ಗ್ರಾಮ ಆಡಳಿತ ನೇಮಕಾತಿ – VA recruitment 2024
ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಕರ್ನಾಟಕ ಸರ್ಕಾರದ ಹೊಸ ಅಧಿ ಸೂಚನೆಯ ಕುರಿತು ಮಾಹಿತಿಯನ್ನು ನೀಡುತ್ತೇವೆ. ಕರ್ನಾಟಕ ಪರೀಕ್ಷಾ ಅಧಿಕಾರ ಬಿಡುಗಡೆ ಮಾಡಿರುವ ಒಂದು ಸಾವಿರ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ಅವಕಾಶ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿ ನಾವು ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಆದ್ದರಿಂದ ಕೊನೆಯವರೆಗೆ ಓದಿ. ಕರ್ನಾಟಕ ಸರ್ಕಾರವು ವಿವಿಧ ಜಿಲ್ಲೆಗಳಲ್ಲಿ ಒಟ್ಟು ರೂ.1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿತ್ತು. ಅಧಿಕೃತ ಅಧಿಸೂಚನೆಯಂತೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ವಿಲೇಜ್ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಇದಕ್ಕೆ ಸಮನಾದ ಶಿಕ್ಷಣವನ್ನು ಯಾವುದೇ ಅಧಿಕೃತ ವಿಶ್ವವಿದ್ಯಾಲಯದ ಮಂಡಳಿಯಿಂದ ಪಡೆದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಯಾವುದೇ ಡಿಪ್ಲೋಮಾ ಮಾಡಿದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಎರಡು ವರ್ಷ ಐಟಿಐ ಶಿಕ್ಷಣ ಕೋರ್ಸ್ ಮುಗಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆದರೆ ಐಟಿಐ ಅಭ್ಯರ್ಥಿಗಳು NOC ಸರ್ಟಿಫಿಕೇಟ್ ಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು :
ಸಂಸ್ಥೆ ಬಿಡುಗಡೆ ಮಾಡಿದ ಅಧಿಕೃತ ಅಧಿ ಸೂಚನೆಯಂತೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರುತ್ತದೆ ಮತ್ತು ಗರಿಷ್ಠ ವಯಸ್ಸು 35 ವರ್ಷ ಆಗಿದೆ. ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ಅನ್ನು ನೀಡಲಾಗಿದೆ. ಪ್ರವರ್ಗ 2a 2b 383 ಬಿ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸು 38 ವರ್ಷ ಆಗಿದೆ. ಇನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸು 40 ವರ್ಷ ಆಗಿದೆ. ಈ ವಯಸ್ಸಿನ ಒಳಗಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಲ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 4/05/2024 ಆಗಿರುತ್ತದೆ. ಈ ದಿನಾಂಕದ ಮುನ್ನ ಅರ್ಜಿಯನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ 5 ಮೇ ಆಗಿರುತ್ತದೆ. ಅಭ್ಯರ್ಥಿಗಳ ಆನ್ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವಾಗ ನೀಡಲಾಗಿರುವ ಎಲ್ಲಾ ಸೂಚನೆಗಳನ್ನು ಸರಿಯಾಗಿ ಓದಿ ನಂತರವೇ ಅರ್ಜಿಯನ್ನು ಸಲ್ಲಿಸಿ ಯಾವುದೇ ತಪ್ಪು ಅಥವಾ ಸುಳ್ಳು ಮಾಹಿತಿಗಳನ್ನು ನೀಡಿದರೆ ಅಂತಹ ಅರ್ಜಿಯನ್ನು ರದ್ದುಗೊಳಿಸಲಾಗುವುದು.
ಅರ್ಜಿ ಶುಲ್ಕದ ಮಾಹಿತಿಗಳು :
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ಅಭ್ಯರ್ಥಿಗಳಿಗೆ ಅಂದರೆ ಪ್ರವರ್ಗ 2a 2b ತ್ರೀ ಎ ತ್ರಿ ಬಿ ಅಭ್ಯರ್ಥಿಗಳಿಗೆ ಗರಿಷ್ಠ 250 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಇನ್ನು ಉಳಿದ ಅಭ್ಯರ್ಥಿಗಳು ಅಂದರೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ಮಾಜಿ ಸೈನಿಕರು ಅಥವಾ ವಿಕಲಚೇತನ ಅಭ್ಯರ್ಥಿಗಳಿಗೆ ಗರಿಷ್ಠ 500 ರೂಪಾಯಿಗಳ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಒಂದು ಬಾರಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿದರೆ ಅರ್ಜಿ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. ವಿಶೇಷ ಸೂಚನೆ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. ಶೇಖಡ 40ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವವರು ಅದಕ್ಕೆ ಸಂಬಂಧಿಸಿದ ಪ್ರಮಾಣ ಪತ್ರ ಹೊಂದಿದಲ್ಲಿ ಶುಲ್ಕ ವಿನಾಯಿತಿಯನ್ನು ಪಡೆಯಬಹುದಾಗಿದೆ.
