ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2025: ಭಾರತೀಯ ಕೋಸ್ಟ್ ಗಾರ್ಡ್ ಅಧಿಕಾರಿಗಳು ಇತ್ತೀಚಿಗೆ ಭಾರತದಾದ್ಯಂತ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲು ತನ್ನ ಅಧಿಕೃತ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 10 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದ್ದೇವೆ ನೋಡಿ.
| ಸಂಸ್ಥೆಯ ಹೆಸರು | ಭಾರತೀಯ ಕೋಸ್ಟ್ ಗಾರ್ಡ್ |
| ಒಟ್ಟು ಹುದ್ದೆಗಳ ಸಂಖ್ಯೆ | ನಾಲ್ಕು |
| ಪೋಸ್ಟ್ ಹೆಸರು | ಅಧಿಸೂಚನೆಯ ಪ್ರಕಾರ |
| ವೇತನ ಶ್ರೇಣಿ | 21700-69100 |
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2025 ಅರ್ಹತಾ ವಿವರಗಳು ಇಲ್ಲಿವೆ :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ ಪಾಸ್ ಅಥವಾ ಐಟಿಐ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯಸ್ಸಿನ ಮಿತಿ ಮಾಹಿತಿ :
ಭಾರತೀಯ ಕೋಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿಯನ್ನು 18ಕ್ಕೆ ಇರಿಸಲಾಗಿದೆ ಮತ್ತು ಗರಿಷ್ಠ 25 ವರ್ಷ ಆಗಿದೆ. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ:
ಎಸ್ ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ಅಭ್ಯರ್ಥಿಗಳಿಗೆ 5 ವಿಭಾಗಗಳ ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತದೆ. ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ಪ್ರೊಫೆಷನಲ್ ಮತ್ತು ಫಿಸಿಕಲ್ ಟೆಸ್ಟ್ ನಡೆಸಿ ಮೆಡಿಕಲ್ ಟೆಸ್ಟ್ ಮತ್ತು ಕೊನೆಯ ಹಂತದಲ್ಲಿ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ಹೇಗೆ ಅರ್ಜಿ ಸಲ್ಲಿಸಬೇಕು :
ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದೆ. ಮೊದಲಿಗೆ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡಿದ ನಂತರ ಈ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
ಕೋಸ್ಟ್ ಗಾರ್ಡ್ ಜಿಲ್ಲಾ ಪ್ರಧಾನ ಕಛೇರಿ ನಂ.3, ಪೋಸ್ಟ್ ಬಾಕ್ಸ್ ನಂ.19, ಪಣಂಬೂರು, ಹೊಸ ಮಂಗಳೂರು – 575010 ಗೆ ಕೊನೆಯ ದಿನಾಂಕದ ಮುನ್ನ ಸಲ್ಲಿಸಬೇಕು. ನೇಮಕಾತಿಗಳ ಪರೀಕ್ಷೆಗಳು ಈ ಕೇಂದ್ರಗಳಲ್ಲಿ ನಡೆಯಲಿದೆ ಜಿಲ್ಲಾ ಕೇಂದ್ರ ನಂ.3, ಮಂಗಳೂರು.
ಪ್ರಮುಖ ದಿನಾಂಕಗಳು: Indian Coast Guard recruitment
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 17-03-2025 ಆಗಿದೆ.
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-Apr-2025 ಆಗಿದೆ.
ನಮ್ಮ ಡೈಲಿ ಕನ್ನಡ ನ್ಯೂಸ್ ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ನೀಡುವ ಮಾಹಿತಿಗಳು ನಿಖರವಾಗಿರುತ್ತದೆ. ಯಾವುದೇ ರೀತಿಯ ಗೊಂದಲವಿದ್ದರೆ ನಮ್ಮನ್ನು ಸಂಪರ್ಕಿಸಬಹುದು. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಸರ್ಕಾರಿ ಜಾಬ್ ಅಪ್ಡೇಟ್ಗಳು, ವಿದ್ಯಾಭ್ಯಾಸ, ವಿದ್ಯಾರ್ಥಿ ವೇತನ, ವ್ಯಾಪಾರ ಮುಂತಾದ ಮಾಹಿತಿಗಳ ಬಗ್ಗೆ ನೀಡುತ್ತೇವೆ. ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜೋಯ್ನಾಗಿ ಧನ್ಯವಾದಗಳು.
ಅಧಿಕೃತ ಅಧಿಸೂಚನೆ : PDF
News orginal source : Indian Coast Guard recruitment
KPTCL ನೇಮಕಾತಿ 2025: ಕರ್ನಾಟಕ ಪವರ್ ಟ್ರಾನ್ಸ್ಮಿಷನ್ ಕಾರ್ಪೊರೇಷನ್
