ಅಂಚೆ ಇಲಾಖೆಯಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ 2024 – Post Office Driver Recruitment 2024
ಡೈಲಿ ಕನ್ನಡ ನ್ಯೂಸ್ ಗೆ ಸ್ವಾಗತ. ಇತ್ತೀಚಿಗೆ ಪೋಸ್ಟ್ ಆಫೀಸ್ ಇಲಾಖೆಯಿಂದ ಕರ್ನಾಟಕದಲ್ಲಿ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದಾರೆ. ಹೊಸ ನೋಟಿಫಿಕೇಶನ್ ಪ್ರಕಾರ ವಿವಿಧ ಸ್ಥಳಗಳಲ್ಲಿ ನೇಮಕಾತಿ ಮಾಡಲಾಗುತ್ತದೆ. ಹುದ್ದೆಗಳ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ಸಂಕ್ಷಿಪ್ತವಾಗಿ ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಓದಿ.
ಅಧಿಕೃತ ಅಧಿಸೂಚನೆಯಂತೆ ಕರ್ನಾಟಕದ ಚಿಕ್ಕೋಡಿ, ಕಲಬುರಗಿ, ಹಾವೇರಿ, ಕಾರವಾರ, ಬೆಂಗಳೂರು, ಮಂಡ್ಯ, ಮೈಸೂರು, ಪುತ್ತೂರು, ಶಿವಮೊಗ್ಗ, ಉಡುಪಿ ಮತ್ತು ಕೋಲಾರ ಡಿವಿಜನ್ ಗಳಲ್ಲಿ ನೇಮಕಾತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ರೀತಿಯನ್ನು ಈ ಲೇಖನದಲ್ಲಿ ಹೇಳಿದ್ದೇವೆ. ಈ ಮೇಲೆ ನೀಡಿರುವ ಸ್ಥಳಗಳಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಇಲಾಖೆ |
Post Office Driver Recruitment |
ಉದ್ಯೋಗ ಸ್ಥಳ |
ಕರ್ನಾಟಕ |
ಹುದ್ದೆಯ ವಿವರ |
ಸ್ಟಾಪ್ ಕಾರ್ ಡ್ರೈವರ್ |
ಅರ್ಜಿ ಸಲ್ಲಿಕೆ ರೀತಿ |
ಆಫ್ಲೈನ್ |
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :
ಪೋಸ್ಟ್ ಆಫೀಸ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಅಧಿಕೃತ ಸಂಸ್ಥೆ ಅಥವಾ ಮಂಡಳಿಯಿಂದ ಪಡೆದಿರಬೇಕು. ಇದರ ಜೊತೆಗೆ ಲಘು ಮತ್ತು ಬಾರಿ ವಾಹನ ಚಲನೆ ಚಲಾವಣೆಯಲ್ಲಿ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು ಮತ್ತು ಮೋಟರ್ ಮೆಕ್ಯಾನಿಸಂ ಬಗ್ಗೆ ಮಾಹಿತಿ ಗೊತ್ತಿರಬೇಕು. ಈ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಎಲ್ಲಾ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಎಲ್ಲಾ ಅಧಿಕೃತ ದಾಖಲೆಗಳನ್ನು ನೀಡಬೇಕಾಗುತ್ತದೆ. ಅಧಿಕೃತ ದಾಖಲೆಗಳನ್ನು ನೀಡಿ ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿದೆ ಮತ್ತು ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 27 ವರ್ಷ ಆಗಿದೆ. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ವಯಸ್ಸಿನ ಕೆಳಗೆ ಅಥವಾ ಮೇಲೆ ಇರುವ ಅಭ್ಯರ್ಥಿಗಳು ವಯೋಮಿತಿಯ ಸಡಿಲಿಕೆ ಪಡೆಯುತ್ತಾರೆ. ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಗಳಿಗೆ ಗರಿಷ್ಟ 5 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆಯನ್ನು ನೀಡಲಾಗಿದೆ. ಮತ್ತು ಅರ್ಜಿ ಸಲ್ಲಿಸುವ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ.
