ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ನೇರ ನೇಮಕಾತಿ – WCD recruitment
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ನೇರ ನೇಮಕಾತಿ – WCD recruitment : ಡೈಲಿ ಕನ್ನಡ ನ್ಯೂಸ್ ಚಾನೆಲ್ ಗೆ ಸ್ವಾಗತ. ಇತ್ತೀಚಿಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ ಹೊಸ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಹೊಸ ಅಧಿಕೃತ ಅಧಿಸೂಚನೆಯ ಪ್ರಕಾರ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 27 ಆಗಿರುತ್ತದೆ. ಈ ದಿನಾಂಕದ ಮುನ್ನ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಈ ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ.
ADS :

ಸಂಸ್ಥೆ ತಿಳಿಸಿದಂತೆ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಅಥವಾ ಪಿಯುಸಿ ಶಿಕ್ಷಣವನ್ನು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು. ಒಟ್ಟು 207 ಖಾಲಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಉದ್ಯೋಗ ಸ್ಥಳ ಚಾಮರಾಜನಗರ ಆಗಿರುತ್ತದೆ. ಹುದ್ದೆಗಳನ್ನುಸರ ಬೇಕಾಗಿರುವ ಶೈಕ್ಷಣಿಕ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದಾಗಿದೆ.
WCD recruitment ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶ ನೀಡಲಾಗಿದೆ ಅರ್ಜಿ ಸಲ್ಲಿಸಲು ಬಯಸುವ ಮಹಿಳಾ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿಯು 19 ವರ್ಷ ಆಗಿರಬೇಕು ಮತ್ತು ಗರಿಷ್ಠ ವಯಸ್ಸಿನ ಮಿತಿಯು 35 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಜಾತಿ ಅನುಸಾರವಾಗಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳಿಗೆ ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆಗಳು ಇರುವುದಿಲ್ಲ. ಮೆರಿಟ್ ಪಟ್ಟಿ ಮೂಲಕ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಲಾಗುತ್ತದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ. WCD recruitment ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೆ. ತಿಂಗಳು ನವೆಂಬರ್ 27 ಆಗಿರುತ್ತದೆ. ಆಸಕ್ತರು ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕ್ರಮಗಳು :
- WCD recruitment ಮೊದಲಿಗೆ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಇತ್ತೀಚಿಗೆ ಬಿಡುಗಡೆಯಾಗಿರುವ ಅಧಿಕೃತ ಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಪ್ರಾರಂಭ ಮಾಡಬೇಕು.
- ಅಭ್ಯರ್ಥಿಗಳಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ತಮ್ಮ ವೈಯಕ್ತಿಕ ವಿವರ ಸಂಖ್ಯೆ ತಮ್ಮ ವಿಳಾಸ ಮುಂತಾದ ಮಾಹಿತಿಗಳನ್ನು ಭರ್ತಿ ಮಾಡಲು ಇರುತ್ತದೆ. ಭರ್ತಿ ಮಾಡುವಾಗ ಯಾವುದೇ ತಪ್ಪುಗಳನ್ನು ಮಾಡದೆ ಬರ್ತಿ ಮಾಡಬೇಕು.
- ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಬೇಕಾಗಿರುವ ಅಗತ್ಯ ದಾಖಲೆಗಳ ಪಿಡಿಎಫ್ ಅನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
- ಅಭ್ಯರ್ಥಿಗಳ ಗಮನಕ್ಕೆ ಚಾಮರಾಜನಗರ ಜಿಲ್ಲೆಯ ಲೋಕಲ್ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಬೇರೆ ಸ್ಥಳಗಳಿಂದ ಅರ್ಜಿಗಳನ್ನು ಸಲ್ಲಿಸಿದರೆ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅಂತಹ ಅರ್ಜಿಗಳನ್ನು ರಿಜೆಕ್ಟ್ ಮಾಡಲಾಗುತ್ತದೆ. ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಉದ್ಯೋಗ ಸ್ಥಳದಲ್ಲಿ ಬರುವ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲ ಅವಕಾಶ ಇರುತ್ತದೆ.
- ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವಾಗ ವಾಸಸ್ಥಳ ದೃಢೀಕರಣ ಪತ್ರವನ್ನು ಅಪ್ಲೋಡ್ ಮಾಡಲು ಇರುತ್ತದೆ. ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿ ಸೂಚನೆಯ ಪಿಡಿಎಫ್ ಅನ್ನು ಓದಬಹುದು ಮತ್ತು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಗೊತ್ತಿಲ್ಲದ ಅಭ್ಯರ್ಥಿಗಳು ಹತ್ತಿರದ ಸೈಬರ್ ಸೆಂಟರ್ ಗಳಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೊನೆಯ ಹಂತದಲ್ಲಿ ಎಲ್ಲಾ ಮಾಹಿತಿಗಳು ಸರಿಯಾಗಿದ್ದರೆ ಸಬ್ಮಿಟ್ ಬಟನ್ ಅನ್ನು ಒತ್ತುವ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಿ ಕೊನೆಯ ಹಂತದಲ್ಲಿ ಅರ್ಜಿ ನಮೂನೆ ಯಾ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಬೇಕು ಈ ರೀತಿಯಾಗಿ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ ಧನ್ಯವಾದಗಳು.
KLA ನೇಮಕಾತಿ ಕರ್ನಾಟಕ – KLA recruitment Karnataka
ಡೈಲಿ ಕನ್ನಡ ನ್ಯೂಸ್ ಯಾವುದೇ ರೀತಿಯ ಸುಳ್ಳುಗಳನ್ನು ಪಬ್ಲಿಶ್ ಮಾಡುವುದಿಲ್ಲ. ನಮ್ಮ ವೆಬ್ಸೈಟ್ನಲ್ಲಿ ಬರುವ ಎಲ್ಲಾ ಸುದ್ದಿಗಳು ನಿಖರವಾಗಿರುತ್ತದೆ. ಯಾವುದೇ ರೀತಿಯ ಗೊಂದಲವಿದ್ದರೆ ನಮ್ಮನ್ನು ಸಂಪರ್ಕಿಸಬಹುದು. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ ಸರ್ಕಾರಿ ಹುದ್ದೆಗಳ ಮಾಹಿತಿ ವಿದ್ಯಾಭ್ಯಾಸ, ವಿದ್ಯಾರ್ಥಿ ವೇತನ, ವ್ಯಾಪಾರ ಮುಂತಾದ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿಗಳನ್ನು ನೀಡುತ್ತೇವೆ. ಈ ಲೇಖನ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಿ ಧನ್ಯವಾದಗಳು.

