ಕೈಗಾರಿಕಾ ವಿಸ್ತರಣಾಧಿಕಾರಿ ಮತ್ತು ಗ್ರಂಥಪಾಲಕ ಹುದ್ದೆಗಳಿಗೆ ನೇಮಕಾತಿ – KPSC new Notification 2024
ನಮಸ್ಕಾರ ಸ್ನೇಹಿತರೆ ಕೆಪಿಎಸ್ಸಿ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಹೊಸ ಅಧಿಸೂಚನೆಯ ಬಗ್ಗೆ ಈ ಲೇಖನದಲ್ಲಿ ಮಾಹಿತಿಯನ್ನು ನೀಡುತ್ತೇವೆ. ಕರ್ನಾಟಕ ಲೋಕಸೇವಾ ಆಯೋಗ ಇತ್ತೀಚಿಗೆ ಗ್ರೂಪ್ ಸಿ ಉಳಿಕೆ ಮೂಲ ವೃಂದ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಕೈಗಾರಿಕಾ ವಿಸ್ತರಣಾಧಿಕಾರಿ ಮತ್ತು ಗ್ರಂಥಪಾಲಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ಈ ಯುದ್ಧಗಳ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ನೀಡಿದ್ದೇನೆ. ಆದರಿಂದ ಕೊನೆಯವರೆಗೆ ಓದಿ.
ಹುದ್ದೆಗಳ ವಿವರಗಳು :
ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ನೇಮಕಾತಿಯನ್ನು ಮಾಡಲು ಅಧಿಕೃತ ನೋಟಿಫಿಕೇಶನ್ ಪ್ರಕಟ ಮಾಡಿದ್ದಾರೆ. ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಒಟ್ಟು 50 ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಒಟ್ಟು 10 ಗ್ರಂಥಪಾಲಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಬಹುದು.
ಅರ್ಜಿ ಸಲ್ಲಿಕೆಯ ನಿಗದಿಪಡಿಸಿರುವ ಕಾಲಮಿತಿಯ ಮಾಹಿತಿಗಳು :
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭ ದಿನಾಂಕ 29/04/2024
- ಆನ್ಲೈನ್ ಸರ್ಪ ಸಲ್ಲಿಸಲು ಕೊನೆಯ ದಿನಾಂಕ 28/05/2024
- ಆನ್ಲೈನ್ ಶುಲ್ಕ ಪಾವತಿಗೆ ಕೊನೆಯ ದಿನಾಂಕ 28/05/2024
ಅರ್ಜಿ ಶುಲ್ಕದ ಮಾಹಿತಿಗಳು :
- ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸರ್ಕಾರಿ ಪರೀಕ್ಷೆಯ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ.
- ಇನ್ನು ಪ್ರವರ್ಗ 2A,2B,3A,3B ಅಭ್ಯರ್ಥಿಗಳಿಗೆ ರೂ.300 ಗಳ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಮಾಜಿ ಸೈನಿಕರಿಗೆ 50 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿದೆ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತಾ ಮಾನದಂಡಗಳು :
- ಕರ್ನಾಟಕ ಲೋಕಸೇವಾ ಆಯೋಗದ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಭಾರತೀಯ ನಾಗರಿಕ ಇರಬೇಕು.
- ಅಭ್ಯರ್ಥಿ ಧೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಯಾವುದೇ ದೈಹಿಕ ಅಥವಾ ಮಾನಸಿಕ ನ್ಯೂನತೆಯಿಂದ ಇರಬಾರದು. ಇದರಿಂದ ಮುಕ್ತರಾಗಿರಬೇಕು ಅಂತಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
- ಪರೀಕ್ಷೆ ವೇಳೆ ದೈಹಿಕ ಪರೀಕ್ಷೆ ನಡೆಸುವಾಗ ದೈಹಿಕವಾಗಿ ಅನರ್ಹ ಎಂಬುದು ಸಾಬಿತಾದರೆ ಅಂತ ಅಭ್ಯರ್ಥಿಗಳನ್ನು ತಿರಸ್ಕರಿಸುವ ಪೂರ್ಣ ಹಕ್ಕು ರಾಜ್ಯ ಸರ್ಕಾರಕ್ಕೆ ಇರುತ್ತದೆ.
- ಈಗಾಗಲೇ ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯನ್ನು ಹೊಂದಿರುವ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಪಡೆಯುವುದಿಲ್ಲ.