ವೇತನದ ಮಾಹಿತಿಗಳು :
ಪೋಸ್ಟ್ ಆಫೀಸ್ ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಯ ಪ್ರಕಾರ ತಿಂಗಳಿಗೆ 19,000 ದಿಂದ 63 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ವೇತನದ ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಶನ್ ಅನ್ನು ನೋಡಿ. ಅಭ್ಯರ್ಥಿಗಳ ಸಾಮರ್ಥ್ಯದ ಅನುಸಾರ ವೇತನವನ್ನು ನೀಡಲಾಗುತ್ತದೆ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಮಾಡಿದ ರಿಸಲ್ಟ್ ನ ಮೇಲೆ ವೇತನವನ್ನು ನಿಗದಿಪಡಿಸಲಾಗುತ್ತದೆ.
ಆಯ್ಕೆ ವಿಧಾನದ ಮಾಹಿತಿಗಳು :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಚಾಲನ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಮೋಟರ್ ಮೆಕಾನಿಸಂ ಜ್ಞಾನಗಳ ಬಗ್ಗೆ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಮೇಲೆ ನೀಡಿರುವ ಆಯ್ಕೆ ವಿಧಾನದ ಮೂಲಕ ಮಾತ್ರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು :
- ಈ ಮೇಲೆ ನೀಡಿರುವ ಹುದ್ದೆಗಳಿಗೆ ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.
- ಅಭ್ಯರ್ಥಿಗಳು ಮೊದಲಿಗೆ ಪೋಸ್ಟ್ ಆಫೀಸ್ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಸಂಸ್ಥೆಯು ಇತ್ತೀಚೆಗೆ ಬಿಡುಗಡೆ ಮಾಡಿರುವ ಹೊಸ ನೋಟಿಫಿಕೇಶನ್ಡೌ ನ್ಲೋಡ್ ಮಾಡಬೇಕು. ಡೌನ್ಲೋಡ್ ಮಾಡಿದ ನಂತರ ಸಂಪೂರ್ಣವಾಗಿ ಓದಬೇಕು
- ನಂತರ ಎರಡನೇ ಹಂತದಲ್ಲಿ ಅಪ್ಲಿಕೇಶನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
- ನಂತರ ಅಪ್ಲಿಕೇಶನ್ ಫಾರ್ಮ್ ಅನ್ನು ಪ್ರಿಂಟ್ ಔಟ್ ತೆಗೆದುಕೊಂಡು ಹೇಳಲಾಗಿರುವ ಎಲ್ಲಾ ಮಾಹಿತಿಯನ್ನು ಯಾವುದೇ ತಪ್ಪುಗಳನ್ನು ಮಾಡದೆ ಭರ್ತಿ ಮಾಡಬೇಕು.
- ಅಪ್ಲಿಕೇಶನ್ ಫಾರ್ಮಲ್ಲಿ ಅಭ್ಯರ್ಥಿಯ ಹೆಸರು ವಿಳಾಸ ವಿದ್ಯಾಭ್ಯಾಸದ ಮಾಹಿತಿ ಮೊಬೈಲ್ ಸಂಖ್ಯೆ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡಲೇ ಇರುತ್ತದೆ.
- ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ಎಲ್ಲಾ ಮಾಹಿತಿಗಳು ಸರಿಯಾಗಿ ಇದೆಯೇ ಎಂಬುದನ್ನು ಖಚಿತಪಡಿಸಿಕೊಂಡು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ನಂತರ ಅರ್ಜಿ ನಮೂನೆಯ ಜೊತೆ ನಿಮ್ಮ ಎಲ್ಲಾ ಅಗತ್ಯ ದಾಖಲೆಗಳನ್ನು ಲಗ್ಗತ್ತಿಸಿ ಕೆಳಗೆ ನೀಡಿರುವ ಸಂಸ್ಥೆಯ ಅಧಿಕೃತ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
- ಅರ್ಜಿ ಸಲ್ಲಿಕೆಯ ವಿಳಾಸ ಮ್ಯಾನೇಜರ್ ಮೇಲ್ ಮೋಟರ್ ಸರ್ವಿಸ್ ಬೆಂಗಳೂರು 560001
- ಈ ವಿಳಾಸಕ್ಕೆ ಅಭ್ಯರ್ಥಿಗಳು ಪೋಸ್ಟ್ ಮೂಲಕ ತಮ್ಮ ಅರ್ಜಿ ನಮೂನೆಯನ್ನು ಸಲ್ಲಿಸಬೇಕಾಗುತ್ತದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮೇ 14 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಯೇ ನಂತ ಅರ್ಜಿಯನ್ನು ಸಲ್ಲಿಸುವುದು ಉತ್ತಮ.
ಪ್ರಮುಖ ಮಾಹಿತಿಗಳು :
ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಮಾತ್ರ ಅರ್ಜಿ ಸಲ್ಲಿಸಲ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಸ್ಥೆಯು ನಿಗದಿಪಡಿಸಿದಂತೆ ವಿದ್ಯಾಭ್ಯಾಸದ ಜೊತೆ ಲಘು ವಾಹನದಲ್ಲಿ ಮೂರು ವರ್ಷಗಳ ಅನುಭವವನ್ನು ಹೊಂದಿರುವವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಈ ಅರ್ಹತೆ ಹೊಂದಿರಲು ಸಾಧ್ಯವಿಲ್ಲದ ಅಭ್ಯರ್ಥಿಗಳ ಅಪ್ಲಿಕೇಶನ್ ಅನ್ನು ತಿರಸ್ಕಾರ ಮಾಡಲಾಗುತ್ತದೆ. ಆದ್ದರಿಂದ ಸರಿಯಾಗಿ ನೋಡಿ ತಮ್ಮ ಅರ್ಜಿಯನ್ನು ಸಲ್ಲಿಸುವುದು ಉತ್ತಮವಾಗಿದೆ.
ಅಭ್ಯರ್ಥಿಗಳಿಗೆ ಯಾವುದೇ ಗೊಂದಲವಿದ್ದರೆ ಅಥವಾ ಅರ್ಜಿ ಸಲ್ಲಿಸುವಾಗ ಯಾವುದಾದರೂ ತೊಂದರೆಗಳನ್ನ ಅನುಭವಿಸಿದರೆ ಸಂಸ್ಥೆಯಾ ಅಧಿಕೃತ ಸಹಾಯವಾಣಿಗೆ ಫೋನ್ ಮಾಡಿ ಸಹಾಯವನ್ನು ಪಡೆಯಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕಗಳು ಇರುವುದಿಲ್ಲ. ಎಲ್ಲಾ ಕೆಟಗರಿಯಲ್ಲಿ ಬರುವ ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಚಲನ ಅಥವಾ ಎಕ್ಸಾಮ್ ಫೀಸ್ ಇರುವುದಿಲ್ಲ. ಇದರಿಂದ ಹೆಚ್ಚಿನ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ.
