new jobs karnataka – ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಕಾರ್ಪೊರೇಷನ್ ನೇಮಕಾತಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಕಾರ್ಪೊರೇಷನ್ ಲಿಮಿಟೆಡ್ ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಸಂಸ್ಥೆಯ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕದಲ್ಲಿ ಜೂನಿಯರ್ ಅಸಿಸ್ಟೆಂಟ್ ಡ್ರೈವರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ವೇತನದ ಮಾಹಿತಿ ಮುಂತಾದ ಮಾಹಿತಿಗಳ ಬಗ್ಗೆ ಸಂಪೂರ್ಣ ವಿವರಗಳನ್ನು ನೀಡುತ್ತೇನೆ ಆದ್ದರಿಂದ ಕೊನೆಯವರೆಗೂ ಓದಿ.
ಖಾಲಿ ಇರುವ ಹುದ್ದೆಗಳ ವಿವರಗಳು :
ಚಾರ್ಟೆಡ್ ಅಕೌಂಟೆಂಟ್, ಆಫೀಸ,ರ್ ಟ್ರೈನಿಂಗ್ ಆಫೀಸರ್ ಅಸಿಸ್ಟೆಂಟ್ ಜೂನಿಯರ್ ಅಸಿಸ್ಟೆಂಟ್ ಡೆಫ್ಟಿ ಸ್ಟಾಫ್ ವೆಹಿಕಲ್ ಡ್ರೈವರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಒಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ ಶಿಕ್ಷಣ ಎಂಬಿಎ ಸಿಎ ಶಿಕ್ಷಣವನ್ನು ಹೊಂದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳ ಅನುಸಾರವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಅಭ್ಯರ್ಥಿಗಳ ವೇತನದ ವಿವರಗಳು :
ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 13000 ದಿಂದ 70000 ವರೆಗೆ ವೇತನವನ್ನು ನೀಡಲಾಗುತ್ತದೆ ಹುದ್ದೆಗಳ ಅನುಸಾರ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು
ಈ ಮೇಲಿನ ಹುದ್ದೆಗಳಿಗೆ ಹುದ್ದೆಗಳನ್ನುಸರ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಮತ್ತು ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸಿನ ಮಿತಿಯು 35 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿ ಒಳಗೆ ಬರುವ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಯಸ್ಸಿನ ಮಿತಿಯ ಹೆಚ್ಚಿನ ಮಾಹಿತಿಯನ್ನು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದು.
ಅರ್ಜಿ ಶುಲ್ಕದ ಮಾಹಿತಿಗಳು :
ಈ ಮೇಲಿನ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ಕೆಟಗರಿಯ ಅಭ್ಯರ್ಥಿಗಳಿಗೆ 500 ರೂಪಾಯಿಗಳ ಸರ್ಕಾರಿ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಟೈಪಿಸ್ಟ್ ಜೂನಿಯರ್ ಅಸಿಸ್ಟೆಂಟ್ ವೆಹಿಕಲ್ ಡ್ರೈವರ್ ಹುದ್ದೆಗಳಿಗ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ.300 ಗಳ ಸರ್ಕಾರಿ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.
ಆಯ್ಕೆಯ ಪ್ರಕ್ರಿಯೆಯ ಮಾಹಿತಿಗಳು :
ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ ಲಿಖಿತ ಪರೀಕ್ಷೆಯ ನಂತರ ಅಭ್ಯರ್ಥಿಗಳಿಗೆ ಸಂಸ್ಥೆಗಳನ್ನು ಆಯ್ಕೆ ಮಾಡುತ್ತದೆ.
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕ್ರಮಗಳು :
- ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಮೊದಲಿಗೆ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟಿಗೆ ಭೇಟಿಯನ್ನು ನೀಡಿ ಇತ್ತೀಚಿಗೆ ಬಿಡುಗಡೆಯಾಗಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಮೊದಲಿಗೆ ಸಂಪೂರ್ಣವಾಗಿ ಓದಬೇಕು.
- ನಂತರ ಮುಂದಿನ ಹಂತದಲ್ಲೇ ಅರ್ಜಿ ನಮೂನೆಯ ಪಿಡಿಎಫ್ ಕಾಪಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು ಮತ್ತು ಅರ್ಜಿ ನಮೂನೆ ಭರ್ತಿ ಮಾಡಬೇಕು.
- ಅರ್ಜಿ ನಮೂನೆ ಭರ್ತಿ ಮಾಡುವಾಗ ಯಾವುದೇ ರೀತಿಯ ತಪ್ಪುಗಳನ್ನು ಮಾಡಬಾರದು. ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರ ಶೈಕ್ಷಣಿಕ ವಿವರ ಮತ್ತು ಇತರೆ ಮಾಹಿತಿಗಳನ್ನು ನೀಡಬೇಕಾಗುತ್ತದೆ.
- ನಂತರ ಕೊನೆ ಹಂತದಲ್ಲಿ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ಅಭ್ಯರ್ಥಿಗಳು ಸಂಸ್ಥೆಯು ನಿಗದಿಪಡಿಸಿರುವ ವಿಳಾಸಕ್ಕೆ ಅರ್ಜಿ ನಮೂನೆಯ ಜೊತೆ ಬೇಕಾಗಿರುವ ಅಗತ್ಯ ದಾಖಲೆಗಳನ್ನು ಪೋಸ್ಟ್ ಮೂಲಕ ಕಳುಹಿಸಬೇಕು. ಪೋಸ್ಟ್ ಮೂಲಕ ಕಳಿಸಬೇಕಾದ ವಿಳಾಸವನ್ನು ಕೆಳಗೆ ನೀಡಿದ್ದೇವೆ ನೋಡಿ.
- ಅರ್ಜಿ ಸಲ್ಲಿಸಬೇಕಾದ ವಿಳಾಸ ಸಹಕಾರಿ ಸೌಧ ಮೊದಲನೇ ಫ್ಲೋರ್ 18 ಕ್ರಾಸ್ ಮರಗೋಸ ರೋಡು ಮಲ್ಲೇಶ್ವರಂ ಬೆಂಗಳೂರು 560055.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ :
ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿರುತ್ತದೆ ಮತ್ತು ಆಫ್ಲೈನ್ ಮೂಲಕ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 26 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಜಾಬುಗಳನ್ನು ನೀಡುವುದಿಲ್ಲ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನೀಡುತ್ತೇವೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸುವ ಮುನ್ನ ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ನಂತರ ಯಾವುದೇ ರೀತಿಯ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ.
ಈ ಲೇಖನ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಲೇಖನ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು.