ನೇಮಕಾತಿಯ ವಿಧಾನ :
ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯ ನಡೆಸಲಾಗುತ್ತದೆ. ಸಂಸ್ಥೆಯ ನಿಯಮಗಳ ಪ್ರಕಾರ ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ನೀಡಲಾಗುತ್ತದೆ. ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಕನಿಷ್ಠ 50 ಅಂಕಗಳನ್ನು ಪಡೆಯಬೇಕು. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಎಸ್ ಎಸ್ ಎಲ್ ಸಿ ಹಂತದಲ್ಲಿನ ಪ್ರಥಮ ಭಾಷೆಯಾಗಿರುವ ಕನ್ನಡ ಭಾಷೆಯ ಮಾನದಂಡವಾಗಿಸಿಕೊಂಡು ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಲಾಗುತ್ತದೆ.
ಹುದ್ದೆಗಳಿಗೆ ಕನ್ನಡ ಭಾಷೆಯ ಪರೀಕ್ಷೆಯಲ್ಲಿ ಅನಾರಹರಾದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕನಿಷ್ಠ 35ರಷ್ಟು ಅಂಕಗಳನ್ನು ಗಳಿಸಿರುವುದು ಕಡ್ಡಾಯವಾಗಿರುತ್ತದೆ. ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಶೇಕಡವಾರು ಪ್ರಮಾಣದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆಯ ವಿಧಾನ :
ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಮಾಹಿತಿಯಂತೆ ಅಭ್ಯರ್ಥಿಗಳಿಗೆ ಎರಡು ಪತ್ರಿಕೆಗಳನ್ನು ನೀಡಲಾಗುತ್ತದೆ. ಪ್ರತಿಯೊಂದು ಪ್ರಶ್ನೆ ಪತ್ರಿಕೆಯು 100 ಅಂಕಗಳನ್ನು ಒಳಗೊಂಡಿರುತ್ತದೆ. ಲಿಖಿತ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಪ್ರಶ್ನೆ ಪತ್ರಿಕೆಯು ಬಹು ಆಯ್ಕೆ ಮಾದರಿಯಲ್ಲಿರುತ್ತದೆ. ಅಭ್ಯರ್ಥಿಗಳು ನಾಲ್ಕನೇ ಒಂದು ಭಾಗದಷ್ಟು ಅಂಕಗಳನ್ನು ನೆಗೆಟಿವ್ ಮಾಡಲಾಗುತ್ತದೆ ಪ್ರತಿ ತಪ್ಪು ಉತ್ತರಗಳಿಗೆ. ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾಗಲು ಅಭ್ಯರ್ಥಿಗಳು ಎರಡು ಪ್ರಶ್ನೆ ಪತ್ರಿಕೆಯನ್ನು ಬರೆಯುವುದು ಕಡ್ಡಾಯವಾಗಿರುತ್ತದೆ.
ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಕೇಂದ್ರವನ್ನು ಆಯ್ಕೆ ಮಾಡಲು ಅವಕಾಶ ಇರುವುದಿಲ್ಲ. ಸಂಬಂಧಿಸಿ ದ ಆಯೋಗವು ನಿಗದಿಪಡಿಸಿರುವ ಕೇಂದ್ರದಲ್ಲಿಯೇ ಅಭ್ಯರ್ಥಿಗಳು ಹೋಗಿ ತಮ್ಮ ಪರೀಕ್ಷೆಯನ್ನು ಬರೆಯಬಹುದಾಗಿದೆ. ಇದರ ಬಗ್ಗೆ ಯಾವುದೇ ಗೊಂದಲವಿದ್ದರೆ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣ ಓದಬಹುದು.
ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ ಆಗಿದೆ. ಇನ್ನು ಉಳಿದ ಪ್ರವರ್ಗ 2A,2B,3B,3A ಅಭ್ಯರ್ಥಿಗಳಿಗೆ 38 ವರ್ಷಗಳವರೆಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷಗಳ ವರೆಗೆ ಅರ್ಜಿ ಸಲ್ಲಿಸಲ ಅವಕಾಶ ನೀಡಲಾಗಿದೆ.
