ಕೇಂದ್ರ ಸರಕಾರಿ ಹೊಸ ನೇಮಕಾತಿ, ಅಟೆಂಡರ್, ಡ್ರೈವರ್ ಸೇರಿ ಹುದ್ದೆಗಳಿಗೆ ಅರ್ಜಿ ಆಹ್ವಾನ – Central govt Jobs 2024
ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಬ್ರಾಡ್ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ ಇಂಡಿಯಾ ಲಿಮಿಟೆಡ್ ಕೇಂದ್ರ ಸರ್ಕಾರದ ಅದೀನದಲ್ಲಿರುವ ಸಂಸ್ಥೆಯ ವಿವಿಧ ಹುದ್ದೆಗಳಿಗೆ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಡೆಲ್ಲಿ ಸ್ಥಳದಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಎಂಟಿಎಸ್ ಡಾಟಾ ಎಂಟ್ರಿ ಆಪರೇಟರ್ ಲಾ ಬೆಟೆಂಡರ್ ಮತ್ತು ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಆಗಿರುತ್ತದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ಕೆಲಸದ ಅನುಭವ, ವಯಸ್ಸಿನಮಿತಿ, ಅರ್ಜಿ ಶುಲ್ಕದ ಮುಂತಾದ ಮಾಹಿತಿಯನ್ನು ನೀಡುತ್ತೇವೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ನೀಡಲಾಗಿದೆ ಈ ಲೇಖನವನ್ನು ಸಂಪೂರ್ಣವಾಗಿ ಓದಿ.
ಖಾಲಿ ಇರುವ ಹುದ್ದೆಗಳ ವಿವರಗಳು :
|
ವೇತನದ ವಿವರಗಳು :
| ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ | 40,710 |
| ಎನ್ಟಿಎಸ್ | 18,486 |
| ಡಾಟಾ ಎಂಟ್ರಿ ಆಪರೇಟರ್ | 22,500 |
| ಪೇಷಂಟ್ ಕೇರ್ ಮ್ಯಾನೇಜರ್ | 30,000 |
| ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಷಿಯನ್ | 22,500 |
| ಡ್ರೈವರ್ | 22,500 |
| ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿಸ್ಟ್ | 24,400 |
| ಲ್ಯಾಬ್ ಅಟೆಂಡರ್ | 22,500 |
| ರಿಸರ್ಚ್ ಅಸಿಸ್ಟೆಂಟ್ | 29,000 |
| ಡೆವಲಪರ್ | 30,000 |
ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಟೆಕ್ನಿಕಲ್ ಅಸಿಸ್ಟೆಂಟ್ ಇಂಜಿನಿಯರ್ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು ಗರಿಷ್ಠ 40 ವರ್ಷ ಆಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವವರ ಶೈಕ್ಷಣಿಕ ಅರ್ಹತೆ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿ ಎಸ್ ಸಿ ಇನ್ ಸ್ಪೀಚ್ ಅಂಡ್ ಹಿಯರಿಂಗ್ ಅಥವಾ ಎಂ ಎಸ್ ಸಿ ಇನ್ ಹಿಯರಿಂಗ್ ಶಿಕ್ಷಣವನ್ನು ಹೊಂದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
ಎಮ್ ಟಿ ಎಸ್ ಹುದ್ದೆಗಳು : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಪಾಸ್ ಆಗಿರಬೇಕು.
ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳು : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾಣಿತ ಪಡೆದ ಮಂಡಳಿಯಿಂದ 12 ತರಗತಿ ಪಾಸ್ ಆಗಿರಬೇಕು ಮತ್ತು ಇದರ ಜೊತೆ ಟೈಪಿಂಗ್ ಶಿಕ್ಷಣ ಹೊಂದಿರಬೇಕು. ಟೈಪಿಂಗ್ ಸ್ಪೀಡ್ 35 ಡಬ್ಲ್ಯೂ ಪಿ ಎಂ ಆಗಿರಬೇಕು ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಪೇಷಂಟ್ ಕೇರ್ ಮ್ಯಾನೇಜರ್ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತಿಗಳ ಗರಿಷ್ಠ ವಯಸ್ಸು 40 ವರ್ಷ ಆಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವವರ ಶೈಕ್ಷಣಿಕ ಅರ್ಹತೆ ಯಾವುದೇ ವಿಶ್ವವಿದ್ಯಾಲಯದ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬ್ಯಾಚುಲರ್ ಇನ್ ಲೈಫ್ ಸೈನ್ಸ್ ಅಥವಾ ಪಿಜಿ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಮತ್ತು ಒಂದು ವರ್ಷಗಳ ವೈದ್ಯಕೀಯ ಕ್ಷೇತ್ರದಲ್ಲಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಷಿಯನ್ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಬಳಿ ಪ್ರಿ ಹಾಸ್ಪಿಟಲ್ ಟೆಕ್ನಿಶಿಯನ್ ಸರ್ಟಿಫಿಕೇಟ್ ಹೊಂದಿರಬೇಕು. ಈ ಸರ್ಟಿಫಿಕೇಟ್ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಡ್ರೈವರ್ ಹುದ್ದೆಗಳು : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಇದರ ಜೊತೆ ದೊಡ್ಡ ವಾಹನಗಳ ವೆಹಿಕಲ್ ಲೈಸೆನ್ಸ್ ಹೊಂದಿರಬೇಕು ಮತ್ತು 3 ವರ್ಷಗಳ ಅನುಭವವನ್ನು ಹೊಂದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಮೆಡಿಕಲ್ ಲೈಬ್ರರಿ ಟೆಕ್ನಾಲಜಿಸ್ಟ್ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳು ಬ್ಯಾಚುಲರ್ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಮತ್ತು ಎರಡು ವರ್ಷಗಳ ಅನುಭವವನ್ನು ಹೊಂದಿರಬೇಕು. ಈ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಲ್ಯಾಬ್ ಅಟೆಂಡರ್ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರ್ದಿಂದ ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿಯಲ್ಲಿ ಸೈನ್ಸ್ ವಿಷಯದಲ್ಲಿ ಪಾಸ್ ಆಗಿರಬೇಕು ಮತ್ತು ಇದರ ಜೊತೆ ಎರಡು ವರ್ಷಗಳ ಹುದ್ದೆಯಲ್ಲಿ ಅನುಭವವನ್ನು ಹೊಂದಿರಬೇಕು. ಈ ಅನುಭವ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲ ಅವಕಾಶ ಪಡೆಯುತ್ತಾರೆ.
