ಸೌತ್ ಈಸ್ಟರ್ನ್ ರೈಲ್ವೆ ಅಧಿಕಾರಿಗಳು ಇತ್ತೀಚೆಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿಸೂಚನೆಯನ್ನು ಪ್ರಕಟ ಮಾಡಿದ್ದಾರೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅಸಿಸ್ಟೆಂಟ್ ಲೋಕೋ ಪೈಲೆಟ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಇದರ ಪ್ರಕಾರ ಒಟ್ಟು 1202 ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾಭ್ಯಾಸದ ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹೇಳುತ್ತೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ.
ಹುದ್ದೆಗಳ ವಿವರಗಳು :
1. ಅಸಿಸ್ಟೆಂಟ್ ಲೋಕೋ ಪೈಲೆಟ್ 857 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.
2. ಟ್ರೈನ್ ಮ್ಯಾನೇಜರ್ ಒಟ್ಟು 375 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಒಟ್ಟು ಕಾಲಿ ಇರುವ ಹುದ್ದೆಗಳ ಸಂಖ್ಯೆ 1202 ಆಗಿರುತ್ತದೆ.
ವಿದ್ಯಾಭ್ಯಾಸದ ಮಾಹಿತಿಗಳು :
1. ಅಸಿಸ್ಟೆಂಟ್ ಲೋಕೋ ಪೈಲೆಟ್ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ಯಾವುದೇ ವಿಶ್ವವಿದ್ಯಾಲಯದಿಂದ ಎಸ್ ಎಸ್ ಎಲ್ ಸಿ ಶಿಕ್ಷಣ ಮತ್ತು ಐಟಿಐ ಶಿಕ್ಷಣವನ್ನು ಪಾಸ್ ಆಗಿರಬೇಕು. ಪಾಸ್ ಆಗಿರುವ ಅಭ್ಯರ್ಥಿಗಳು ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
2. ಟ್ರೈನ್ ಮ್ಯಾನೇಜರ್ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅಭ್ಯರ್ಥಿಗಳು ಯಾವುದೇ ಅಧಿಕೃತ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಮಂಡಳಿ ಬೋರ್ಡ್ ನಿಂದ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ವಿದ್ಯಾಭ್ಯಾಸ ಹೊಂದಿದ ಅಭ್ಯರ್ಥಿಗಳು ಮಾತ್ರ ಟ್ರೈನ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ವೇತನದ ಮಾಹಿತಿಗಳು :
ಮೊದಲಿಗೆ ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 20,200 ವೇತನವನ್ನು ನೀಡಲಾಗುತ್ತದೆ. ಟ್ರೈನ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 20,200 ವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಅಭ್ಯರ್ಥಿಗಳಿಗೆ ಹೆಚ್ಆರ್ ಐ ಡಿಎ ಇದರ ಜೊತೆ ಬೇರೆ ಸೌಲಭ್ಯಗಳನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ ಮಾಹಿತಿಗಳು :
ರೈಲ್ವೆ ಅಸಿಸ್ಟೆಂಟ್ ಲೋಕೋ ಪೈಲೆಟ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಓಬಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ವಯಸ್ಸಿನ ಮಿತಿಯ ಮಾಹಿತಿಗಳು :
ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಕನಿಷ್ಠ ವಯಸ್ಸು 18 ವರ್ಷ ಆಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ವಯಸ್ಸು 42 ವರ್ಷ ಆಗಿದೆ. ಅರ್ಜಿ ಸಲ್ಲಿಸಲು ಬಯಸುವ ಓಬಿಸಿ ಅಭ್ಯರ್ಥಿಗಳಿಗೆ ಅಂದರೆ 2a ಕೆಟಗರಿ ಟು ಬಿ ಕೆಟಗರಿ 3A ಕೆಟಗರಿ 3B ಕೆಟಗರಿಯ ಅಭ್ಯರ್ಥಿಗಳಿಗೆ 45 ವರ್ಷಗಳವರೆಗೆ ಅರ್ಜಿ ಸಲ್ಲಿಸಲ ಅವಕಾಶ ಇರುತ್ತದೆ. ಇನ್ನು ಅರ್ಜಿ ಸಲ್ಲಿಸಲು ಬಯಸುವ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಗರಿಷ್ಠ 47 ವರ್ಷಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಈ ವಯಸ್ಸಿನ ಮಿತಿಯ ಪ್ರೂಫ್ ಅನ್ನು ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ನಲ್ಲಿ ನೀಡಿರುವ ದಿನಾಂಕದ ಜೊತೆ ಮ್ಯಾಚ್ ಮಾಡುತ್ತಾರೆ.
ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಮೌಖಿಕ ಪರೀಕ್ಷೆಯನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಅಧಿಕೃತ ವೆಬ್ಸೈಟ್ನಲ್ಲಿ ಆಯ್ಕೆ ಆದವರ ಲಿಸ್ಟ್ ಅನ್ನು ಪಬ್ಲಿಶ್ ಮಾಡಲಾಗುತ್ತದೆ.
ಅಭ್ಯರ್ಥಿಗಳಿಗೆ ಮೊದಲಿಗೆ ಕಂಪ್ಯೂಟರ್ ಬೇಸ್ಡ್ ಟೆಸ್ಟ್ ಅನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಡಾಕ್ಯುಮೆಂಟ್ ವೆರಿಫಿಕೇಶನ್ ನಡೆಸಲಾಗುತ್ತದೆ. ಡಾಕ್ಯುಮೆಂಟ್ ವೆರಿಫಿಕೇಶನ್ ಆದ ನಂತರ ಕೊನೆಯ ಹಂತದಲ್ಲಿ ಮೆಡಿಕಲ್ ಎಕ್ಸಾಮಿನೇಷನ್ ನಡೆಸಲಾಗುತ್ತದೆ. ನಂತರ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮೊದಲಿಗೆ ನಡೆಸುವ ಪರೀಕ್ಷೆಯಲ್ಲಿ ಓಬಿಸಿ ಅಭ್ಯರ್ಥಿಗಳು ಕನಿಷ್ಠ 30% ಎಸ್ಸಿ ಅಭ್ಯರ್ಥಿಗಳು ಕನಿಷ್ಠ 30% ಎಸ್ ಟಿ ಅಭ್ಯರ್ಥಿಗಳು ಕನಿಷ್ಠ 25% ಇನ್ನು ಒಳ್ಳೆ ಜನರಲ್ ಮೆರಿಟ್ ಅಭ್ಯರ್ಥಿಗಳು ಕನಿಷ್ಠ 40% ಅಂಕಗಳನ್ನು ಪಡೆಯಬೇಕು.
ಅಭ್ಯರ್ಥಿಗಳಿಗೆ ಈ ಪರೀಕ್ಷೆ ನಡೆಯುವ ಮಾಹಿತಿಯನ್ನು ಅಭ್ಯರ್ಥಿಗಳು ನೀಡಿರುವ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿಗೆ ಸಂಸ್ಥೆಯು ಮಾಹಿತಿಯನ್ನು ನೀಡುತ್ತದೆ. ಈ ಪರೀಕ್ಷೆಯ ಅಭ್ಯರ್ಥಿಗಳು ಹಾಜರಾಗದಿದ್ದರೆ ಅಂತಹ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ ಮತ್ತು ಮತ್ತೊಂದು ಪರೀಕ್ಷೆ ನಡೆಸಲು ಅವಕಾಶ ನೀಡುವುದಿಲ್ಲ. ಅಭ್ಯರ್ಥಿಗಳು ಮೊದಲನೇ ಪರೀಕ್ಷೆಗೆ ಹಾಜರಾಗಲೇಬೇಕು. ಪರೀಕ್ಷೆ ನಡೆಯುವಾಗ ಅಭ್ಯರ್ಥಿಗಳು ಯಾವುದೇ ರೀತಿಯ ಮೊಬೈಲ್ ಕಂಪ್ಯೂಟರ್ ಅಥವಾ ಯಾವುದೇ ರೀತಿ ಎಲೆಕ್ಟ್ರಿಕ್ ಐಟಂ ಪರೀಕ್ಷೆಯ ಒಳಗೆ ಕೊಂಡಯುದನ್ನು ಬ್ಯಾನ್ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಗಳು ಏನಾದರೂ ಚೀಟಿಂಗ್ ಮಾಡುವ ಪ್ರಯತ್ನ ಮಾಡಿದರೆ ಅಂತಹ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಯಿಂದ ಹೊರಗಡೆಲಾಗುತ್ತದೆ.