ಹುದ್ದೆಗಳನ್ನು ಸಾರ ಬೇಕಾಗಿರುವ ಶೈಕ್ಷಣಿಕ ಮಾಹಿತಿ ಮತ್ತು ವೇತನದ ಮಾಹಿತಿಗಳು :
ಇಲಾಖೆಯ ಹೆಸರು : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಕೈಗಾರಿಕಾ ವಿಸ್ತರಣಾಧಿಕಾರಿ 50 ಹುದ್ದೆಗಳು RPC
- ವೇತನದ ಮಾಹಿತಿಗಳು : ಈ ಮೇಲೆ ನೀಡಿರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 33,450 ಇಂದ 62,600 ರೂಪಾಯಿಗಳವರೆಗೆ ವೇತನವನ್ನು ನೀಡಲಾಗುತ್ತದೆ.
- ಬೇಕಾಗಿರುವ ಶೈಕ್ಷಣಿಕ ಮಾಹಿತಿಗಳು : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸೈನ್ಸ್ ಅಥವಾ ಕೋಮರ್ಸಿನಲ್ಲಿ ಡಿಗ್ರಿ ಪದವಿಯನ್ನು ಪಡೆದಿರಬೇಕು ಅಥವಾ ಎನಿ ಬ್ರಾಂಚ್ ಆಫ್ ಬ್ಯಾಚುಲರ್ ಆಫ್ ಇಂಜಿನಿಯರಿಂಗ್ ಶಿಕ್ಷಣವನ್ನು ಹೊಂದಿರಬೇಕು.
ಇಲಾಖೆಯ ಹೆಸರು : ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿನ ಗ್ರಂಥಪಾಲಕ ಒಟ್ಟು 10 ಹುದ್ದೆಗಳು
- ನೀಡಲಾಗುವ ವೇತನದ ಮಾಹಿತಿಗಳು : ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.37,900 ರೂಪಾಯಿಂದ 70,850 ರೂಪಾಯಿಗಳವರೆಗೆ ವೇತನವನ್ನು ನೀಡಲಾಗುತ್ತದೆ.
- ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಲೈಬ್ರರಿ ಸೈನ್ಸ್ ನಲ್ಲಿ ಪದವಿ ಶಿಕ್ಷಣವನ್ನು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪಡೆದಿರಬೇಕು.
ವಿಶೇಷ ಸೂಚನೆಗಳು :
- ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಭರ್ತಿ ಮಾಡುವ ಎಲ್ಲಾ ವಿವರಗಳನ್ನು ಸರಿಯಾಗಿ ಅರ್ಥ ಮಾಡಿಸಿಕೊಂಡು ನಂತರವೇ ಅರ್ಜಿಯನ್ನು ಭರ್ತಿ ಮಾಡಿ.
- ಒಂದು ಸಾರಿ ಅರ್ಜಿ ಸಲ್ಲಿಸಿದ ನಂತರ ಮತ್ತೆ ಯಾವುದೇ ಮಾಹಿತಿಗಳನ್ನು ತಿದ್ದುಪಡಿ ಮಾಡಲ ಅವಕಾಶ ಇರುವುದಿಲ್ಲ ಅಥವಾ ಸೇರ್ಪಡೆ ಮಾಡಲು ಅವಕಾಶ ಇರುವುದಿಲ್ಲ.
- ಅಭ್ಯರ್ಥಿಗಳು ಸಲ್ಲಿಸಿರುವ ಎಲ್ಲಾ ಮಾಹಿತಿಗಳು ಸರಿಯಾಗಿ ಇದೆಯೇ ಎಂಬುದನ್ನು ದೃಢೀಕರಿಸಿ ನಂತರವೇ ಅರ್ಜಿಯನ್ನು ಸಲ್ಲಿಸಿ.
- ದಾಖಲೆಗಳ ಪರಿಶೀಲನೆ ಮಾಡುವ ಸಮಯದಲ್ಲಿ ಅಭ್ಯರ್ಥಿಗಳು ನೀಡಿರುವ ಯಾವುದೇ ಮಾಹಿತಿಗಳು ತಪ್ಪಿದ್ದರೆ ಅಂತಹ ಮೀಸಲಾತಿಗಳ ಅಥವಾ ಅಭ್ಯರ್ಥಿಗಳನ್ನು ತಿರಸ್ಕರಿಸಬಹುದು.
- ಒಂದು ಬಾರಿ ಸಲ್ಲಿಸಿದ ಅರ್ಜಿಯಲ್ಲಿ ಯಾವುದೇ ರೀತಿಯ ಹೆಸರು ಜನ್ಮ ದಿನಾಂಕ ವಿಳಾಸ ಬದಲಾವಣೆ ಮೀಸಲಾತಿ ವಿದ್ಯಾಭ್ಯಾಸದ ತಿದ್ದುಪಡಿ ಮಾಡುವ ಅರ್ಜಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಒಂದು ವೇಳೆ ಯಾವುದೇ ಮಾಹಿತಿಗಳ ತಪ್ಪಿದ್ದರೆ ಡಿಲೀಟ್ ಮಾಡಿ ಮತ್ತೊಮ್ಮೆ ಅರ್ಜಿ ಸಲ್ಲಿಸಲಾವಕಾಶ ಇರುತ್ತದೆ.
