ನವೋದಯ ವಿದ್ಯಾಲಯ ಭರ್ಜರಿ ನೇಮಕಾತಿ, ಒಟ್ಟು 731 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವೋದಯ ವಿದ್ಯಾಲಯ ಭರ್ಜರಿ ನೇಮಕಾತಿ, ಒಟ್ಟು 731 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ – Navodhaya recruitment

ಸ್ನೇಹಿತರೆ ಈ ಲೇಖನದಲ್ಲಿ ನಾವು ನವೋದಯ ವಿದ್ಯಾಲಯ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಪ್ರಸ್ತುತ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 731 ಖಾಲಿ ಇರುವ ಪ್ರಿನ್ಸಿಪಲ್ ಮತ್ತು ಪಿಜಿಟಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನದ ಮಾಹಿತಿ, ಅರ್ಜಿ ಸಲ್ಲಿಸುವ ರೀತಿ ಪ್ರಮುಖ ದಿನಾಂಕಗಳ ಮಾಹಿತಿ ಎಲ್ಲಾ ಮಾಹಿತಿಯನ್ನು ಈ ಲೇಖನದಲ್ಲಿ ನೀಡುತ್ತೇವೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಓದಿ.

ಪ್ರಮುಖ ಹುದ್ದೆಗಳ ಮಾಹಿತಿಗಳು :

  • ಪ್ರಾಂಶುಪಾಲರ ಒಟ್ಟು 39 ಹುದ್ದೆಗಳು
  • ಉಪ ಪ್ರಾಂಶುಪಾಲರು ಒಟ್ಟು 141 ಹುದ್ದೆಗಳು
  • ಪಿ ಜಿ ಟಿ ಇಂಗ್ಲಿಷ್ ಒಟ್ಟು 75 ಹುದ್ದೆಗಳು
  • ಪಿಜಿಟಿ ಗಣಿತ 79 ಹುದ್ದೆಗಳು
  • ಪಿಜಿಟಿ ಬಯೋಲಜಿ ಹುದ್ದೆಗಳು
  • ಪಿ ಜಿ ಟಿ ಕೆಮಿಸ್ಟ್ರಿ ಒಟ್ಟು 61 ಹುದ್ದೆಗಳು
  • ಪಿಜಿಟಿ ಫಿಸಿಕ್ಸ್ ಒಟ್ಟು 97
  • ಪಿಜಿಟಿ ಭೂಗೋಳಶಾಸ್ತ್ರ ಒಟ್ಟು 38 ಹುದ್ದೆಗಳು
  • ದೈಹಿಕ ಶಿಕ್ಷಕರು ಒಟ್ಟು 23 ಹುದ್ದೆಗಳು
  • ಭಾಷಾ ಶಿಕ್ಷಕರು ಒಟ್ಟು 22 ಹುದ್ದೆಗಳು
  • ಒಟ್ಟು 731 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.

ವೇತನದ ಮಾಹಿತಿಗಳು :

1. ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಶ್ರೇಣಿಯನ್ನುಸಾರ ವೇತನವನ್ನು ನೀಡಲಾಗುತ್ತದೆ. ಪ್ರಾಂಶುಪಾಲರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಯ ಪ್ರಕಾರ 56 ಸಾವಿರದಿಂದ ಒಂದು ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ.

2. ಉಪ ಪ್ರಾಂಶುಪಾಲರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಯ ಪ್ರಕಾರ 47 ಸಾವಿರದಿಂದ ಒಂದು ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ.