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಹಾಲ್ ಟಿಕೆಟ್ ಅಡ್ಮಿನ್ ಕಾರ್ಡ್ ನಲ್ಲಿ ನೀಡಲಾಗುತ್ತದೆ. ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ತಮ್ಮ ಹಾಲ್ ಟಿಕೆಟ್ ಅನ್ನು ಡೌನ್ಲೋಡ್ ಮಾಡಬಹುದಾಗಿದೆ. ಅಭ್ಯರ್ಥಿಗಳು ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಬೇಕು. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಾಗ ಹಾಲ್ ಟಿಕೆಟ್ ಬೇಕಾಗುತ್ತದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ಇರುತ್ತದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಗೆ ಪರಿಗಣಿಸುವುದಿಲ್ಲ.
ಅಭ್ಯರ್ಥಿಗಳಿಗೆ ಅರ್ಜಿ ನಮೂನೆಯನ್ನು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಭರ್ತಿ ಮಾಡಲು ಅವಕಾಶ ನೀಡಲಾಗಿದೆ. ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ವಿದ್ಯಾಭ್ಯಾಸ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಯಾವುದೇ ಇನ್ ಕಂಪ್ಲೀಟ್ ಅರ್ಜಿ ನಮೂನೆಯನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳು ತಮ್ಮ ಫೋಟೋವನ್ನು ಅಪ್ಲೋಡ್ ಮಾಡುವಾಗ ಬ್ಯಾಗ್ರೌಂಡ್ ಬಿಳಿ ಬಣ್ಣವನ್ನು ಹೊಂದಿರಬೇಕು. ಬೇರೆ ಬಣ್ಣ ಹೊಂದಿದರೆ ಅಂತಹ ಅಭ್ಯರ್ಥಿಗಳ ಅರ್ಜಿ ನಮೂನೆಯನ್ನು ರಿಜೆಕ್ಟ್ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 12 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ
ನಮ್ಮ ಡೈಲಿ ಕನ್ನಡ ನ್ಯೂಸ್ ವೆಬ್ ಸೈಟ್ ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ನಾವು ನಿಜ ನಿಖರವಾದ ಸುದ್ದಿಗಳನ್ನು ಮಾತ್ರ ಪಬ್ಲಿಶ್ ಮಾಡುತ್ತೇವೆ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಕೇವಲ ಸರ್ಕಾರ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪ್ರಕಟ ಮಾಡುತ್ತೇವೆ. ನಾವು ಯಾವುದೇ ರೀತಿಯ ಜಾಬುಗಳನ್ನು ನೀಡುವುದಿಲ್ಲ. ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಯೇ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸುವುದು ಉತ್ತಮ ಅರ್ಜಿ ಸಲ್ಲಿಸಿದ ನಂತರ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ದಾರರಾಗಿರುವುದಿಲ್ಲ.
ನಮ್ಮ ವೆಬ್ ಸೈಟ್ ನಲ್ಲಿ ಪ್ರತಿದಿನ ಕೇಂದ್ರ ಸರ್ಕಾರದ ಮತ್ತು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯಲ್ಲಿ ಖಾಲಿ ಇರುವ ಹೊಸ ನೇಮಕಾತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಬಹುದು. ಇದರ ಜೊತೆ ಜಾಬ್ ಅಪ್‌ಡೇಟ್ಗಗೆ ನಮ್ಮ ಟೆಲಿಗ್ರಾಂ ಗ್ರೂಪ್ ಮತ್ತು ವಾಟ್ಸಪ್ ಗ್ರೂಪ್ ಅನ್ನು ಜೋಯ್ನ್ ಆಗಬಹುದು ಈ ಲೇಖನ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಧನ್ಯವಾದಗಳು.