ಸ್ಪರ್ಧಾತ್ಮಕ ಪರೀಕ್ಷಾ ವಿಧಾನ :
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಆಫ್ಲೈನ್ ಓ ಎಂ ಆರ್ ಟೈಪ್ ಮೂಲಕ ಆಫ್ ಲೈನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪರೀಕ್ಷೆಯನ್ನು ಪ್ರವೇಶ ಪಡೆಯಲು ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ ನಿಂದ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಬಹುದಾಗಿದೆ. ಈ ಪರೀಕ್ಷೆಯನ್ನು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ ಪ್ರವೇಶವನ್ನು ಪಡೆಯಲು ಅಭ್ಯರ್ಥಿಗಳು ಯಾವುದಾದರೂ ಒಂದು ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರಗಳಿಗೆ ತೆಗೆದುಕೊಂಡು ಹೋಗಿ ಪ್ರವೇಶವನ್ನು ಪಡೆಯಬಹುದು. ಒಂದು ವೇಳೆ ಗುರುತಿನ ಚೀಟಿ ಇಲ್ಲವಾದರೆ ಅಂತಹ ಅಭ್ಯರ್ಥಿಗಳನ್ನು ಪ್ರವೇಶ ಮಾಡಲು ಅನುಮತಿ ನೀಡಲಾಗುವುದಿಲ್ಲ.
ಕನ್ನಡ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ :
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳನ್ನು ಹೊಂದಿರುತ್ತದೆ. ಈ ಪರೀಕ್ಷೆಯಲ್ಲಿ ಕನಿಷ್ಠ ಇವತ್ತು ಅಂಕಗಳನ್ನು ಅಭ್ಯರ್ಥಿಗಳು ಪಡೆಯಲೇಬೇಕು ಕನಿಷ್ಠ ಅಂಕ ಪಡೆಯದ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸುವುದಿಲ್ಲ.
ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತಾ ಷರತ್ತುಗಳು :
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತದ ನಾಗರಿಕರಾಗಿರಬೇಕು
- ಒಂದು ಪತ್ನಿಗಿಂತ ಹೆಚ್ಚು ಮನೀ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿಗಳು ನೇಮಕಾತಿಗೆ ಅರ್ಹ ಇರುವುದಿಲ್ಲ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಂಪೂರ್ಣ ಆರೋಗ್ಯವಂತರಾಗಿರಬೇಕು.
- ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಯಾವುದೇ ವಿಶ್ವವಿದ್ಯಾನಿಲಯಗಳಿಂದ ಪರೀಕ್ಷೆಗಳಲ್ಲಿ ಡಿಬಾರ್ ಆಗಿರುವ ಯಾವುದೇ ವ್ಯಕ್ತಿಗಳು ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಅರ್ಹ ಇರುವುದಿಲ್ಲ.
- ಜಾತಿ ಮೀಸಲಾತಿ ಅಥವಾ ಮಾಜಿ ಸೈನಿಕ ಗ್ರಾಮೀಣ ಅಭ್ಯರ್ಥಿ ಕನ್ನಡ ಮಾಧ್ಯಮ ಅಭ್ಯರ್ಥಿ ವಿಕಲಚೇತನ ಅಭ್ಯರ್ಥಿ ಹೈದರಾಬಾದ್ ಕರ್ನಾಟಕ ಅಭ್ಯರ್ಥಿ ತೃತೀಯ ಲಿಂಗ ಅಭ್ಯರ್ಥಿಗಳು ಮೀಸಲಾತಿಯನ್ನು ಪಡೆಯಲು ಪ್ರಮಾಣ ಪತ್ರವನ್ನು ಹೊಂದಿರಬೇಕು. ವೆರಿಫಿಕೇಶನ್ ಮಾಡುವ ಸಮಯದಲ್ಲಿ ಯಾವುದೇ ಪ್ರಮಾಣಪತ್ರವನ್ನು ನೀಡದಿದ್ದರೆ ಅಂತಹ ಅಭ್ಯರ್ಥಿಗಳನ್ನು ಅಭ್ಯರ್ಥಿಗಳಿಂದ ಅನರ್ಹ ಅಭ್ಯರ್ಥಿಗಳೆಂದು ಪರಿಗಣಿಸಲಾಗುತ್ತದೆ.