ಜೂನಿಯರ್ ಹಿಂದಿ ಟ್ರಾನ್ಸ್ಲೇಟರ್ : ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಸಪ್ತ ಅಭ್ಯರ್ಥಿಗಳು ಈ ವಿಷಯದಲ್ಲಿ ಎರಡು ವರ್ಷಗಳ ಅನುಭವವನ್ನು ಹೊಂದಿರಬೇಕು ಮತ್ತು ಮಾಸ್ಟರ್ ಹಿಂದಿ ಅಥವಾ ಇಂಗ್ಲಿಷ್ ಪದವಿಯನ್ನು ಹೊಂದಿರಬೇಕು ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲ ಅವಕಾಶ ಪಡೆಯುತ್ತಾರೆ.
ಅರ್ಜಿ ಶುಲ್ಕದ ಮಾಹಿತಿಗಳು :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಜನರಲ್ ಒಬಿಸಿ ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 885 ಅರ್ಜಿ ಶುಲ್ಕ ಇರುತ್ತದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಎಕನಾಮಿಕ್ ವೀಕ್ ಅಭ್ಯರ್ಥಿಗಳಿಗೆ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 531 ರೂಪಾಯಿಗಳ ಸರ್ಕಾರಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು.
ಅರ್ಜಿ ಸಲ್ಲಿಸುವ ರೀತಿ :
- ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲಾವಕಾಶ ನೀಡಲಾಗಿದೆ ಮೊದಲಿಗೆ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ನಂತರ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು. ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಲಾಗಿನ್ ಆಗಿ ಅರ್ಜಿ ಭರ್ತಿ ಮಾಡಬೇಕು.
- ಕೇಳಲಾಗುವ ಎಲ್ಲ ಅಗತ್ಯ ದಾಖಲೆಗಳನ್ನು ಮತ್ತು ಮಾಹಿತಿಯನ್ನು ನೀಡಬೇಕು. ನಂತರ ಕೊನೆಯ ಹಂತದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಸಂಸ್ಥೆಯು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುವ ದಿನಾಂಕ ಮೇ 29 ಆಗಿರುತ್ತದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 12 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಡೈಲಿ ಕನ್ನಡ ನ್ಯೂಸ್ ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಯಾವುದೇ ರೀತಿಯ ಜಾಬ್ ಗಳನ್ನು ನೀಡುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ನಮ್ಮ ವೆಬ್ ಸೈಟ್ ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ಕೇವಲ ನಿಖರವಾದ ಸತ್ಯ ಸುದ್ದಿಗಳನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳ ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಯೇ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ಸಲ್ಲಿಸುವಾಗ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿರುವ ವಯಸ್ಸಿನ ಮಿತಿ ಮತ್ತು ಬೇಕಾಗಿರುವ ಅನುಭವದ ಮಾಹಿತಿಯನ್ನು ಸರಿಯಾಗಿ ಪರಿಶೀಲಿಸಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ.
ನಮ್ಮ ವೆಬ್ ಸೈಟ್ ನಲ್ಲಿ ನಾವು ಪ್ರತಿದಿನ ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಖಾಲಿ ಇರುವ ಹುದ್ದೆಗಳ ಮತ್ತು ರಾಜ್ಯ ಸರ್ಕಾರದ ಇಲಾಖೆಯಲ್ಲಿರುವ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಾಬ್ ಅಪ್ಡೇಟ್ ಅನ್ನು ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಮತ್ತು ಪ್ರತಿದಿನ ಕ್ವಿಕ್ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಬಹುದು. ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು.
News source : https://www.becil.com/vacancies
