ಪಶುಪಾಲನ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 5250 ಕೃಷಿ ಅಧಿಕಾರಿ ಹುದ್ದೆಗಳಿಗೆ ಭರ್ಜರಿ ನೇಮಕಾತಿ – BPN recruitment
ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಕೇಂದ್ರ ಪಶುಪಾಲನ ಇಲಾಖೆಯಲ್ಲಿ ಖಾಲಿ ಇರುವ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಭಾರತೀಯ ಪಶು ಪಾಲನಾ ನಿಗಮ ಲಿಮಿಟೆಡ್ ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದೆ. ಅಧಿಕೃತ ಅಭಿಸೂಚನೆಯ ಪ್ರಕಾರ ಒಟ್ಟು 5250 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಕೃಷಿ ಅಭಿವೃದ್ಧಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ವೇತನದ ಮಾಹಿತಿ ಆಯ್ಕೆ ಪ್ರಕ್ರಿಯೆ ಅರ್ಜಿ ಸಲ್ಲಿಸುವ ರೀತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಆದ್ದರಿಂದ ಲೇಖನವನ್ನು ಕೊನೆಯವರೆಗೆ ಓದಿ.
ಖಾಲಿ ಇರುವ ಹುದ್ದೆಗಳ ಮಾಹಿತಿ :
- ಕೃಷಿ ನಿರ್ವಹಣಾಧಿಕಾರಿ ಒಟ್ಟು 250 ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.
- ಕೃಷಿ ಅಭಿವೃದ್ಧಿ ಅಧಿಕಾರಿ 1250 ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.
- ರೈತ ಪ್ರೇರಕರು ಒಟ್ಟು 3750 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಒಟ್ಟು ಕಾಲಿ ಇರುವ ಹುದ್ದೆಗಳ ಸಂಖ್ಯೆ 5250 ಆಗಿರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳ ವೇತನದ ಮಾಹಿತಿಗಳು :
- ಕೃಷಿ ನಿರ್ವಹಣಾ ಅಧಿಕಾರಿ : ಈ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ಅಧಿಕೃತ ಅಧಿಸೂಚನೆಯಂತೆ 31 ಸಾವಿರದ ವರೆಗೆ ವೇತನವನ್ನು ನೀಡಲಾಗುತ್ತದೆ.
- ಕೃಷಿ ಅಭಿವೃದ್ಧಿ ಅಧಿಕಾರಿ : ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 28 ವರೆಗೆ ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.
- ರೈತ ಪ್ರೇರಕರು : ರೈತ ಪ್ರೇರಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗರಿಷ್ಠ 22ವರೆಗೆ ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ನೋಟಿಫಿಕೇಶನ್ ಅನ್ನು ಓದಿ.
ಅಭ್ಯರ್ಥಿಗಳ ವಯಸ್ಸಿನ ಮಿತಿಯ ಮಾಹಿತಿಗಳು :
ಮೊದಲಿಗೆ ಕೃಷಿ ನಿರ್ವಹಣಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸು 25 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸಲು ಬಯಸುವವರ ಗರಿಷ್ಠ ವಯಸ್ಸು 45 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
1. ಕೃಷಿ ಅಭಿವೃದ್ಧಿಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿ 21 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸಲು ಬಯಸುವವರ ಗರಿಷ್ಠ ವಯಸ್ಸು 40 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಬರುವ ಆಸಕ್ತ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
2. ರೈತ ಪ್ರೇರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 60 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ರೈತ ಪ್ರೇರಕರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲ ಅವಕಾಶ ಪಡೆಯುತ್ತಾರೆ.