ಜಿಲ್ಲಾ ಹುದ್ದೆಗಳ ವಿವರಗಳು :
- ಬೆಂಗಳೂರು ನಗರ
- 32ಬೆಂಗಳೂರು ಗ್ರಾಮಾಂತರ ೩೪
- ಚಿತ್ರದುರ್ಗ 32
- ಕೋಲಾರ 45
- ತುಮಕೂರು 73
- ರಾಮನಗರ 51
- ಚಿಕ್ಕಬಳ್ಳಾಪುರ 42
- ಶಿವಮೊಗ್ಗ 31
- ಮೈಸೂರು 66
- ಚಾಮರಾಜನಗರ ೫೫
- ಮಂಡ್ಯ 60
- ಹಾಸನ 54
- ಚಿಕ್ಕಮಂಗಳೂರು 23
- ಕೊಡಗು 6
- ಉಡುಪಿ 22
- ದಕ್ಷಿಣ ಕನ್ನಡ 50
- ಬೆಳಗಾವಿ 64
- ವಿಜಯನಗರ 7
- ಬಾಗಲಕೋಟೆ 22
- ಧಾರವಾಡ 12
- ಗದಗ 30
- ಹಾವೇರಿ 34
- ಉತ್ತರ ಕನ್ನಡ 2
- ಕೊಪ್ಪಳ 3
- ಬಳ್ಳಾರಿ 3
- ಬೀದರ್ 5
- ಯಾದಗಿರಿ 8
- ವಿಜಯನಗರ 3
ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ ಹುದ್ದೆಗಳ ಸಂಖ್ಯೆಗಳು :
- ಕಲ್ಬುರ್ಗಿ 67
- ರಾಯಚೂರು 4
- ಕೊಪ್ಪಳ 16
- ಬಳ್ಳಾರಿ 14
- ಬೀದರ್ 19
- ಯಾದಗಿರಿ 1
- ವಿಜಯನಗರ 10
ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಗಳ ಅನುಭವಿಸಿದರೆ ಕೇಂದ್ರ ಕಚೇರಿಯ ಫೋನ್ ನಂಬರಿಗೆ ಸಹಾಯ ಪಡೆಯಬಹುದು. ಸಹಾಯವಾಣಿ ನಂಬರ್ 080-23460460 ಆಗಿದೆ. ಅಭ್ಯರ್ಥಿಗಳ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವುದೇ ತಪ್ಪುಗಳನ್ನು ಮಾಡಬಾರದು ಯಾವುದೇ ತಪ್ಪು ಮಾಹಿತಿ ನೀಡಿದರೆ ಅಭ್ಯರ್ಥಿಗಳಿಗೆ ಎಡಿಟ್ ಮಾಡಲು ಸಾಧ್ಯವಾಗುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋ ಮತ್ತು ಸಿಗ್ನೇಚರ್ ಫೋಟೋವನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡುವಾಗ ತೊಂದರೆಗಳ ಅನುಭವಿಸಿದರೆ ಅಧಿಕೃತ ಸಂಸ್ಥೆಯ ಸಹಾಯವಾಣಿಯ ಸಹಾಯವನ್ನು ಪಡೆಯಬಹುದಾಗಿದೆ.
ಅಭ್ಯರ್ಥಿಗಳು ವೆರಿಫಿಕೇಶನ್ ಮಾಡುವ ಸಮಯದಲ್ಲಿ ತಮ್ಮ ಆಧಾರ್ ಕಾರ್ಡ್ ಮಾಹಿತಿಯನ್ನು ನೀಡಬೇಕಾಗುತ್ತದೆ. ತಮ್ಮ ವಿದ್ಯಾಭ್ಯಾಸದ ಎಲ್ಲಾ ಸೆಮಿಸ್ಟರ್ಗಳ ಅಂಕಪಟ್ಟಿ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಒಂದು ವೇಳೆ ಮೀಸಲಾತಿಯನ್ನು ಪಡೆಯುವುದಿದ್ದರೆ ಮೀಸಲಾತಿಯ ಪ್ರಮಾಣ ಪತ್ರಗಳು ಕನ್ನಡ ಮಾಧ್ಯಮ ಅಥವಾ ಗ್ರಾಮೀಣ ಮೀಸಲಾತಿ ಪ್ರಮಾಣ ಪತ್ರಗಳು ನೀಡಬೇಕಾಗುತ್ತದೆ. ಅಭ್ಯರ್ಥಿಗಳ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ನೀಡಿರುವ ಮಾಹಿತಿಗಳು ಮಿಸ್ ಮ್ಯಾಚ್ ಆದಲ್ಲಿ ಅಂತಹ ಅರ್ಜಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಆನ್ಲೈನ್ ಫಾರ್ ಮತ್ತು ಅರ್ಜಿ ಶುಲ್ಕದ ಚಲನನ್ನು ಪ್ರಕ್ರಿಯೆ ಮುಗಿಯವರೆಗೆ ಭದ್ರವಾಗಿ ತಮ್ಮ ಬಳಿ ಇಟ್ಟುಕೊಳ್ಳಿ.