3. ಪಿ ಜಿ ಟಿ ಶಿಕ್ಷಕರು ಪಿ ಜಿ ಟಿ ಶಿಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 47 ಸಾವಿರದಿಂದ ಒಂದು ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :

ಪ್ರಾಂಶುಪಾಲರು : ಪ್ರಾಂಶುಪಾಲರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 8 ವರ್ಷಗಳ pgt ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸಬೇಕು. ಮತ್ತು ಕನಿಷ್ಠ ಎರಡು ವರ್ಷಗಳ ಉಪ ಪ್ರಾಂಶುಪಾಲರಾಗಿ ಕೆಲಸದ ಅನುಭವವನ್ನು ಹೊಂದಿರಬೇಕು. ಈ ಅನುಭವ ಹೊಂದಿರುವ ಅಭ್ಯರ್ಥಿಗಳು ಮಾತ್ರ ಪ್ರಾಂಶುಪಾಲರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ.

ಉಪ ಪ್ರಾಂಶುಪಾಲರು : ಉಪ ಪ್ರಾಂಶುಪಾಲರು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಮೂರು ವರ್ಷಗಳ ಪಿ ಜಿ ಟಿ ಶಿಕ್ಷಕರಾಗಿ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು. ಈ ಅನುಭವ ಹೊಂದಿರುವ ಅಭ್ಯರ್ಥಿಗಳು ಮಾತ್ರ ಒಬ್ಬ ಪ್ರಾಂಶುಪಾಲರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಪಡೆಯುತ್ತಾರೆ.

ಪಿಜಿಟಿ ಶಿಕ್ಷಕರು ಪೋಸ್ಟ್ ಗ್ರಾಜುಯೇಷನ್ ಟೀಚರ್ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಮತ್ತು ಬಿಎಡ್ ಶಿಕ್ಷಣವನ್ನು ಮುಗಿಸಿರಬೇಕು. ಇದರ ಜೊತೆ ಕನಿಷ್ಠ ಮೂರು ವರ್ಷಗಳ ಕಾಯಂ ಶಿಕ್ಷಕರಾಗಿ ಕೆಲಸದ ಅನುಭವ ಹೊಂದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಬೇಕಾಗಿರುವ ಶೈಕ್ಷಣಿಕ ಹೆಚ್ಚಿನ ಮಾಹಿತಿ ಪಡೆಯಲು ಬಯಸುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಶುಲ್ಕದ ಮಾಹಿತಿಗಳು :

ನವೋದಯ ವಿದ್ಯಾಲಯ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ ಮಾಹಿತಿಗಳು :

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಮುಂದಿನ ಹಂತಕ್ಕೆ ತೇರ್ಗಡೆ ಮಾಡಲಾಗುತ್ತದೆ. ಮುಂದಿನ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಪಾಯಿಂಟ್ ಮಾಡಲಾಗುತ್ತದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ರೀತಿ :

  • ಅಭ್ಯರ್ಥಿಗಳು ಮೊದಲಿಗೆ ನವೋದಯ ವಿದ್ಯಾಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ನಲ್ಲಿ ಇತ್ತೀಚಿಗೆ ಬಿಡುಗಡೆ ಆಗಿರುವ ಅಧಿಕೃತ ಅಧಿಸೂಚನೆಯನ್ನು ಕಾಣಬೇಕು. ಮೊದಲಿಗೆ ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು
  • ನೀವೇನಾದರೂ ಮೊದಲ ಬಾರಿಗೆ ಅರ್ಜಿ ಸಲ್ಲಿಸುತ್ತಿದ್ದರೆ ರಿಜಿಸ್ಟರ್ ಬಟನ್ ಮೇಲೆ ಕ್ಲಿಕ್ ಮಾಡಿ ತಮ್ಮ ಖಾತೆಯನ್ನು ಓಪನ್ ಮಾಡಬೇಕು. ಅಭ್ಯರ್ಥಿಗಳು ಖಾತೆಯನ್ನು ಓಪನ್ ಮಾಡುವಾಗ ತಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ ನೀಡಬೇಕಾಗುತ್ತದೆ.
  • ಒಂದು ಬಾರಿ ನಿಮ್ಮ ಅಕೌಂಟ್ ಓಪನ್ ಆದ ಮೇಲೆ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿಗಳು ಲಾಗಿನ್ ಆಗಬೇಕು.
  • ನಂತರ ಇತ್ತೀಚೆಗೆ ಬಿಡುಗಡೆ ಆಗಿರುವ ಆದಿ ಸೂಚನೆಯ ಅಪ್ಲೈ ಬಟನ್ ಅನ್ನು ಕ್ಲಿಕ್ ಮಾಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆ ಭರ್ತಿ ಮಾಡುವಾಗ ಯಾವುದೇ ರೀತಿಯ ತಪ್ಪುಗಳನ್ನು ಮಾಡಬಾರದು.
  • ನಂತರ ಕೊನೆಯಲ್ಲಿ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಅನ್ನು ಒತ್ತುವ ಮೂಲಕ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಬೇಕು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :

ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ. ಆನ್ಲೈನ್ ಮೂಲಕ ಮೇ 27ರಂದು ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಇನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 10 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ನಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವವರ ಗಮನಕ್ಕೆ :

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಬೇಕಾಗಿರುವ ಶೈಕ್ಷಣಿಕ ಅರ್ಹತೆ ಮತ್ತು ಬೇಕಾಗುವ ಅನುಭವದ ಮಾಹಿತಿಯನ್ನು ಸರಿಯಾಗಿ ನೋಡಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮುನ್ನ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಅಭ್ಯರ್ಥಿಗಳು ಸ್ವತಃ ತಮ್ಮ ಮೊಬೈಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಒಂದು ವೇಳೆ ಅರ್ಜಿ ಸಲ್ಲಿಸಲು ಗೊತ್ತಿಲ್ಲವಾದರೆ ಹತ್ತಿರದ ಸೈಬರ್ ಸೆಂಟರ್ ಬೆಳೆ ಹೋಗಿ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.

ಡೈಲಿ ಕನ್ನಡ ನ್ಯೂಸ್ ಯಾವುದೇ ಸುಳ್ಳು ಸುದ್ದಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ಕೇವಲ ನಿಖರವಾದ ನಿಜ ಸುದ್ದಿಗಳನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪ್ರಕಟ ಮಾಡುತ್ತೇವೆ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧಗಳು ಇರುವುದಿಲ್ಲ. ನಾವು ಯಾವುದೇ ರೀತಿಯ ಜವಾಬುಗಳನ್ನು ನೀಡುವುದಿಲ್ಲ. ನಾವು ಕೇವಲ ಸರ್ಕಾರ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಮುನ್ನ ಸರಿಯಾಗಿ ಅಧಿ ಸೂಚನೆಯನ್ನು ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸುವುದು ಉತ್ತಮ. ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ.

ಡೈಲಿ ಕನ್ನಡ ನ್ಯೂಸ್ ನಲ್ಲಿ ಪ್ರತಿದಿನ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳ ಎಲ್ಲಾ ಇಲಾಖೆಯಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಪ್ರತಿದಿನ ಜಾಬ್‌ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಬಹುದು. ಇದರ ಜೊತೆ ನಮ್ಮ ಟೆಲಿಗ್ರಾಂ ಗ್ರೂಪ್ ಮತ್ತು ವಾಟ್ಸಪ್ ಗ್ರೂಪ್ ಅನ್ನು ಕೂಡ ಜಾಯಿನ್ ಆಗಬಹುದು. ಈ ಲೇಖನ ನಿಮಿಗಿಷ್ಟವಾಗಿದೆ ಎಂದು ಭಾವಿಸುತ್ತೇವೆ ಈ ಲೇಖನ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಈ ಲೇಖನ ಓದಕ್ಕಾಗಿ ಧನ್ಯವಾದಗಳು.

News Orginal Source : http://www.navodaya.gov.in/

By sapalyamanish

With five years of experience in news content writing, Mahesha has a proven track record of delivering high-quality journalism. Having worked with FastNews, Job Updates, and InfoKannada, they specialize in producing timely and insightful articles that engage and inform readers

Related Post

Leave a Reply

Your email address will not be published. Required fields are marked *