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಓಬಿಸಿ ಕೆಟಗರಿ ಅಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿಪ ಸಡಿಲಿಕ್ಕೆ ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಂಗವಿಕಲ ಅಭ್ಯರ್ಥಿಗಳಿಗೆ ದೃಶ್ಯ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಸೆಕೆಂಡ್ ಪಿಯುಸಿ ಶಿಕ್ಷಣ ಪದವಿ ಶಿಕ್ಷಣ ಪೂರ್ಣ ಮಾಡಿರಬೇಕು. ಈ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಅರ್ಜಿ ಶುಲ್ಕ ಮಾಹಿತಿಗಳು :
ಕೃಷಿ ನಿರ್ವಹಣಾ ಅಧಿಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಅರ್ಜಿ ಶುಲ್ಕ 944 ರೂಪಾಯಿಗಳಾಗಿರುತ್ತದೆ. ಕೃಷಿ ಅಭಿವೃದ್ಧಿ ಅಧಿಕಾರಿ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳಿಗೆ ರೂ.826 ಸರ್ಕಾರಿ ಅರ್ಜಿ ಶುಲ್ಕ ಇರುತ್ತದೆ. ಇನ್ನೂ ರೈತ ಪ್ರೇರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಸರ್ಕಾರಿ ಅರ್ಜಿ ಶುಲ್ಕ 708 ರೂಪಾಯಿಗಳು ಆಗಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿ :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ಆನ್ಲೈನ್ ಪರೀಕ್ಷೆ ನಡೆಸಲಾಗುತ್ತದೆ. ಆನ್ಲೈನ್ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಮುಂದಿನ ಹಂತಕ್ಕೆ ತೇರ್ಗಡೆ ಹೊಂದುತ್ತಾರೆ. ಮುಂದಿನ ಹಂತದಲ್ಲಿ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಆಯ್ಕೆಯಾದ ಸೂಕ್ತ ಅಭ್ಯರ್ಥಿಗಳನ್ನು ನೇಮಕಾತಿ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯ ಸಂಕ್ಷಿಪ್ತ ಮಾಹಿತಿಯನ್ನು ಪಡೆಯಲು ಸಂಸ್ಥೆಯ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ಅರ್ಜಿ ಸಲ್ಲಿಸುವ ರೀತಿ :
- ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅವಕಾಶ ನೀಡಲಾಗಿದೆ. ಮೊದಲಿಗೆ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆ ಆಗಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಅಪ್ಲೈ ಆನ್ಲೈನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆ ಭರ್ತಿ ಮಾಡಬೇಕು. ಅಭ್ಯರ್ಥಿಗಳ ಅರ್ಜಿ ನಮೂನೆ ಭರ್ತಿ ಮಾಡುವಾಗ ಯಾವುದೇ ತಪ್ಪುಗಳನ್ನು ಮಾಡಬಾರದು.
- ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವಾಗ ತಮ್ಮ ಹೆಸರು ವಿಳಾಸ ವಿದ್ಯಾಭ್ಯಾಸ ಅನುಭವದ ಮಾಹಿತಿಗಳನ್ನು ಕೇಳಲಾಗುತ್ತದೆ. ಕೇಳಲಾಗುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕು.
- ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ನಂತರ ಸರ್ಕಾರಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಅರ್ಜಿ ನಮೂನೆಯನ್ನು ಸಬ್ಮಿಟ್ ಮಾಡಬೇಕು. ಅಗತ್ಯವಿದ್ದರೆ ಅರ್ಜಿ ನಮೂನೆಯ ಪಿಡಿಎಫ್ ಡೌನ್ಲೋಡ್ ಮಾಡಬಹುದು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ :
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 2 ಆಗಿರುತ್ತದೆ. ( ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಮುಂದೂಡಲಾಗಿದೆ). ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಮತ್ತು ರಿಜೆಕ್ಟ್ ಮಾಡಲಾಗುತ್ತದೆ.
ಡೈಲಿ ಕನ್ನಡ ನ್ಯೂಸ್ ಯಾವುದೇ ಸರಕಾರಿ ಅಥವಾ ಖಾಸಗಿ ಜಾಬುಗಳನ್ನು ನೀಡುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ನಮ್ಮ ವೆಬ್ಸೈಟ್ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಫೇಕ್ ಸುದ್ದಿಗಳನ್ನು ಪಬ್ಲಿಶ್ ಬರುವುದಿಲ್ಲ. ತಮ್ಮ ಅರ್ಜಿಯನ್ನು ಸಲ್ಲಿಸುವ ಮುನ್ನ ಸಂಸ್ಥೆಯ ಅಧಿಕೃತ ನೋಟಿಫಿಕೇಶನ್ ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸುವ ಯಾವುದೇ ಮಾಹಿತಿ ಕೊರತೆವಾದಲ್ಲಿ ಅದಕ್ಕೆ ನಾವು ಜವಾಬ್ದರಾಗಿರುವುದಿಲ್ಲ.
ನಮ್ಮ ವೆಬ್ಸೈಟ ಆಲ್ಲಿ ನಾವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಇಲಾಖೆಯಲ್ಲಿರುವ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಅಪ್ಡೇಟ್ ಮಾಡುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.