ಹೆಚ್ಚಿನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿದ್ದ ನಂತರ ಕೆಲವು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಅಂತವರಿಗೆ ಪರೀಕ್ಷಾ ಪ್ರಾಧಿಕಾರ ಸಂಸ್ಥೆಯ ತನ್ನ ಸಹಾಯವಾಣಿಯ ಹೊಸ ಈ ಮೇಲಿನ ಇಮೇಲ್ ಐಡಿ ಅನ್ನು ಪ್ರಕಟ ಮಾಡಿದೆ. ಈ ಇಮೇಲ್ ಐಡಿಗೆ ಇಮೇಲ್ ಮಾಡಿ ಅಭ್ಯರ್ಥಿಗಳು ಸಹಾಯವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೆಲವೇ ದಿನಗಳಿಗೆ ಉಳಿದಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಅದಕ್ಕಿಂತ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸುವುದು ಉತ್ತಮ. ಏಕೆಂದರೆ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಸರ್ವರ್ ಡೌನ್ ಸಮಸ್ಯೆಗಳನ್ನು ಏನು ಅನುಭವಿಸಬೇಕಾಗುತ್ತದೆ. ಆದ್ದರಿಂದ ಆಸಕ್ತರು ಆದಷ್ಟು ಬೇಗ ತಮ್ಮ ಅರ್ಜಿಯನ್ನು ಸಲ್ಲಿಸಿ.
ನಮ್ಮ ಡೈಲಿ ಕನ್ನಡ ನ್ಯೂಸ್ ಚಾನೆಲ್ ನಲ್ಲಿ ನಾವು ಯಾವುದೇ ರೀತಿಯ ಫೇಕ್ ಸುಳ್ಳು ಸುದ್ದಿಗಳನ್ನು ಪ್ರಕಟ ಮಾಡುವುದಿಲ್ಲ. ನಾವು ಅಧಿಕೃತ ಮಾಹಿತಿಯನ್ನು ಮಾತ್ರ ನಮ್ಮ ವೆಬ್ಸೈಟ್ನಲ್ಲಿ ಪಬ್ಲಿಶ್ ಮಾಡುತ್ತೇವೆ. ನಮಗೂ ಸರ್ಕಾರಗೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ. ನಾವು ಕೇವಲ ಸರಕಾರ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಮಾತ್ರ ನಿಮಗೆ ನೀಡುತ್ತೇವೆ. ನಾವು ಯಾವುದೇ ರೀತಿಯ ಜಾಬ್ ಗಳನ್ನು ನೀಡುವುದಿಲ್ಲ. ಸರ್ಕಾರ ಬಿಡುಗಡೆ ಮಾಡಿರುವ ನೋಟಿಫಿಕೇಶನ್ ನ ಮಾಹಿತಿಗಳನ್ನು ಮಾತ್ರ ನೀಡುತ್ತೇವೆ. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಹುದ್ದೆಗಳ ಬಗ್ಗೆ ಗೊಂದಲವಿದ್ದರೆ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬಹುದು.
ಈ ಲೇಖನ ಓದಿದಕ್ಕಾಗಿ ಧನ್ಯವಾದಗಳು. ನಮ್ಮ ಈ ಚಾನಲಿನಲ್ಲಿ ನಾವು ಪ್ರತಿದಿನ ಸರ್ಕಾರಿ ಯೋಜನೆಗಳ ಸರ್ಕಾರಿ ಉದ್ಯೋಗ ಮಾಹಿತಿಗಳನ್ನು ನೀಡುತ್ತೇವೆ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ಬಯಸುವ ಅಭ್ಯರ್ಥಿಗಳು ನಮ್ಮ telegram ಗ್ರೂಪ್ ಅನ್ನು ಜೋಯ್ನ್ ಆಗಬಹುದು ಇದರ ಮೂಲಕ ಪ್ರತಿದಿನ ಪಡೆಯಬಹುದಾಗಿದೆ ಧನ್ಯವಾದಗಳು.
News source : KEA Department
