದೆ ವೇತನದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಕೆಯ ವಯಸ್ಸಿನ ಮಿತಿಯ ಮಾಹಿತಿಗಳು :

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿಯು 18 ವರ್ಷ ಆಗಿರುತ್ತದೆ ಮತ್ತು ಗರಿಷ್ಠ ವಯಸ್ಸಿನ ಮಿತಿಯು 45 ವರ್ಷ ಆಗಿರುತ್ತದೆ ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸರ್ಕಾರಿ ಅರ್ಜಿ ಶುಲ್ಕದ ಮಾಹಿತಿಗಳು :

ಈ ಮೇಲೆ ನೀಡಿರುವ ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಸರ್ಕಾರಿ ಅರ್ಜಿ ಶುಲ್ಕ ಇರುವುದಿಲ್ಲ ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ ಮಾಹಿತಿಗಳು :

ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ನಂತರ ಅವರಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಕೊನೆಯ ಹಂತದಲ್ಲಿ ನೇರ ಸಂದರ್ಶನವನ್ನು ಮಾಡಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

BSF recruitment, ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಭರ್ಜರಿ ನೇಮಕಾತಿ 1526 ಖಾಲಿ ಹುದ್ದೆಗಳು

ಅರ್ಜಿ ಸಲ್ಲಿಸುವ ಕ್ರಮಗಳು :

  • ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ರೀತಿ ಮೊದಲಿಗೆ ಅಭ್ಯರ್ಥಿಗಳು ಸಂಸ್ಥೆಯ BMRCL recruitment ಅಧಿಕೃತ ವೆಬ್ಸೈಟಿಗೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು.
  • ನಂತರ ಆಫ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಪ್ರಿಂಟ್ ಔಟ್ ಮಾಡಿ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕು.
  • ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಯಾವುದೇ ತಪ್ಪುಗಳನ್ನು ಮಾಡದೆ ಭರ್ತಿ ಮಾಡಿದ ನಂತರ ಅರ್ಜಿ ನಮೂನೆಯ ಜೊತೆ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
  • ಪೋಸ್ಟ್ ಮೂಲಕ ಕಳಿಸುವ ವಿಳಾಸ ಜೆನರಲ್ ಮ್ಯಾನೇಜರ್ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಮೂರನೇ ಮಹಡಿ ಬಿಎಂಟಿಸಿ ಕಾಂಪ್ಲೆಕ್ಸ್ ಕೆಎಚ್ ರೋಡ್ ಶಾಂತಿನಗರ ಬೆಂಗಳೂರು ಈ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ :

ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ ಎರಡು ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಸರ್ಕಾರಿ ಖಾಸಗಿ ಜಾಬ್ ಗಳನ್ನು ನೀಡುವುದಿಲ್ಲ ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನೀಡುತ್ತೇವೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸುವ ಮುನ್ನ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ನಂತರ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ. ಈ ಲೇಖನ ನಿಮಿಗಿಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಲೇಖನ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಧನ್ಯವಾದಗಳು.

By sapalyamanish

With five years of experience in news content writing, Mahesha has a proven track record of delivering high-quality journalism. Having worked with FastNews, Job Updates, and InfoKannada, they specialize in producing timely and insightful articles that engage and inform readers

Related Post

Leave a Reply

Your email address will not be published. Required fields are marked *