ಗ್ರಾಮ ಪಂಚಾಯತ್ ನೇಮಕಾತಿ – Grama panchayat recruitment
Grama panchayat recruitment ಗ್ರಾಮ ಪಂಚಾಯತ್ ನೇಮಕಾತಿ ಕರ್ನಾಟಕದ ಧಾರವಾಡ ಸ್ಥಳಗಳಲ್ಲಿ ಇತ್ತೀಚಿಗೆ ಹೊಸ ನೇಮಕಾತಿ ಮಾಡಲು ಅಧಿ ಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕ ಸ್ಥಳದಲ್ಲಿ ಲೈಬ್ರರಿ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲಾವಕಾಶ ನೀಡಲಾಗಿದೆ. ಧಾರವಾಡ ಗ್ರಾಮ ಪಂಚಾಯತ್ ನೇಮಕಾತಿ 2024 ಒಟ್ಟು 32 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 4 ಆಗಿರುತ್ತದೆ. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸುತ್ತೇವೆ.
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತ ಪಡೆದ ಮಂಡಳಿಯಿಂದ ಪಿಯುಸಿ ಶಿಕ್ಷಣದಲ್ಲಿ ಪಾಸ್ ಆಗಿರಬೇಕು ಮತ್ತು ಇದರ ಜೊತೆ ಯಾವುದೇ ವಿಶ್ವವಿದ್ಯಾಲಯದಿಂದ ಗ್ರಂಥಾಲಯ ವಿಜ್ಞಾನದಲ್ಲಿ ಕೋರ್ಸ್ ಅನ್ನು ಪೂರ್ಣಗೊಳಿಸಿರಬೇಕು. ಈ ಎರಡು ಶಿಕ್ಷಣ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ವಿದ್ಯಾಭ್ಯಾಸ ಹೊಂದಿರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಪಡೆಯುವುದಿಲ್ಲ. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿಯು 18 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸಲು ಕೊನೆಯ ಗರಿಷ್ಠ ವಯಸ್ಸು 35 ವರ್ಷ ಆಗಿರಬೇಕು.
ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಇನ್ನು ಜನರಲ್ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಅಂಗವಿಕಲ ಮತ್ತು ವಿಧವೆ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕಿಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಮಾಜಿ ಸೈನಿಕರಿಗೆ ಗರಿಷ್ಠ 200 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ ನೂರು ರೂಪಾಯಿಗಳ ಅರ್ಜಿ ಶುಲ್ಕವನ್ನು ನೀಡಲಾಗಿದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಅಭ್ಯರ್ಥಿಗಳಿಗೆ ಸರ್ಕಾರಿ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.
ಈ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು ಈ ಕೆಳಗಿನಂತಿವೆ :
- ಮೊದಲಿಗೆ ಅಭ್ಯರ್ಥಿಗಳು ಇತ್ತೀಚೆಗೆ ಬಿಡುಗಡೆಯಾಗಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು. ನಂತರ ನೇಮಕಾತಿ ಲಿಂಕ್ ಕ್ಲಿಕ್ ಮಾಡಿ ಅರ್ಜಿ ನಮೂನೆ ಭರ್ತಿ ಮಾಡಲು ಪ್ರಾರಂಭ ಮಾಡಬೇಕು.
- ಅಭ್ಯರ್ಥಿಗಳಿಗೆ ಅರ್ಜಿ ನಮೂನೆ ಭರ್ತಿ ಮಾಡುವಾಗ ಅಭ್ಯರ್ಥಿಗಳ ಮಾಹಿತಿ, ಶೈಕ್ಷಣಿಕ ಮಾಹಿತಿ ಮೊಬೈಲ್ ನಂಬರ್ ಇಮೇಲ್ ಐಡಿ ಅನುಭವದ ಮಾಹಿತಿಗಳನ್ನು ಭರ್ತಿ ಮಾಡಲು ಇರುತ್ತದೆ. ಅಭ್ಯರ್ಥಿಗಳು ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆ ಭರ್ತಿ ಮಾಡಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಸಲ್ಲಿಸಿದ ಮಾಹಿತಿಗಳು ಸರಿಯಾಗಿದೆ ಎಂಬುದನ್ನು ಮತ್ತೊಮ್ಮೆ ಪರಿಶೀಲಿಸಿ ನಂತರ ಮುಂದಿನ ಹಂತದಲ್ಲಿ ಬೇಕಾಗಿರುವ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
- ಎಲ್ಲಾ ಮಾಹಿತಿಗಳನ್ನು ಪಿಡಿಎಫ್ ಅನ್ನು ಅಪ್ಲೋಡ್ ಮಾಡಿದ ನಂತರ ಮುಂದಿನ ಹಂತದಲ್ಲಿ ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ರಶೀದಿಯನ್ನು ಡೌನ್ಲೋಡ್ ಮಾಡಬೇಕು.
- ಕೊನೆಯದಾಗಿ ಅರ್ಜಿ ನಮೂನೆಯನ್ನು ಸಬ್ಮಿಟ್ ಮಾಡಿ ಅರ್ಜಿ ನಮೂನೆಯ ಪಿಡಿಎಫ್ ಫಾರ್ಮ್ ಅನ್ನು ಡೌನ್ಲೋಡ್ ಮಾಡಬೇಕು. ಅಗತ್ಯವಿದ್ದರೆ ಪ್ರಿಂಟ್ ಔಟ್ ತೆಗೆದುಕೊಳ್ಳಬಹುದು.
- ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶ ನೀಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 4 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು ಈ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ನಮ್ಮ ಡೈಲಿ ಕನ್ನಡ ನ್ಯೂಸ್ ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ನೀಡುವ ಮಾಹಿತಿಗಳು ನಿಖರವಾಗಿರುತ್ತದೆ. ಯಾವುದೇ ರೀತಿಯ ಗೊಂದಲವಿದ್ದರೆ ನಮ್ಮನ್ನು ಸಂಪರ್ಕಿಸಬಹುದು. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಸರ್ಕಾರಿ ಜಾಬ್ ಅಪ್ಡೇಟ್ಗಳು, ವಿದ್ಯಾಭ್ಯಾಸ, ವಿದ್ಯಾರ್ಥಿ ವೇತನ, ವ್ಯಾಪಾರ ಮುಂತಾದ ಮಾಹಿತಿಗಳ ಬಗ್ಗೆ ನೀಡುತ್ತೇವೆ. ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜೋಯ್ನಾಗಿ ಧನ್ಯವಾದಗಳು.
Notification PDF : 32-Library-Supervisor-Posts-Advt-Details-Dharwad-Gram-Panchayat (1)
News orginal source : Grama panchayat notification
