SSC recruitment – SSC ಸ್ಟಾಪ್ ಸೆಲೆಕ್ಷನ್ ಕಮಿಷನ್ ಭರ್ಜರಿ ನೇಮಕಾತಿ 8,326 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಇಂದೇ ಅರ್ಜಿ ಸಲ್ಲಿಸಿ
SSC ಸ್ಟಾಪ್ ಸೆಲೆಕ್ಷನ್ ಕಮಿಷನ್ ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಬೃಹತ್ 8,326 ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ. ಭಾರತದ ವಿವಿಧ ಸ್ಥಳಗಳಲ್ಲಿ ಎಂಟಿಎಸ್ ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹವಾಲ್ದಾರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆ ವಯಸ್ಸಿನ ಮಿತಿ ಅರ್ಜಿ ಸಲ್ಲಿಸುವ ಕ್ರಮ ಮುಂತಾದ ಮಾಹಿತಿಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸುತ್ತೇವೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ.
ಖಾಲಿ ಇರುವ ಹುದ್ದೆಗಳ ವಿವರಗಳು :
- ಮಲ್ಟಿ ಟಾಸ್ಕಿಂಗ್ ಸ್ಟಾಪ್ ಒಟ್ಟು 4,887 ಹುದ್ದೆಗಳು ಖಾಲಿ ಇರುತ್ತದೆ.
- ಹವಾಲ್ದಾರ್ ಒಟ್ಟು 3439 ಕಾಲ ಹುದ್ದೆಗಳು ಇರುತ್ತದೆ.
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಪಡೆಯುತ್ತಾರೆ. ಶೈಕ್ಷಣಿಕ ಅರ್ಹತೆಯ ಸಂಕ್ಷಿಪ್ತ ಮಾಹಿತಿಯನ್ನು ಪಡೆಯಲು ಅಧಿಕೃತ ಅಧಿಸೂಚನೆಯನ್ನು ನೋಡಬಹುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸಿನ ಮಿತಿಯು ಅಧಿಕೃತ ಅಧಿಸೂಚನೆಯಂತೆ 18 ವರ್ಷ ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸಿನ ಮಿತಿಯು 27 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ಅನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಓಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 3 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸದಲಿಕೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ಅನ್ನು ನೀಡಲಾಗಿದೆ.
ಅರ್ಜಿ ಶುಲ್ಕದ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ನಮ್ಮ ಅರ್ಜಿಯನ್ನು ಉಚಿತವಾಗಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ನೂರು ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ .ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ.
ಕರ್ನಾಟಕದಲ್ಲಿ ಟ್ಯಾಕ್ಸ್ ಅಸಿಸ್ಟೆಂಟ್ ಸ್ಟೆನೋಗ್ರಾಫರ್ ಹುದ್ದೆಗಳಿಗೆ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರದ ಹಂತದಲ್ಲೇ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಅಧಿಕೃತ ಅಧಿಸೂಚನೆಯಂತೆ ನೇಮಕಾತಿ ಮಾಡಲಾಗುತ್ತದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು :
- ಅಭ್ಯರ್ಥಿಗಳು ಮೊದಲಿಗೆ ಸ್ಟಾಪ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಇತ್ತೀಚಿಗೆ ಬಿಡುಗಡೆಯಾಗಿರುವ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು.
- ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ತಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಪ್ರಾರಂಭ ಮಾಡಬೇಕು. ಅಭ್ಯರ್ಥಿಗಳು ಅರ್ಜಿ ನಮೂನೆ ಭರ್ತಿ ಮಾಡುವಾಗ ನಿಖರವಾದ ಮಾಹಿತಿಗಳನ್ನು ಮಾತ್ರ ನೀಡಬೇಕು. ಯಾವುದೇ ತಪ್ಪು ಅಥವಾ ಸುಳ್ಳು ಮಾಹಿತಿಗಳನ್ನು ಭರ್ತಿ ಮಾಡಬಾರದು.
- ನಂತರ ಅಭ್ಯರ್ಥಿಗಳು ತಮ್ಮ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಲು ಇರುತ್ತದೆ. ನಂತರ ಕೊನೆಯ ಹಂತದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಸಲ್ಲಿಸಿದ ಮಾಹಿತಿಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಅನ್ನು ಒತ್ತುವ ಮೂಲಕ ಅರ್ಜಿ ನಮೂನೆಯನ್ನು ಸಲ್ಲಿಸಬಹುದು. ನಂತರ ಭವಿಷ್ಯತ್ತಿನ ಉಪಯೋಗಕ್ಕಾಗಿ ಅಭ್ಯರ್ಥಿಗಳು ಅರ್ಜಿ ನಮೂನೆಯ ರೆಫರೆನ್ಸ್ ನಂಬರನ್ನು ನೆನಪಿಟ್ಟುಕೊಳ್ಳಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭ ಆಗಿರುತ್ತದೆ. ಅಭ್ಯರ್ಥಿಗಳಿಗೆ ಆಫ್ ಲೈನ್ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 31 ಆಗಿರುತ್ತದೆ. ಈ ದಿನಾಂಕದಂದು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಜಾಬ್ ಗಳನ್ನು ನೀಡುವುದಿಲ್ಲ. ನಮಗೂ ಸರ್ಕಾರಕ್ಕೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಕೇವಲ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನೀಡುತ್ತೇವೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಮುನ್ನ ನೋಟಿಫಿಕೇಶನ್ ನನ್ನ ಸಂಪೂರ್ಣವಾಗಿ ಓದಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ನಂತರ ಯಾವುದೇ ತೊಂದರೆಗಳನ್ನು ಅನುಭವಿಸಿದರೆ ಅದಕ್ಕೆ ನಾವು ಜವಾಬ್ಧರಾಗಿರುವುದಿಲ್ಲ.
ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜೋಯ್ನ್ ಆಗಬಹುದು ಈ ಲೇಖನ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ ಈ ಲೇಖನ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಧನ್ಯವಾದಗಳು.
