ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ – UIDAI recruitment
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ – UIDAI recruitment – ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಆಧಾರ್ ಸಂಸ್ಥೆಯು ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕ ಸ್ಥಳದಲ್ಲಿ ಸಹಾಯಕ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಹೊಸ ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 3 ಆಗಿರುತ್ತದೆ. ಈ ದಿನಾಂಕದ ಮುನ್ನ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ನಾವು ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸುತ್ತೇವೆ.
ಸಂಸ್ಥೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಖಾಸಗಿ ಕಾರ್ಯದರ್ಶಿ ಒಟ್ಟು ಒಂದು ಹುದ್ದೆಗಳು, ಸಹಾಯಕ ಲೆಕ್ಕಾಧಿಕಾರಿ ಒಟ್ಟು ಒಂದು ಹುದ್ದೆಗಳು, ಸಹಾಯಕ ತಾಂತ್ರಿಕ ಅಧಿಕಾರಿ ಒಟ್ಟು ನಾಲ್ಕು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ಯಾವುದೇ ವಿಶ್ವವಿದ್ಯಾಲಯದಿಂದ ಸಿಎ, ಪದವಿ, ಎಂಬಿಎ, ಸ್ತಾತಕೋತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಹಾಯಕ ಖಾತ್ಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಿಎ, ವೆಚ್ಚ ಲೆಕ್ಕಾಧಿಕಾರಿ, ಎಂಬಿಎ ಶಿಕ್ಷಣವನ್ನು ಹೊಂದಿರಬೇಕು. ಸಹಾಯಕ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ ಹೊಂದಿರಬೇಕು.
ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನಿಷ್ಠ 35 ಸಾವಿರದಿಂದ ಗರಿಷ್ಠ ಒಂದು ಲಕ್ಷದವರೆಗೆ ವೇತನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳ ಅನುಸಾರ ವೇತನವನ್ನು ನಿಗದಿಪಡಿಸಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಗರಿಷ್ಠ ವಯಸ್ಸಿನ ಮಿತಿ 56 ವರ್ಷ ಆಗಿದೆ. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳಿವೆ ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯನ್ನು ಕೊನೆಯಲ್ಲಿ ನೀಡಿದ್ದೇವೆ. ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ನೇರ ನೇಮಕಾತಿ – WCD recruitment
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ – UIDAI recruitment ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಸಂಸ್ಥೆಗೆ ಅರ್ಜಿ ಸಲ್ಲಿಸುವ ಕ್ರಮಗಳು ಈ ಕೆಳಗಿನಂತಿವೆ :
- ಅಭ್ಯರ್ಥಿಗಳು ಮೊದಲು ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಮೊದಲಿಗೆ ಸಂಪೂರ್ಣ ಮಾಹಿತಿಯನ್ನು ಪಡೆಯಬೇಕು. ನಂತರ ಮುಂದಿನ ಹಂತದಲ್ಲಿ ಅಭ್ಯರ್ಥಿಗಳಿಗೆ ಅರ್ಜಿ ನಮೂನೆಯ ಫಾರ್ಮನ್ನು ಡೌನ್ಲೋಡ್ ಮಾಡಲು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಲಿಂಕ್ ಕೆಳಗೆ ನೀಡಲಾಗಿದೆ.
- ಅಭ್ಯರ್ಥಿಗಳು ಅಧಿಕೃತ ಅಧಿ ಸೂಚನೆಯಲ್ಲಿ ನೀಡಿರುವಂತೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಗಳಿಗೆ ಅರ್ಜಿ ನಮೂನೆ ಭರ್ತಿ ಮಾಡುವಾಗ ತಮ್ಮ ವೈಯಕ್ತಿಕ ಮಾಹಿತಿ ಶೈಕ್ಷಣಿಕ ಮಾಹಿತಿ ಅನುಭವದ ಮಾಹಿತಿ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡಲು ಇರುತ್ತದೆ. ಅಭ್ಯರ್ಥಿಗಳು ಯಾವುದೇ ತಪ್ಪು ಮಾಡದೆ ಅರ್ಜಿ ನಮೂನೆ ಭರ್ತಿ ಮಾಡಬೇಕು.
- ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯ ಜೊತೆ ಬೇಕಾಗಿರುವಾಗ ಅಗತ್ಯ ದಾಖಲೆಗಳನ್ನು ಟ್ಯಾಗ್ ಮಾಡಿ ಕೊರಿಯರ್ ಮೂಲಕ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಿಕೊಡಬೇಕು ವಿಳಾಸವನ್ನು ಕೆಳಗೆ ನೀಡಿದ್ದೇವೆ ನೋಡಿ.
- ಅಭ್ಯರ್ಥಿಗಳಿಗೆ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿ ನಮೂನೆಯ ಜೊತೆ ಬೇಕಾಗಿರುವ ಅಗತ್ಯ ದಾಖಲೆಗಳನ್ನು ಕೊರಿಯರ್ ಮೂಲಕ ಕಳುಹಿಸಿಕೊಡಬೇಕು. ನಿರ್ದೇಶಕರು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಆಧಾರ್ ಕಾಂಪ್ಲೆಕ್ಸ್ ಏನ್ ಟಿ ಐ ಲೇಔಟ್ ಟಾಟಾ ನಗರ ಕೋಡಿಗೆಹಳ್ಳಿ ಟೆಕ್ನಾಲಜಿ ಸೆಂಟರ್ ಬೆಂಗಳೂರು 560 92 ಈ ವಿಳಾಸಕ್ಕೆ ಕಳುಹಿಸಿಕೊಡಬೇಕು.
- ಅಭ್ಯರ್ಥಿಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜನವರಿ ಮೂರರವರೆಗೆ ವಿಸ್ತರಿಸಲಾಗಿದೆ. ಈ ದಿನಾಂಕದ ಮುನ್ನ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ ನೀಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿರುವ ಎಲ್ಲಾ ಅಗತ್ಯ ಎಲ್ಜಿಬಲ್ ಇದ್ದೀರಾ ಎಂಬುದನ್ನು ಪರಿಶೀಲಿಸಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಅರ್ಜಿ ನಮೂನೆ ಭರ್ತಿ ಮಾಡುವಾಗ ಯಾವುದೇ ತಪ್ಪು ಅಥವಾ ಸುಳ್ಳು ಮಾಹಿತಿಗಳನ್ನು ಭರ್ತಿ ಮಾಡಿದರೆ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಮತ್ತು ಅಂಥವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.
- ಅರ್ಜಿ ಸಲ್ಲಿಸಿದ ಸೂಕ್ತ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಪಾಲ್ಗೊಳ್ಳಲು ಮಾಹಿತಿಯನ್ನು ತಿಳಿಸುತ್ತದೆ. ನೇರ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂಸ್ಥೆಯಾ ಅಧಿಕೃತ ಅಧಿ ಸೂಚನೆಯಂತೆ ನೇಮಕಾತಿ ಮಾಡಲಾಗುತ್ತದೆ.
ನಮ್ಮ ಡೈಲಿ ಕನ್ನಡ ನ್ಯೂಸ್ ನಲ್ಲಿ ನಾವು ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಾವು ನೀಡುವ ಮಾಹಿತಿಗಳು ನಿಖರವಾಗಿರುತ್ತದೆ. ಯಾವುದೇ ರೀತಿಯ ಗೊಂದಲವಿದ್ದರೆ ನಮ್ಮನ್ನು ಸಂಪರ್ಕಿಸಬಹುದು. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಸರ್ಕಾರಿ ಜಾಬ್ ಅಪ್ಡೇಟ್ಗಳು, ವಿದ್ಯಾಭ್ಯಾಸ, ವಿದ್ಯಾರ್ಥಿ ವೇತನ, ವ್ಯಾಪಾರ ಮುಂತಾದ ಮಾಹಿತಿಗಳ ಬಗ್ಗೆ ನೀಡುತ್ತೇವೆ. ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜೋಯ್ನಾಗಿ ಧನ್ಯವಾದಗಳು.
ನೋಟಿಫಿಕೇಶನ್ PDF : UIDAI-Notification-aPPLICATION-FORM (1)