ಪೋಸ್ಟ್ ಆಫೀಸ್ನ ಹುದ್ದೆಗಳ ಸಂಖ್ಯೆ ಮತ್ತು ಸ್ಥಳಗಳ ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಶನ್ ಪಿಡಿಎಫ್ ಅನ್ನು ನೋಡಬಹುದು. ನೀಡಿರುವ ಸ್ಥಳಗಳಲ್ಲಿ ಮಾತ್ರ ನೇಮಕಾತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಯಾವುದಾದರೂ ಒಂದು ಸ್ಥಳಕ್ಕೆ ತಮ್ಮ ಅರ್ಜಿಯನ್ನು ಸಲ್ಲಿಸಲಾವಕಾಶ ನೀಡಲಾಗಿದೆ. ಆದ್ದರಿಂದ ಎಚ್ಚರಿಕೆಯಿಂದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಅರ್ಜಿ ನಮೂನೆ ಭರ್ತಿ ಮಾಡುವಾಗ ಯಾವುದೇ ತಪ್ಪುಗಳನ್ನು ಮಾಡಿದರೆ ಅಂತ ಅರ್ಜಿಗಳನ್ನು ಸಂಸ್ಥೆಯು ಪರಿಗಣಿಸುವುದಿಲ್ಲ. ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮಾಹಿತಿ, ಜಾತಿ ಸರ್ಟಿಫಿಕೇಟ್, ಆಧಾರ್ ಕಾರ್ಡ್ ಫೋಟೋ, ಪಾಸ್ಪೋರ್ಟ್ ಸೈಜ್ ಫೋಟೋ ಇಂತಾದ ದಾಖಲೆಗಳನ್ನು ನೀಡಬೇಕಾಗುತ್ತದೆ.
ಓದುಗರ ಗಮನಕ್ಕೆ :
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಪೋಸ್ಟ್ ಆಫೀಸ್ ಜಾಬ್ ಗಳನ್ನು ಡೈರೆಕ್ಟ್ ನೀಡುವುದಿಲ್ಲ. ನಾವು ಸರ್ಕಾರ ಹೊರಡಿಸುವ ನೋಟಿಫಿಕೇಶನ್ ನ ಮಾಹಿತಿಯನ್ನು ಮಾತ್ರ ನಿಮಗೆ ನೀಡುತ್ತೇವೆ ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಯಾವುದೇ ರೀತಿಯ ಜಾಬ್ ಗಳನ್ನು ನೀಡುವುದಿಲ್ಲ. ನಾವು ಕೇವಲ ಪ್ರತಿದಿನ ಸರ್ಕಾರ ಬಿಡುಗಡೆ ಮಾಡುವ ಹೊಸ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ ಆದ್ದರಿಂದ ಎಚ್ಚರಿಕೆಯಿಂದ ಇರಿ.
ನಮ್ಮ ವೆಬ್ ಸೈಟ್ ನಲ್ಲಿ ಪಬ್ಲಿಶ್ ಮಾಡುವ ಎಲ್ಲಾ ಮಾಹಿತಿಗಳು ನಿಖರವಾಗಿ ಮತ್ತು ಸತ್ಯವಾಗಿರುತ್ತದೆ. ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಅಥವಾ ಫೇಕ್ ಸುದ್ದಿಗಳನ್ನು ನಮ್ಮ ವೆಬ್ಸೈಟ್ನಲ್ಲಿ ಪ್ರಕಟ ಮಾಡುವುದಿಲ್ಲ. ನಾವು ನೀಡುವ ಎಲ್ಲಾ ಮಾಹಿತಿಗಳು ಅಧಿಕೃತ ಮಾಹಿತಿಗಳಾಗಿರುತ್ತದೆ. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಗೊಂದಲವಿದ್ದರೆ ನಮ್ಮನ್ನು ಸಂಪರ್ಕಿಸಬಹುದು ಅಥವಾ ಅಧಿಕೃತ ನೋಟಿಫಿಕೇಶನ್ ವೆಬ್ಸೈಟ್ ಗೆ ಭೇಟಿ ನೀಡಿ ನೇಮಕಾತಿಯ ಬಗ್ಗೆ ವೆರಿಫಿಕೇಶನ್ ಮಾಡಬಹುದು.
ಈ ಲೇಖನ ಓದಕ್ಕಾಗಿ ಧನ್ಯವಾದಗಳು ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಸರ್ಕಾರಿ ನೇಮಕಾತಿ ಸರಕಾರಿ ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿಗಳನ್ನು ನೀಡುತ್ತಿವೆ. ಈ ಲೇಖನಿಷ್ಠವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಧನ್ಯವಾದ.
News Source : post office Department