- ಆದರೆ ಒಂದು ಬಾರಿ ಪೇ ಮಾಡಿರುವ ಪರೀಕ್ಷಾ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.
- ಅಭ್ಯರ್ಥಿಗಳು ಅರ್ಜಿ ನಮೂನೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಶುಲ್ಕ ನೆಟ್ ಬ್ಯಾಂಕಿಂಗ್ ಯುಪಿಐ ಡೆಬಿಟ್ ಕಾರ್ಡ್ ಮೂಲಕ ಪಾವತಿ ಮಾಡಲು ಅವಕಾಶ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು :
- ಅಭ್ಯರ್ಥಿಗಳು ಮೊದಲಿಗೆ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
- ನಂತರ ರಿಜಿಸ್ಟರ್ ಬಟನನ್ನು ಹೊತ್ತುವ ಮೂಲಕ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ನೀಡಿ ಹೊಸ ಖಾತೆಯನ್ನು ಕ್ರಿಯೇಟ್ ಮಾಡಬೇಕು.
- ನಂತರ ಮುಂದಿನ ಹಂತದಲ್ಲಿ ಯೂಸರ್ ಐಡಿ ಮತ್ತು ಪಾಸ್ವರ್ಡ್ ಅನ್ನು ಸೆಟ್ ಮಾಡಿ ಲಾಗಿನ್ ಆಗಬೇಕು.
- ನಂತರ ಅಭ್ಯರ್ಥಿಗಳು ಪರ್ಸನಲ್ ಮಾಹಿತಿ ವಿದ್ಯಾಭ್ಯಾಸದ ಮಾಹಿತಿ ಮೀಸಲಾತಿ ಮಾಹಿತಿ ಮುಂತಾದ ಮಾಹಿತಿಗಳನ್ನು ಅಪ್ಡೇಟ್ ಮಾಡಬೇಕು.
- ಅಭ್ಯರ್ಥಿಗಳ ಇತ್ತೀಚಿನ ಪಾಸ್ಪೋರ್ಟ್ ಸೈಜ್ ಒಂದು ಫೋಟೋ ಮತ್ತು ಸಿಗ್ನೇಚರ್ ಫೋಟೋವನ್ನು ಸಂಸ್ಥೆಯು ನೀಡಿರುವ ನಿಯಮಗಳನ್ನುಸರ ಅಪ್ಲೋಡ್ ಮಾಡಬೇಕು.
- ನಂತರ ಅಭ್ಯರ್ಥಿಗಳು ಕೊನೆಯಲ್ಲಿ ಸೇವ್ ಮಾಡಿ preview ಬಟನನ್ನು ಒತ್ತಿ ನೀಡಿರುವ ಎಲ್ಲಾ ಮಾಹಿತಿಗಳು ಸರಿಯಾಗಿದೆ ಎಂಬುದನ್ನು ಮತ್ತೊಮ್ಮೆ ಪರಿಶೀಲಿಸಬೇಕು.
- ನಂತರ ಕೊನೆಯ ಹಂತದಲ್ಲಿ ಇತ್ತೀಚಿಗೆ ಬಿಡುಗಡೆಯಾಗಿರುವ ಹುದ್ದೆಗಳ ಹೆಸರುಗಳನ್ನು ಕಾಣಬಹುದು ಬಲಬದಿಯಲ್ಲಿರುವ ಅಪ್ಲೈ ಬಟನ್ ಅನ್ನು ಒತ್ತುವ ಮೂಲಕ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
- ನಂತರ ಮುಂದಿನ ಹಂತದಲ್ಲಿ ಎಕ್ಸಾಮ್ ಫೀಸ್ ಅನ್ನು ಪೇ ಮಾಡಿ ಅರ್ಜಿ ನಮೂನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಬಹುದು.
- ಅಭ್ಯರ್ಥಿಗಳು ಸರ್ಕಾರಿ ಅರ್ಜಿ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕು ಅರ್ಜಿ ಶುಲ್ಕ ಪಾವತಿ ಮಾಡದಿರುವ ಅರ್ಜಿ ನಮೂನೆಗಳನ್ನು ಪರಿಗಣಿಸಲಾಗುವುದಿಲ್ಲ.
