ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ನೇಮಕಾತಿ | WCD Recruitment 2025 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕರ್ನಾಟಕದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿರುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 579 ಖಾಲಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 16 ಆಗಿರುತ್ತದೆ. ಈ ದಿನಾಂಕದ ಮುನ್ನ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ.
ಖಾಲಿ ಇರುವ ಹುದ್ದೆಗಳ ವಿವರಗಳು :
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಉದ್ಯೋಗ ಸ್ಥಳ ಬೆಳಗಾವಿ ಆಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಜಿಲ್ಲಾವಾರು ಸ್ಥಳದ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅಲ್ಲಿ ನೋಡಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
- WCD Recruitment 2025 ಈ ಮೇಲಿನ ಹುದ್ದೆಗಳಿಗೆ ಅಂದರೆ ಮಂಗಳವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಾವಕಾಶ ಪಡೆಯುತ್ತಾರೆ.
- ಇನ್ನು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣ ಹೊಂದಿರಬೇಕು ಎಸ್ ಎಸ್ ಎಲ್ ಸಿ ಶಿಕ್ಷಣ ಪಾಸಾದ ಅಭ್ಯರ್ಥಿಗಳು ಮಾತ್ರ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲ ಅವಕಾಶ ಪಡೆಯುತ್ತಾರೆ.
ವಯಸ್ಸಿನ ಮಿತಿ :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಹೊಸ ನೋಟಿಫಿಕೇಶನ್ ಪ್ರಕಾರ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿಯು 19 ವರ್ಷ ಆಗಿರುತ್ತದೆ ಮತ್ತು ಗರಿಷ್ಠ ವಯಸ್ಸು 35 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳಿಗೆ ಮಾತ್ರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲ ಅವಕಾಶ ಇರುತ್ತದೆ.
ಅರ್ಜಿ ಶುಲ್ಕದ ಮಾಹಿತಿಗಳು :
ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಸರ್ಕಾರಿ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ಅರ್ಜಿ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆಗಳು ಇರುವುದಿಲ್ಲ. ಅಭ್ಯರ್ಥಿಗಳ ಮೆರಿಟ್ ಪಟ್ಟಿಯ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಬೆಳಗಾವಿ ಅಂಗನವಾಡಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು : WCD Recruitment 2025
- ಮೊದಲಿಗೆ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ಮಾಡಬೇಕು.
- ಅರ್ಜಿ ಸಲ್ಲಿಸುವಾಗ ಶೈಕ್ಷಣಿಕ ಮಾಹಿತಿ ವೈಯಕ್ತಿಕ ಮಾಹಿತಿ ಮೊಬೈಲ್ ನಂಬರ್ ಇಮೇಲ್ ಐಡಿ ಮುಂತಾದ ಮಾಹಿತಿಗಳನ್ನು ಕೇಳಲಾಗುತ್ತದೆ ಅಭ್ಯರ್ಥಿಗಳು ಯಾವುದೇ ತಪ್ಪುಗಳನ್ನು ಮಾಡದೆ ಈ ಮಾಹಿತಿಗಳನ್ನು ಆನ್ಲೈನ್ ಮೂಲಕ ಭರ್ತಿ ಮಾಡಬೇಕು.
- ನಂತರ ಮುಂದಿನ ಹಂತದಲ್ಲಿ ಬೇಕಾಗಿರುವ ಡಾಕ್ಯುಮೆಂಟ್ ಗಳನ್ನು ಅಪ್ಲೋಡ್ ಮಾಡಲು ಇರುತ್ತದೆ.
- ನಂತರ ಕೊನೆಯ ಹಂತದಲ್ಲಿ ನೀಡಿರುವ ಎಲ್ಲಾ ಮಾಹಿತಿಗಳು ಸರಿ ಇದ್ದರೆ ಆಪ್ಲೈ ಬಟನ್ ಕ್ಲಿಕ್ ಮಾಡುವ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು:
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ. ಅಂಗನವಾಡಿ ನೇಮಕಾತಿ ಬೆಳಗಾವಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 16 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
