DRDO GTRE ನೇಮಕಾತಿ | DRDO GTRE recruitment 2025 : ಡಿ ಆರ್ ಡಿ ಓ ಜಿ ಟಿ ಆರ್ ಇ ಗ್ಯಾಸ್ ಟರ್ಬೈನ್ ರಿಸರ್ಚ್ ಎಸ್ಟ್ಯಾಬ್ಲಿಷ್ಮೆಂಟ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತಾರೆ. ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 150 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ ಎಂಟು ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಖಾಲಿ ಹುದ್ದೆಗಳ ವಿವರಗಳು :
ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಡಿಪ್ಲೋಮೋ ಐಟಿಐ ಮುಗಿಸಿದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ಯಾವುದೇ ವಿಶ್ವವಿದ್ಯಾಲಯದಿಂದ ಬಿಕಾಂ ಬಿಎಸ್ಸಿ ಬಿಎ ಬಿಇ ಬಿ ಟೆಕ್ ಡಿಪ್ಲೋಮೋ ಐಟಿಐ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಶೈಕ್ಷಣಿಕ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ಆಯ್ಕೆಯಾದ ಅಭ್ಯರ್ಥಿಗಳ ವೇತನದ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರವಾಗಿ ವೇತನವನ್ನು ನೀಡಲಾಗುತ್ತದೆ. ಪದವೀಧರ ಅಪ್ರೆಂಟೀಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂಬತ್ತು ಸಾವಿರ ರೂಪಾಯಿ ಡಿಪ್ಲೋಮೋ ಅಪ್ಪ್ರೆಂಟಿಸ್ ಹುದ್ದೆಗಳಿಗೆ ರೂ.8,000 ಮತ್ತು ಐಟಿಐ ಐಟಿಐ ಹೆಬ್ಬುರ್ಂಟಿಸ್ ಹುದ್ದೆಗಳಿಗೆ ನೀಡಲಾಗುತ್ತದೆ.
ವಯಸ್ಸಿನ ಮಿತಿಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಕನಿಷ್ಠ 18 ವರ್ಷ ಮತ್ತು ಗರಿಷ್ಟ 27 ವರ್ಷ ಹೊಂದಿರಬೇಕು. ಈ ವರ್ಷದ ನಡುವೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಿದ್ದಾರೆ ಇವುಗಳ ಮಾಹಿತಿಗಳನ್ನು ಕೆಳಗೆ ನೀಡಿದ್ದೇವೆ ನೋಡಿ.
ವಯಸ್ಸಿನ ಮಿತಿಯ ಸಡಿಲಿಕೆ ಮಾಹಿತಿಗಳು :
ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ವಿನಾಯಿತಿಯನ್ನು ನೀಡಲಾಗಿದೆ. ಗರಿಷ್ಠ 5 ವರ್ಷಗಳು ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ವಿನಾಯಿತಿಯನ್ನು ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಇದರ ಲಾಭವನ್ನು ಪಡೆಯಬಹುದಾಗಿದೆ
ಅರ್ಜಿ ಶುಲ್ಕದ ಮಾಹಿತಿಗಳು :
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ಪಡೆಯುತ್ತಾರೆ
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಮೊದಲು ಮೆರಿಟ್ ಪಟ್ಟಿಯನ್ನು ನೀಡಲಾಗುತ್ತದೆ. ಮೆರಿಟ್ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೊನೆಯ ಹಂತದಲ್ಲಿ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸುವ ಕ್ರಮಗಳು :
- ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆಯಾಗಿರುವ ಅಧಿಕೃತ ಅಧಿಸೂಚನೆಯನ್ನು ಓದಬೇಕು.
- ನಂತರ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಫಾರ್ಮ್ ಸಿಗುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿಗಳು ಯಾವುದೇ ತಪ್ಪುಗಳನ್ನು ಮಾಡದೆ ತಮ್ಮ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಬೇಕು.
- ಅಭ್ಯರ್ಥಿಗಳು ಭರ್ತಿ ಮಾಡುವಾಗ ಯಾವುದೇ ತಪ್ಪು ಮಾಹಿತಿ ಬರ್ತಿ ಮಾಡಿದರೆ ಅಂತ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
- ಅಭ್ಯರ್ಥಿಗಳು ಸಂಸ್ಥೆಯು ನೀಡಿರುವ ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು : DRDO GTRE ನೇಮಕಾತಿ | DRDO GTRE recruitment 2025
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 8 ಆಗಿದೆ. ಅಭ್ಯರ್ಥಿಗಳ ಮೊದಲನೇ ಮೆರಿಟ್ ಲಿಸ್ಟ್ ಬಿಡುಗಡೆಯಾಗುವ ದಿನಾಂಕ ಮೇ 23 ಆಗಿರುತ್ತದೆ. ಅಭ್ಯರ್ಥಿಗಳ ಅಂತಿಮ ಆಯ್ಕೆ ಘೋಷಣೆಯ ದಿನಾಂಕ ಜೂನ್ 20 ಆಗಿರುತ್ತದೆ.
Notification PDF download : PDF