ಪರೀಕ್ಷೆಯಲ್ಲಿ ಕೇಳಲಾಗುವ ಪಠ್ಯಕ್ರಮದ ಮಾಹಿತಿಗಳು :
1. ಮೊದಲನೇ ಪ್ರಶ್ನೆ ಪತ್ರಿಕೆಯಲ್ಲಿ ಅಭ್ಯರ್ಥಿಗಳಿಗೆ ಸಾಮಾನ್ಯ ಜ್ಞಾನ ಪ್ರಚಲಿತ ಘಟನೆಗಳು, ಸಾಮಾನ್ಯ ವಿಜ್ಞಾನ, ಭೂಗೋಳಶಾಸ್ತ್ರ, ಸಮಾಜ ವಿಜ್ಞಾನ, ಭಾರತೀಯ ಸಮಾಜ, ಬೆಳವಣಿಗೆ ಕರ್ನಾಟಕದ ಇತಿಹಾಸ, ಭಾರತದ ಸಂವಿಧಾನ, ಭೌತಿಕ ಸಾಮರ್ಥ್ಯದ ವಿಷಯಗಳು, ಕರ್ನಾಟಕದ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಾಂಸ್ಕೃತಿಕ ಇತಿಹಾಸದ ವಿಷಯಗಳು, ಕರ್ನಾಟಕ ಭೂ ಸುಧಾರಣೆ ಸಾಮಾಜಿಕ ಬದಲಾವಣೆಗಳು ಕರ್ನಾಟಕದ ಅರ್ಥವ್ಯವಸ್ಥೆ ಭೌತಿಕ ಸಾಮರ್ಥ್ಯದ ವಿಷಯಗಳು, ಗ್ರಾಮೀಣ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ವಿಷಯಗಳ ಬಗ್ಗೆ ಪ್ರಶ್ನೆ ಪತ್ರಿಕೆಯಲ್ಲಿ ಕೇಳಲಾಗುತ್ತದೆ.
2. ಎರಡನೇ ಪ್ರಶ್ನೆ ಪತ್ರಿಕೆಯಲ್ಲಿ ಸಾಮಾನ್ಯ ಕನ್ನಡ ಸಾಮಾನ್ಯ ಇಂಗ್ಲಿಷ್ ಕಂಪ್ಯೂಟರ್ ಜ್ಞಾನ ಪ್ರಶ್ನೆಗಳನ್ನು ನೀಡಲಾಗುತ್ತದೆ. ಸಾಮಾನ್ಯ ಕನ್ನಡ ಮತ್ತು ಸಾಮಾನ್ಯ ಇಂಗ್ಲಿಷ್ ವಿಷಯಕ್ಕೆ 70 ಅಂಕಗಳು ಮತ್ತು ಕಂಪ್ಯೂಟರ್ ಜ್ಞಾನ ವಿಷಯಕ್ಕೆ 30 ಅಂಕಗಳನ್ನು ನಿಗದಿಪಡಿಸಲಾಗಿದೆ. ಒಟ್ಟು ನೂರು ಅಂಕಗಳು ಇರುತ್ತದೆ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು 2 ಗಂಟೆಗಳ ಅವಕಾಶ ನೀಡಲಾಗುತ್ತದೆ.
ಈ ಲೇಖನದಲ್ಲಿ ನಾವು ಕೆಪಿಎಸ್ಸಿನ ಹೊಸ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ನಮ್ಮ ಡೈಲಿ ಕನ್ನಡ ನ್ಯೂಸ್ ಚಾನೆಲ್ ನಲ್ಲಿ ಯಾವುದೇ ಸುಳ್ಳು ಅಥವಾ ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಮಾಹಿತಿಯನ್ನು ಮಾತ್ರ ನಮ್ಮ ವೆಬ್ ಸೈಟ್ ನಲ್ಲಿ ಪಬ್ಲಿಶ್ ಮಾಡುತ್ತೇವೆ. ನಾವು ಯಾವುದೇ ಡೈರೆಕ್ಟ್ ಜಾಬ್ಗಳನ್ನು ನೀಡುವುದಿಲ್ಲ. ನಮಗೂ ಸರ್ಕಾರಗೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಬಹುದು ಧನ್ಯವಾದಗಳು.
News source : KPSC official website
